ಪ್ರಧಾನಿಗೆ ನಾಚಿಕೆಯಾಗಬೇಕು: ಮುಖ್ಯಮಂತ್ರಿಗಳ ವಾಗ್ದಾಳಿ

By
2 Min Read

ನವದೆಹಲಿ: ಪೆಟ್ರೋಲ್‌, ಡೀಸೆಲ್‌ ಬೆಲೆ ಇಳಿಕೆಗೆ ಇಂಧನಗಳ ಮೇಲಿನ ತೆರಿಗೆ ಕಡಿತಗೊಳಿಸುವಂತೆ ಬಿಜೆಪಿಯೇತರ ರಾಜ್ಯ ಸರ್ಕಾರಗಳಿಗೆ ಒತ್ತಾಯಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಮುಖ್ಯಮಂತ್ರಿಗಳು ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಪ್ರಧಾನಿ ಮೋದಿ ಅವರನ್ನು ತರಾಟೆಗೆ ತೆಗೆದುಕೊಂಡಿರುವ ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್‌, ಪ್ರಧಾನಿಗೆ ನಾಚಿಕೆಯಾಗಬೇಕು ಎಂದು ಕಟು ಶಬ್ದವನ್ನು ಪ್ರಯೋಗಿಸಿದ್ದಾರೆ. ಅಲ್ಲದೇ ತನ್ನ ರಾಜ್ಯದಲ್ಲಿ 2015 ರಿಂದ ಇಂಧನ ತೆರಿಗೆಯಲ್ಲಿ ಯಾವುದೇ ಹೆಚ್ಚಳವಾಗಿಲ್ಲ ಎಂದು ಪ್ರತಿಪಾದಿಸಿದ್ದಾರೆ. ಇದನ್ನೂ ಓದಿ: ಕೊರೊನಾ ಇನ್ನೂ ಮುಗಿದಿಲ್ಲ, ಎಲ್ಲಾ ಮಾರ್ಗಸೂಚಿಗಳನ್ನು ಅನುಸರಿಸಿ: ಉದ್ಧವ್ ಠಾಕ್ರೆ

ರಾಜ್ಯಗಳನ್ನು ಕೇಳುವ ಬದಲು ಕೇಂದ್ರವು ತೆರಿಗೆಯನ್ನು ಏಕೆ ಕಡಿತಗೊಳಿಸಬಾರದು? ಕೇಂದ್ರವು ಕೇವಲ ತೆರಿಗೆಯನ್ನಷ್ಟೇ ಹೆಚ್ಚಿಸಿಲ್ಲ, ಸೆಸ್ ಕೂಡ ಸಂಗ್ರಹಿಸುತ್ತದೆ. ನಿಮಗೆ ಧೈರ್ಯವಿದ್ದರೆ, ಮೌಲ್ಯವರ್ಧಿತ ತೆರಿಗೆಗಳ ಬಗ್ಗೆ ವಿವರ ನೀಡಿ ಎಂದು ಸವಾಲು ಹಾಕಿದ್ದಾರೆ.

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಾತನಾಡಿ, ಪ್ರಧಾನಿ ಮೋದಿಯವರು ಸಂಪೂರ್ಣ ಏಕಪಕ್ಷೀಯ ಮತ್ತು ದಾರಿತಪ್ಪಿಸುವ ಭಾಷಣ ಮಾಡಿದ್ದಾರೆ. ಅವರು ಹಂಚಿಕೊಂಡಿರುವ ಸಂಗತಿಗಳು ತಪ್ಪು. ಕಳೆದ ಮೂರು ವರ್ಷಗಳಿಂದ ಪ್ರತಿ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ 1 ರೂಪಾಯಿ ಸಬ್ಸಿಡಿ ನೀಡುತ್ತಿದ್ದೇವೆ. ಇದಕ್ಕಾಗಿ 1,500 ಕೋಟಿ ರೂ. ಖರ್ಚು ಮಾಡಿದ್ದೇವೆ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ. ಇದನ್ನೂ ಓದಿ: ಇಂಧನಗಳ ಮೇಲಿನ ತೆರಿಗೆ ಕಡಿತಗೊಳಿಸಿ: ರಾಜ್ಯಗಳಿಗೆ ಮೋದಿ ಮನವಿ

ಕೇಂದ್ರಕ್ಕೆ 97,000 ಕೋಟಿ ರೂ. ಬಾಕಿ ಇದೆ. ಅರ್ಧದಷ್ಟು ಮೊತ್ತ ಪಡೆದ ಮರುದಿನ 3,000 ಕೋಟಿ ರೂ., ಪೆಟ್ರೋಲ್ ಮತ್ತು ಡೀಸೆಲ್ ಸಬ್ಸಿಡಿ ನೀಡುತ್ತೇವೆ. ಸಬ್ಸಿಡಿಯಲ್ಲಿ ನನಗೆ ಯಾವುದೇ ಸಮಸ್ಯೆ ಇಲ್ಲ. ಆದರೆ ನಾನು ನನ್ನ ಸರ್ಕಾರವನ್ನು ಹೇಗೆ ನಡೆಸುವುದು ಎಂದು ಪ್ರಶ್ನಿಸಿದ್ದಾರೆ.

5,000 ಕೋಟಿ ಮತ್ತು 3,000 ಕೋಟಿ ರೂ., ಪೆಟ್ರೋಲ್ ಮತ್ತು ಡೀಸೆಲ್ ಸಬ್ಸಿಡಿಯನ್ನು ಒದಗಿಸಿದ್ದಕ್ಕಾಗಿ ಉತ್ತರ ಪ್ರದೇಶ ಮತ್ತು ಗುಜರಾತ್‌ನಂತಹ ಬಿಜೆಪಿ ಆಡಳಿತದ ರಾಜ್ಯಗಳನ್ನು ಹೊಗಳಿಸಿದ್ದ ಪ್ರಧಾನಿಗೆ ಮಮತಾ ಬ್ಯಾನರ್ಜಿ ತಿರುಗೇಟು ನೀಡಿದ್ದಾರೆ. ಈ ರಾಜ್ಯಗಳು ಕೇಂದ್ರದಿಂದ ಉತ್ತಮ ಆರ್ಥಿಕ ನೆರವು ಪಡೆಯುತ್ತವೆ. ಇದಕ್ಕೆ ವಿರುದ್ಧವಾಗಿ ತನ್ನ ರಾಜ್ಯವು ಬಹಳ ಕಡಿಮೆ ಹಣವನ್ನು ಪಡೆದಿದೆ ಎಂದು ಟೀಕಿಸಿದ್ದಾರೆ. ಇದನ್ನೂ ಓದಿ: ನೀವು ಮಾಡಿರುವ ತಪ್ಪಿಗೆ ನಮ್ಮನ್ನು ದೂಷಿಸಬೇಡಿ – ಮೋದಿ ವಿರುದ್ಧ ಠಾಕ್ರೆ ಕಿಡಿ

ಇಂಧನ ಬೆಲೆ ಏರಿಕೆಗೆ ರಾಜ್ಯ ಸರ್ಕಾರಗಳು ಹೊಣೆಯಾಗುವುದಿಲ್ಲ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *