5 ವಂದೇ ಭಾರತ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

Public TV
2 Min Read

– ವರ್ಚುವಲ್‌ ಆಗಿ ಧಾರವಾಡ-ಬೆಂಗಳೂರು ರೈಲಿಗೂ ಚಾಲನೆ

ಭೋಪಾಲ್: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಮಂಗಳವಾರ ದೇಶಾದ್ಯಂತ 5 ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳಿಗೆ (Vande Bharat Express Train) ಒಂದೇ ಸಮಯದಲ್ಲಿ ಹಸಿರು ನಿಶಾನೆ ತೋರಿದ್ದಾರೆ.

ಮಧ್ಯಪ್ರದೇಶದ ಭೋಪಾಲ್‌ನ ರಾಣಿ ಕಮಲಾಪತಿ ರೈಲ್ವೆ ನಿಲ್ದಾಣದಿಂದ ಮೋದಿ ಬೆಳಗ್ಗೆ 11 ಗಂಟೆಗೆ ಹೊಸ 5 ವಂದೇ ಭಾರತ್ ರೈಲುಗಳಿಗೆ ಚಾಲನೆ ನೀಡಿದ್ದಾರೆ. ರಾಣಿ ಕಮಲಾಪತಿ-ಜಬಲ್‌ಪುರ್ ವಂದೇ ಭಾರತ್ ಎಕ್ಸ್‌ಪ್ರೆಸ್, ಖಜುರಾಹೊ-ಭೋಪಾಲ್-ಇಂದೋರ್ ವಂದೇ ಭಾರತ್ ಎಕ್ಸ್‌ಪ್ರೆಸ್, ಮಡಗಾಂವ್ (ಗೋವಾ)-ಮುಂಬೈ ವಂದೇ ಭಾರತ್ ಎಕ್ಸ್‌ಪ್ರೆಸ್, ಧಾರವಾಡ-ಬೆಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ ಹಾಗೂ ಹತಿಯಾ-ಪಾಟ್ನಾ ವಂದೇ ಭಾರತ್ ಎಕ್ಸ್‌ಪ್ರೆಸ್ ಎಂಬ 5 ರೈಲುಗಳಿಗೆ ಮೋದಿ ಚಾಲನೆ ನೀಡಿದ್ದಾರೆ.

ಈ ರೈಲುಗಳು ಮಧ್ಯಪ್ರದೇಶ, ಕರ್ನಾಟಕ, ಮಹಾರಾಷ್ಟ್ರ, ಗೋವಾ, ಬಿಹಾರ ಮತ್ತು ಜಾರ್ಖಂಡ್‌ನಲ್ಲಿ ಸಂಪರ್ಕವನ್ನು ಸುಧಾರಿಸುತ್ತದೆ ಎಂದು ಪ್ರಧಾನಿ ಮೋದಿ ಸೋಮವಾರ ಟ್ವೀಟ್‌ನಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಗ್ಯಾರಂಟಿ ಎಫೆಕ್ಟ್‌; ಮಕ್ಕಳ ಶೂ, ಸಾಕ್ಸ್‌ ಖರೀದಿ ಹಣಕ್ಕೂ ಕಾಂಗ್ರೆಸ್‌ ಸರ್ಕಾರ ಕತ್ತರಿ

ರೈಲ್ವೇ ಸಚಿವ ಅಶ್ವಿನಿ ವೈಷ್ಣವ್, ಮಧ್ಯಪ್ರದೇಶ ರಾಜ್ಯಪಾಲ ಮಂಗುಭಾಯ್ ಪಟೇಲ್, ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್, ಕೇಂದ್ರ ಸಚಿವರಾದ ನರೇಂದ್ರ ಸಿಂಗ್ ತೋಮರ್, ಜ್ಯೋತಿರಾದಿತ್ಯ ಸಿಂಧಿಯಾ ಸೇರಿದಂತೆ ಹಲವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಮೋದಿ ಇಂದು ಚಾಲನೆ ನೀಡಿರುವ 5 ರೈಲುಗಳು ಸೇರಿ 24 ವಂದೇ ಭಾರತ್ ರೈಲುಗಳು ದೇಶಾದ್ಯಂತ ಸಂಚರಿಸುತ್ತಿವೆ. ಬೆಂಗಳೂರು-ಧಾರವಾಡ ವಂದೇ ಭಾರತ್ ಎಕ್ಸ್‌ಪ್ರೆಸ್, ಕರ್ನಾಟಕಕ್ಕೆ 2ನೇ ವಂದೇ ಭಾರತ್ ರೈಲಾಗಿದೆ. ಇದನ್ನೂ ಓದಿ: ಹಾಸನದಲ್ಲಿ ಭೂಮಿ ಕಂಪಿಸಿದ ಅನುಭವ – ಮನೆ ಸೇರಲು ಹೆದರುತ್ತಿರುವ ಜನ

ರಾಜ್ಯದ 2ನೇ ವಂದೇ ಭಾರತ್ ರೈಲಿಗೆ ಚಾಲನೆ:
ಧಾರವಾಡದ ರೈಲ್ವೆ ನಿಲ್ದಾಣದಲ್ಲಿ ಧಾರವಾಡ-ಬೆಂಗಳೂರು ವಂದೇ ಭಾರತ್ ರೈಲಿಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹಾಗೂ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದ್ದಾರೆ. ಕಾರ್ಯಕ್ರಮದಲ್ಲಿ ಶಾಸಕ ಅರವಿಂದ್ ಬೆಲ್ಲದ, ಮೇಯರ್ ವೀಣಾ ಬರದ್ವಾಡ, ನೈರುತ್ಯ ರೈಲ್ವೆ ಜನರಲ್ ಮ್ಯಾನೇಜರ್ ಸಂಜೀವ ಕಿಶೋರ್ ಸೇರಿ ಹಲವರು ಭಾಗಿಯಾಗಿದ್ದರು.

Share This Article
ಹೊಸ ಲುಕ್‌ನಲ್ಲಿ ಹಾಟ್ ಆಗಿ ಮಿಂಚಿದ ಮಿಲ್ಕಿ ಬ್ಯೂಟಿ ಹೊಸ ಫೋಟೋಶೂಟ್‌ನಲ್ಲಿ ಹರ್ಷಿಕಾ ಹಾಟ್ ಪೋಸ್ ಹಾಟ್ ಹಾಟ್ ಆಗಿ ಕಾಣಿಸಿಕೊಂಡ ಕೆಜಿಎಫ್ ನಟಿ ಹಾಟ್‌ ಲುಕ್‌ನಲ್ಲಿ ಕಾಣಿಸಿಕೊಂಡ ನಟಿ ಆಶಿಕಾ ರಂಗನಾಥ್‌ ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ ಹಾಟ್‌ ಲುಕ್‌ ಬೆಡಗಿ ಸಾನ್ಯಾ ಹಾಟ್ ಬ್ಯೂಟಿ ಲಕ್ಷ್ಮಿ ರೈ: ಬೆಳಗಾವಿ ಸುಂದರಿಯ ಫೋಟೋ ವೈರಲ್ ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ ಹಾಟ್ ಆಗಿ ಕಾಣಿಸಿಕೊಂಡ ಸ್ಯಾಮ್..! ಹಾಟ್ ಅವತಾರದಲ್ಲಿ ಮಾನ್ವಿತಾ