ಯಾದಗಿರಿ, ಕಲಬುರಗಿಗೆ ಮೋದಿ – ಎಲ್ಲಿ, ಎಷ್ಟು ಗಂಟೆಗೆ ಏನು ಕಾರ್ಯಕ್ರಮ?

Public TV
1 Min Read

ಬೆಂಗಳೂರು: ಹುಬ್ಬಳ್ಳಿಯಲ್ಲಿ ರೋಡ್ ಶೋ ಮೂಲಕ ಸಂಚಲನ ಮೂಡಿಸಿದ್ದ ಪ್ರಧಾನಿ ಮೋದಿ (PM Narendra Modi) ಇಂದು ಮತ್ತೊಮ್ಮೆ ರಾಜ್ಯಕ್ಕೆ ಬರುತ್ತಿದ್ದಾರೆ. ಕಲಬುರಗಿ (Kalaburagi) ಮತ್ತು ಯಾದಗಿರಿ (Yadagiri) ಜಿಲ್ಲೆಯಲ್ಲಿ ಪ್ರಧಾನಿ ಮೋದಿ ಪ್ರವಾಸ ಕೈಗೊಳ್ಳಲಿದ್ದು, ಅನೇಕ ಯೋಜನೆಗಳಿಗೆ ಉದ್ಘಾಟನೆ, ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ಮೋದಿ ಆಗಮನ ಹಿನ್ನೆಲೆಯಲ್ಲಿ ಕಲಬುರಗಿ ಮತ್ತು ಯಾದಗಿರಿ ಮಧುವಣಗಿತ್ತಿಯಂತೆ ಸಿಂಗಾರಗೊಂಡಿವೆ. ಸಂಪೂರ್ಣ ಕೇಸರಿಮಯವಾಗಿವೆ. ಬೆಳಗ್ಗೆ 11 ಗಂಟೆಗೆ ವಾಯು ಪಡೆಯ ವಿಶೇಷ ವಿಮಾನದಲ್ಲಿ ಕಲಬುರಗಿಗೆ ಆಗಮಿಸಲಿದ್ದಾರೆ. ಅಲ್ಲಿಂದ ವಾಯುಪಡೆಯ ಎಂಐ 17 ಹೆಲಿಕಾಪ್ಟರ್‌ ಮೂಲಕ ಯಾದಗಿರಿಯ ಕೊಡೇಕಲ್‌ಗೆ ಬರಲಿದ್ದಾರೆ. ಇದನ್ನೂ ಓದಿ: ಸ್ಕೂಟರ್ ಹಿಂದೆ ಧರಧರನೇ ವೃದ್ದನನ್ನ ಎಳೆದೊಯ್ದ ಆರೋಪಿಗೆ ನ್ಯಾಯಾಂಗ ಬಂಧನ

ಕೊಡೆಕಲ್‍ನಲ್ಲಿ ನಾರಾಯಣಪುರ ಎಡದಂಡೆ ಕಾಲುವೆಗೆ (Narayanapura Left Bank Canal project ) 2500 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಸ್ವಯಂಚಾಲಿತ ಸ್ಕಾಡಾ ಗೇಟ್ ಲೋಕಾರ್ಪಣೆ ಮಾಡಲಿದ್ದಾರೆ. ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆ, ಸೂರತ್-ಚೆನ್ನೈ ಎಕ್ಸ್‌ಪ್ರೆಸ್‌ವೇಗೆ ವೇಗೆ ಮೋದಿ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ಮಧ್ಯಾಹ್ನ 1:15ಕ್ಕೆ ಕಲಬುರಗಿಯ ಮಳಖೇಡಾದಲ್ಲಿ ವಿಜಯಪುರ, ಕಲಬುರಗಿ, ಯಾದಗಿರಿ, ಬೀದರ್‌, ರಾಯಚೂರು ಜಿಲ್ಲೆಗಳ ತಾಂಡಾ ಮತ್ತು ಹಟ್ಟಿಗಳಲ್ಲಿ ವಾಸವಾಗಿರುವ 51 ಸಾವಿರ ಕುಟುಂಬಸ್ಥರಿಗೆ ಏಕಕಾಲದಲ್ಲಿ ಮೋದಿ ಹಕ್ಕು ಪತ್ರ ವಿತರಿಸಲಿದ್ದಾರೆ.


ಮೋದಿ ಕಾರ್ಯಕ್ರಮಕ್ಕಾಗಿ 60 ಎಕರೆ ಪ್ರದೇಶದಲ್ಲಿ ಸಿದ್ಧತೆಗಳು ನಡೆದಿವೆ. ಬಿಗಿ ಬಂದೋಬಸ್ತ್ ಕಲ್ಪಿಸಲಾಗಿದೆ.  ಮೋದಿಯವರ ಎರಡು ಕಾರ್ಯಕ್ರಮಗಳಿವೆ. ಇದರಿಂದ ರಾಜ್ಯಕ್ಕೆ ಒಳಿತಾಗಲಿದೆ ಎಂದು ಸಿಎಂ ಬೊಮ್ಮಾಯಿ ಅಭಿಪ್ರಾಯಪಟ್ಟಿದ್ದಾರೆ. ಪ್ರಧಾನಿ ಬರುತ್ತಿರುವುದನ್ನು ಕಾಂಗ್ರೆಸ್ಸಿಗರು ಟೀಕೆ ಮಾಡಿರೋದಕ್ಕೆ ಸಚಿವ ಅಶೋಕ್ ತಿರುಗೇಟು ನೀಡಿದ್ದಾರೆ. ಮೋದಿಯನ್ನು ಸಿಂಹಕ್ಕೆ ಹೋಲಿಸಿದ್ದಾರೆ. ಈ ಮಧ್ಯೆ, ಕರ್ನಾಟಕದ ಜನತೆಯ ನಡುವೆ ಇರಲು ನಾನು ಉತ್ಸುಕನಾಗಿದ್ದೇನೆ ಎಂದು ಮೋದಿ ಕನ್ನಡದಲ್ಲಿ ಟ್ವೀಟ್ ಮಾಡಿದ್ದಾರೆ.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

Share This Article
Leave a Comment

Leave a Reply

Your email address will not be published. Required fields are marked *