ಬ್ರಿಕ್ಸ್ ಶೃಂಗಸಭೆಯಲ್ಲಿ ಪಾಕ್‌ ವಿರುದ್ಧ ಮೋದಿ ಕಟು ವಾಗ್ದಾಳಿ – ಬುದ್ಧನ ಶಾಂತಿ ತತ್ವ ಪ್ರತಿಪಾದಿಸಿದ ಪ್ರಧಾನಿ

Public TV
3 Min Read

ಬ್ರೆಸಿಲಿಯಾ: ರಿಯೊ ಡಿ ಜನೈರೊದಲ್ಲಿ ನಡೆದ 17ನೇ ಬ್ರಿಕ್ಸ್ ಶೃಂಗಸಭೆಯಲ್ಲಿ (BRICS Summit) ಪ್ರಧಾನಿ ನರೇಂದ್ರ ಮೋದಿ (Narendra Modi) ಭಯೋತ್ಪಾದನೆ ಬೆಂಬಲಿಸುತ್ತಿರುವ ಪಾಕಿಸ್ತಾನದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಭಯೋತ್ಪಾದನೆ (Terrorism) ಮಾನವೀಯತೆಗೆ ಅತಿ ದೊಡ್ಡ ಬೆದರಿಕೆ ಎಂದು ಕರೆದ ಮೋದಿ, ಇದೇ ವೇಳೆ ಜಮ್ಮು ಮತ್ತು ಕಾಶ್ಮೀರದ (Jammu Kashmir) ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಖಂಡಿಸುವಲ್ಲಿ ಭಾರತದ ಜೊತೆ ನಿಂತ ಎಲ್ಲಾ ರಾಷ್ಟ್ರಗಳಿಗೆ ಧನ್ಯವಾದ ಅರ್ಪಿಸಿದ್ದಾರೆ. ಇದನ್ನೂ ಓದಿ: ಯೋಗಿ ಮಾತಿಗೂ ಕಿಮ್ಮತ್ತಿಲ್ಲ – ವಿದ್ಯಾರ್ಥಿನಿಗೆ ಶುಲ್ಕ ವಿನಾಯ್ತಿ ಕೊಡಲು ನಿರಾಕರಿಸಿ‌ದ RSS ಮೂಲದ ಶಿಕ್ಷಣ ಸಂಸ್ಥೆ

ಶೃಂಗಸಭೆ ಉದ್ದೇಶಿಸಿ ಭಾಷಣ ಮಾಡಿದ ಮೋದಿ, ಭಾರತ ಭಯೋತ್ಪಾದನೆಯ ಬಲಿಪಶು ರಾಷ್ಟ್ರವಾಗಿದ್ದರೆ, ಪಾಕಿಸ್ತಾನ ಅದರ ಬೆಂಬಲಿಗ ರಾಷ್ಟ್ರವಾಗಿದೆ ಎಂದು ಬ್ರಿಕ್ಸ್‌ ಶೃಂಗಸಭೆಯಲ್ಲಿ ವಿಶ್ವ ನಾಯಕರಿಗೆ ಮನವರಿಕೆ ಮಾಡಿಕೊಟ್ಟ ಪ್ರಧಾನಿ ಮೋದಿ, ಬಲಿಪಶುಗಳು ಮತ್ತು ಬೆಂಬಲಿಗರನ್ನು ಒಂದೇ ತಕ್ಕಡಿಯಲ್ಲಿ ತೂಗಲು ಸಾಧ್ಯವಿಲ್ಲ ಎಂದು ಒತ್ತಿ ಹೇಳಿದ್ದಾರೆ.

ಭಯೋತ್ಪಾದನೆಗೆ ಬೆಂಬಲ ನೀಡುವುದು, ಭಯೋತ್ಪಾದಕರಿಗೆ ಮೌನ ಒಪ್ಪಿಗೆ ನೀಡುವುದನ್ನು ಸಹಿಸಲಾಗುವುದಿಲ್ಲ. ಈ ಬಗ್ಗೆ ನಿರ್ಣಾಯಕ ನಿರ್ಧಾರ ತೆಗೆದುಕೊಳ್ಳುವಂತೆ ಎಲ್ಲಾ ರಾಷ್ಟ್ರಗಳಿಗೆ ಮನವಿ ಮಾಡಿದ್ರು. ಅಲ್ಲದೇ ಭಾರತ ಮಹಾತ್ಮ ಗಾಂಧಿ, ಗೌತಮ ಬುದ್ಧರಿಂದ ಪ್ರೇರಿತರಾಗಿ ಶಾಂತಿಯ ಹಾದಿಯಲ್ಲಿ ಮುಂದುವರಿಯುತ್ತಿದೆ. ಎಷ್ಟೇ ಕಠಿಣ ಪರಿಸ್ಥಿತಿ ಬಂದರೂ, ಮಾನವಕುಲದ ಕಲ್ಯಾಣಕ್ಕೆ ಶಾಂತಿಯೇ ಅತ್ಯುತ್ತಮ ಮಾರ್ಗವಾಗಿದೆ ಎಂದು ಪ್ರತಿಪಾದಿಸಿದ್ರು. ಇದನ್ನೂ ಓದಿ: ಅಧಿಕೃತ ನಿವಾಸದಿಂದ ತಕ್ಷಣವೇ ಚಂದ್ರಚೂಡ್ ತೆರವಿಗೆ ಕೇಂದ್ರಕ್ಕೆ ಸುಪ್ರೀಂ ಪತ್ರ

ಪಾಕಿಸ್ತಾನವು ತನ್ನ ನೆಲದಲ್ಲಿ ಭಯೋತ್ಪಾದಕರಿಗೆ ಆಶ್ರಯ ನೀಡುವ ಮೂಲಕ ಭಯೋತ್ಪಾದನೆಯನ್ನ ರಾಜ್ಯ ನೀತಿಯಾಗಿ ಹೇಗೆ ಬಳಸುತ್ತಿದೆ ಎಂಬುದನ್ನು ಭಾರತವು 17ನೇ ಬಾರಿಗೆ ಸ್ಪಷ್ಟ ಪುರಾವೆಗಳೊಂದಿಗೆ ತೋರಿಸಿದೆ. ಇತ್ತೀಚಿಗೆ ಚೀನಾದ ರಾಜಧಾನಿ ಬೀಜಿಂಗ್‌ನಲ್ಲಿ ನಡೆದ ಶಾಂಘೈ ಸಹಕಾರ ಒಕ್ಕೂಟದ ರಕ್ಷಣಾ ಸಚಿವರ ಸಭೆಯಲ್ಲಿ, ಪಹಲ್ಗಾಮ್‌ ದಾಳಿ ಉಲ್ಲೇಖವಿರದ ಜಂಟಿ ಹೇಳಿಕೆಗೆ ಸಹಿ ಮಾಡಲು, ಭಾರತ ನಿರಾಕರಿಸಿತ್ತು. ಇದನ್ನೂ ಓದಿ: ಭಾಷೆ ಹೆಸರಲ್ಲಿ ಜನರನ್ನು ವಿಭಜಿಸಬಾರದು: ಮರಾಠಿ-ಹಿಂದಿ ಸಂಘರ್ಷ ಬಗ್ಗೆ ಕಂಗನಾ ಪ್ರತಿಕ್ರಿಯೆ

ಉಗ್ರವಾದಕ್ಕೆ ಖಂಡನೆ
ಇನ್ನೂ ಪ್ರಧಾನಿ ಮೋದಿ ಅವರ ಭಾಷಣದ ಬಳಿಕ ಬ್ರಿಕ್ಸ್‌ ಸದಸ್ಯ ರಾಷ್ಟ್ರಗಳು ಜಂಟಿ ಹೇಳಿಕೆ ಅಥವಾ ʻರಿಯೊ ಡಿ ಜನೈರೊ ಘೋಷಣೆʼಯನ್ನು ಹೊರಡಿಸಿದವು. ಯಾವುದೇ ರೀತಿಯ ಭಯೋತ್ಪಾದಕ ಕೃತ್ಯಗಳನ್ನು ಖಂಡಿಸುವುದಾಗಿ ಸ್ಪಷ್ಟಪಡಿಸಿರುವ ಬ್ರಿಕ್ಸ್‌ ನಾಯಕರು, ಭಯೋತ್ಪಾದನೆಗೆ ಯಾರೇ ಬೆಂಬಲ ನೀಡಿದರೂ ಅದನ್ನು ಉಗ್ರವಾಗಿ ಖಂಡಿಸುವುದಾಗಿ ಹೇಳಿದ್ದಾರೆ.

ನೆನಪಿದೆಯಾ ಪಹಲ್ಗಾಮ್‌ ಉಗ್ರರ ದಾಳಿ
ಕಳೆದ ಏಪ್ರಿಲ್ 22ರಂದು ಜಮ್ಮು ಮತ್ತು ಕಾಶ್ಮೀರದಲ್ಲಿ ಬೈಸರನ್‌ ಕಣಿವೆ ಪ್ರದೇಶದಲ್ಲಿರುವ ಪಹಲ್ಗಾಮ್‌ನಲ್ಲಿ ಭಯೋತ್ಪಾದಕ ದಾಳಿ ನಡೆದಿತ್ತು. ಇದರಲ್ಲಿ ಓರ್ವ ವಿದೇಶಿ ಸೇರಿ 26 ಮಂದಿ ಸಾವನ್ನಪ್ಪಿದ್ದರು. ನೇಕರು ಗಾಯಗೊಂಡರು. ಇದಕ್ಕೆ ಪ್ರತೀಕಾರವಾಗಿ ಭಾರತ ಆಪರೇಷನ್‌ ಸಿಂಧೂರ ಕಾರ್ಯಾಚರಣೆ ನಡೆಸಿತ್ತು. ಇದನ್ನೂ ಓದಿ:  ಹಾವಿನ ದ್ವೇಷ 12 ವರುಷ – ಹಾಗೇ ಪ್ರೀತಿಯೂ ಪುರಾಣದಿಂದಲೇ ಹುಟ್ಟಿದ್ದಾ?

Share This Article