Car Diplomacy| ಮ್ಯಾಕ್ರನ್‌ ಜೊತೆ ಕಾರಿನಲ್ಲಿ ಮೋದಿ ಮಾತುಕತೆ

2 Min Read

ಮುಂಬೈ: ಪ್ರಧಾನಿ ನರೇಂದ್ರ ಮೋದಿ (PM Narendra Modi) ಮತ್ತು ಫ್ರಾನ್ಸ್ ಅಧ್ಯಕ್ಷ ಇಮ್ಯಾನ್ಯಯೆಲ್‌ ಮ್ಯಾಕ್ರನ್‌(Emmanuel Macron) ಜೊತೆಯಾಗಿ ಕಾರಿನಲ್ಲಿ ಪ್ರಯಾಣಿಸಿದ್ದಾರೆ.

ಇಂದು ಸಂಜೆ ಮೋದಿ ಅವರು ಮ್ಯಾಕ್ರನ್‌ ಅವರನ್ನು ಮುಂಬೈಯ ಲೋಕಭವನದಲ್ಲಿ ಸ್ವಾಗತಿಸಿದರು. ಇಲ್ಲಿ ಇಬ್ಬರು ದ್ವಿಪಕ್ಷೀಯ ಮಾತುಕತೆ ನಡೆಸಿ ವರ್ಚುಯಲ್ ಆಗಿ ಕೋಲಾರದಲ್ಲಿ ವೆಮುಗಲ್‌ನಲ್ಲಿ ಏರ್‌ಬಸ್ (Airbus) ಮತ್ತು ಟಾಟಾ ಅಡ್ವಾನ್ಸ್ಡ್ ಸಿಸ್ಟಮ್ಸ್ ಲಿಮಿಟೆಡ್ (TASL) ಜತೆಗೂಡಿ ಅಭಿವೃದ್ಧಿಪಡಿಸಿರುವ ದೇಶದ ಪ್ರಪ್ರಥಮ, ಖಾಸಗಿ ವಲಯದ ಹೆಲಿಕಾಪ್ಟರ್ ಜೋಡಣಾ ಘಟಕಕ್ಕೆ ಚಾಲನೆ ನೀಡಿದರು.

ಹೆಲಿಕಾಪ್ಟರ್‌ ಘಟಕಕ್ಕೆ ಚಾಲನೆ ನೀಡಿದ ಬಳಿಕ ಇಬ್ಬರೂ ನಾಯಕರು ಜಂಟಿ ಹೇಳಿಕೆ ನೀಡಿದರು. ಈ ಎಲ್ಲಾ ಕಾರ್ಯಕ್ರಮ ಮುಗಿದ ಬಳಿಕ ಭಾರತ-ಫ್ರಾನ್ಸ್ ನಾವೀನ್ಯತೆ ವೇದಿಕೆಯಲ್ಲಿ ಭಾಗವಹಿಸಲು ಮೋದಿ ಮತ್ತು ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಜೊತೆಯಾಗಿ ಕಾರಿನಲ್ಲಿ ಪ್ರಯಾಣಿಸಿದರು. ಇದನ್ನೂ ಓದಿ: ಕೋಲಾರದಲ್ಲಿ ದೇಶದ ಪ್ರಪ್ರಥಮ, ಖಾಸಗಿ ವಲಯದ ಹೆಲಿಕಾಪ್ಟರ್ ಜೋಡಣಾ ಘಟಕಕ್ಕೆ ಚಾಲನೆ – 20 ವರ್ಷಗಳಲ್ಲಿ 500 ಕಾಪ್ಟರ್ ನಿರ್ಮಾಣ

ಈ ಬಗ್ಗೆ ಮೋದಿ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿ, ಮುಂಬೈನ ಲೋಕ ಭವನದಲ್ಲಿ ದ್ವಿಪಕ್ಷೀಯ ಮಾತುಕತೆ ನಡೆಸಿದ ಬಳಿಕ ಅಧ್ಯಕ್ಷ ಮ್ಯಾಕ್ರನ್ ಮತ್ತು ನಾನು ಭಾರತ-ಫ್ರಾನ್ಸ್ ನಾವೀನ್ಯತೆ ವೇದಿಕೆ ಸೇರಿದಂತೆ ಇತರ ಕಾರ್ಯಕ್ರಮಗಳಿಗೆ ಹೋಗುತ್ತಿದ್ದೇವೆ ಎಂದು ಬರೆದಿದ್ದಾರೆ.

ಮೋದಿ ಜೊತೆಯಾಗಿ ರಾಷ್ಟ್ರದ ಅಧ್ಯಕ್ಷರ ಜೊತೆ ತೆರಳುವುದು ಹೊಸದೆನಲ್ಲ. ಈ ಹಿಂದೆ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್, ಯುಕೆ ಪ್ರಧಾನಿ ಕೀರ್ ಸ್ಟಾರ್ಮರ್, ಯುಎಇ ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್, ಜರ್ಮನಿಯ ಚಾನ್ಸೆಲರ್‌ ಫ್ರೆಡ್ರಿಕ್ ಮೆರ್ಜ್ ಜೊತೆ ಜೊತೆಯಾಗಿ ಕಾರಿನಲ್ಲಿ ಪ್ರಯಾಣಿಸಿದ್ದರು.  ಇದನ್ನೂ ಓದಿ: ಭಾರತ, ಫ್ರಾನ್ಸ್ ಬಾಂಧವ್ಯ ಮತ್ತಷ್ಟು ಗಟ್ಟಿ – 20 ಒಪ್ಪಂದಗಳಿಗೆ ಸಹಿ ಹಾಕಿದ ಮೋದಿ

ಇಥಿಯೋಪಿಯಾ ಪ್ರಧಾನಿ ಅಬಿ ಅಹ್ಮದ್ ಅವರೇ ಸ್ವತ: ಚಲಾಯಿಸಿಕೊಂಡು ಪ್ರಧಾನಿ ಮೋದಿಯವರನ್ನು ವಿಮಾನ ನಿಲ್ದಾಣದಿಂದ ತಮ್ಮ ಹೋಟೆಲ್‌ಗೆ ಕರೆದುಕೊಂಡು ಹೋಗಿದ್ದರು. ಜೋರ್ಡಾನ್ ಕ್ರೌನ್ ಪ್ರಿನ್ಸ್ ಅಲ್ ಹುಸೇನ್ ಅವರ ತಮ್ಮ ವೈಯಕ್ತಿಕ ಬಿಎಂಡಬ್ಲ್ಯೂ ಕಾರಿನಲ್ಲಿ ಅಮ್ಮನ್‌ನಲ್ಲಿರುವ ವಸ್ತುಸಂಗ್ರಹಾಲಯಕ್ಕೆ ಕರೆದೊಯ್ದಿದ್ದರು.

Share This Article