ಸಿದ್ಧೇಶ್ವರ ಶ್ರೀ ಲಿಂಗೈಕ್ಯ – ಕನ್ನಡದಲ್ಲೇ ಟ್ವೀಟ್‌ ಮಾಡಿ ಪ್ರಧಾನಿ ಮೋದಿ ಸಂತಾಪ

Public TV
1 Min Read

ನವದೆಹಲಿ: ವಿಜಯಪುರದ (Vijayapura) ಜ್ಞಾನಯೋಗಾಶ್ರಮದಲ್ಲಿ ಸೋಮವಾರ ಸಿದ್ಧೇಶ್ವರ ಶ್ರೀಗಳು (Siddheshwara Swamiji) ಲಿಂಗೈಕ್ಯರಾಗಿದ್ದು, ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಅವರು ಟ್ವೀಟ್‌ ಮಾಡಿ ಸಂತಾಪ ಸೂಚಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಕನ್ನಡದಲ್ಲೇ ಟ್ವೀಟ್‌ ಮಾಡಿ ಶ್ರೀಗಳಿಗೆ ಗೌರವ ನಮನ ಸಲ್ಲಿಸಿದ್ದಾರೆ. ಇದನ್ನೂ ಓದಿ: ವಿಜಯಪುರ: ಸಿದ್ಧೇಶ್ವರ ಶ್ರೀಗಳ ಅಂತಿಮ ದರ್ಶನಕ್ಕೆ ಸೈನಿಕ ಶಾಲೆಯತ್ತ ಭಕ್ತಸಾಗರ

“ಪರಮಪೂಜ್ಯ ಶ್ರೀ ಸಿದ್ಧೇಶ್ವರ ಸ್ವಾಮೀಜಿ ಅವರು ಸಮಾಜಕ್ಕೆ ನೀಡಿರುವ ಗಣನೀಯ ಸೇವೆಗಾಗಿ ಅವರನ್ನು ಸ್ಮರಿಸಲಾಗುತ್ತದೆ. ಅವರು ಇತರರ ಒಳಿತಿಗಾಗಿ ಅವಿಶ್ರಾಂತವಾಗಿ ಶ್ರಮಿಸಿದ್ದರು ಮತ್ತು ಅವರ ಜ್ಞಾನೋತ್ಸಾಹಕ್ಕಾಗಿ ಅವರು ಗೌರವಗಳಿಸಿದ್ದರು. ಈ ದುಃಖದ ಸಮಯದಲ್ಲಿ ಅವರ ಅಸಂಖ್ಯಾತ ಭಕ್ತರೊಂದಿಗೆ ನನ್ನ ಸಂವೇದನೆ ಇದೆ. ಓಂ. ಶಾಂತಿ” ಎಂದು ಟ್ವೀಟ್‌ ಮಾಡಿದ್ದಾರೆ.

ಶ್ರೀಗಳು ಅನಾರೋಗ್ಯದಿಂದ ಹಾಸಿಗೆ ಹಿಡಿದಿದ್ದಾಗ ಮೋದಿ ಅವರು ಫೋನ್‌ ಕರೆ ಮಾಡಿ ಆರೋಗ್ಯದ ಬಗ್ಗೆ ವಿಚಾರಿಸಿದ್ದರು. ಶೀಘ್ರವೇ ಗುಣಮುಖರಾಗುವಂತೆ ಪ್ರಾರ್ಥಿಸಿದ್ದರು. ಇದನ್ನೂ ಓದಿ: ಸಿದ್ದೇಶ್ವರ ಶ್ರೀಗಳ ನಿಧನಕ್ಕೆ ಗಣ್ಯರಿಂದ ಕಣ್ಣೀರ ವಿದಾಯ

ಜ್ಞಾನಯೋಗಾಶ್ರಮದ ಸಿದ್ಧೇಶ್ವರ ಶ್ರೀಗಳ ಅಂತಿಮ ದರ್ಶನಕ್ಕೆ ಸೈನಿಕ ಶಾಲೆಯಲ್ಲಿ ವ್ಯವಸ್ಥೆ ಮಾಡಲಾಗಿದೆ. ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ಶ್ರೀಗಳ ಅಂತಿಮ ದರ್ಶನ ಪಡೆಯುತ್ತಿದ್ದಾರೆ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *