ಭಾರತಕ್ಕೆ ಮರಳಿದ ಮೋದಿ – ವಿಮಾನ ನಿಲ್ದಾಣದಲ್ಲೇ ಸಭೆ

Public TV
2 Min Read

ನವದೆಹಲಿ: ಸೌದಿ ಅರೇಬಿಯಾ (Saudi arabia) ಪ್ರವಾಸವನ್ನು ಅರ್ಧದಲ್ಲೇ ಕಡಿತಗೊಳಿಸಿ ಭಾರತಕ್ಕೆ ಮರಳಿದ ನರೇಂದ್ರ ಮೋದಿ (PM Narendra Modi) ಇಂದು ಮುಂಜಾನೆ ದೆಹಲಿಗೆ (Delhi) ಆಗಮಿಸಿದ ಕೂಡಲೇ ಸಭೆ ನಡೆಸಿದ್ದಾರೆ.

ಬುಧವಾರ ಮುಂಜಾನೆ ಬಂದಿಳಿದ ಮೋದಿ ದೆಹಲಿಯ ಪಾಲಂ ವಿಮಾನ ನಿಲ್ದಾಣದಲ್ಲಿ ವಿದೇಶಾಂಗ ಸಚಿವ ಎಸ್. ಜೈಶಂಕರ್, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಮತ್ತು ಇತರ ಅಧಿಕಾರಿಗಳೊಂದಿಗೆ ಸಂಕ್ಷಿಪ್ತ ಸಭೆ ನಡೆಸಿದರು. ಇದನ್ನೂ ಓದಿ: Pahalgam Attack | ಉಗ್ರರ ಅಟ್ಟಹಾಸಕ್ಕೆ ಪತ್ನಿ ಕಣ್ಣೆದುರೇ ಬೆಂಗಳೂರಿನ ಟೆಕ್ಕಿ ಸಾವು

ಪ್ರಧಾನಿ ಮೋದಿ ಅವರು ಸೌದಿ ಅರೇಬಿಯಾಕ್ಕೆ ಎರಡು ದಿನಗಳ ಪ್ರವಾಸ ಕೈಗೊಂಡಿದ್ದರು. ಪೂರ್ವ ನಿಗದಿ ಕಾರ್ಯಕ್ರಮದ ಪ್ರಕಾರ ಇಂದು ರಾತ್ರಿ ಮೋದಿ ಮರಳಬೇಕಿತ್ತು. ಆದರೆ ಪಹಲ್ಗಾಮ್‌ನಲ್ಲಿ ಉಗ್ರರ ದಾಳಿ (Pahalgam Terror Attack) ಹಿನ್ನೆಲೆಯಲ್ಲಿ ಪ್ರವಾಸವನ್ನು ಅರ್ಧದಲ್ಲೇ ಮೊಟಕುಗೊಳಿಸಿ ಮಂಗಳವಾರ ರಾತ್ರಿಯೇ ಭಾರತದತ್ತ ಪ್ರಯಾಣ ಬೆಳೆಸಿದ್ದರು. ಇದನ್ನೂ ಓದಿ: ಕಲಿಮಾ ಹೇಳದ್ದಕ್ಕೆ ತಂದೆಯ ತಲೆಗೆ ಗುಂಡೇಟು – ಕಣ್ಣೀರಿಟ್ಟ ಪುತ್ರಿ 

ಸೌದಿ ಅರೇಬಿಯಾ ಮಂಗಳವಾರ ರಾತ್ರಿ ಆಯೋಜಿಸಿದ್ದ ಅಧಿಕೃತ ಭೋಜನಕೂಟದಲ್ಲಿ ಮೋದಿ ಭಾಗಿಯಾಗಬೇಕಿತ್ತು. ಆದರೆ ಉಗ್ರರ ದಾಳಿಯ ವಿಚಾರ ತಿಳಿದ ಬಳಿಕ ಪೂರ್ವ ನಿಗದಿಯಾಗಿದ್ದ ಎಲ್ಲಾ ಕಾರ್ಯಕ್ರಮಗಳನ್ನು ಮೋದಿ ರದ್ದುಗೊಳಿಸಿದ್ದರು.

 

ಈ ದಾಳಿಯನ್ನು ಖಂಡಿಸಿದ ಮೋದಿ, ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪ ಸೂಚಿಸುತ್ತೇನೆ. ಗಾಯಗೊಂಡವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ನಾನು ಪ್ರಾರ್ಥಿಸುತ್ತೇನೆ. ಬಾಧಿತರಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ಒದಗಿಸಲಾಗುತ್ತಿದೆ. ಈ ಘೋರ ಕೃತ್ಯದ ಹಿಂದಿರುವವರನ್ನು ಬಿಡುವುದಿಲ್ಲ. ಉಗ್ರರ ದುಷ್ಟ ಕಾರ್ಯಸೂಚಿ ಎಂದಿಗೂ ಯಶಸ್ವಿಯಾಗುವುದಿಲ್ಲ. ಭಯೋತ್ಪಾದನೆಯ ವಿರುದ್ಧ ಹೋರಾಡುವ ನಮ್ಮ ಸಂಕಲ್ಪ ಅಚಲವಾಗಿದ್ದು ಅದು ಇನ್ನಷ್ಟು ಬಲಗೊಳ್ಳುತ್ತದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದಾರೆ.

Share This Article