ಕೈ ನಾಯಕ ಮಂಜುನಾಥ ಗೌಡಗೆ ಇಡಿ ಶಾಕ್‌ – 13.91 ಕೋಟಿ ಆಸ್ತಿ ಮುಟ್ಟುಗೋಲು

Public TV
1 Min Read

ಬೆಂಗಳೂರು: ಕಾಂಗ್ರೆಸ್ (Congress) ಮುಖಂಡ ಮಂಜುನಾಥ ಗೌಡ (Manjunath Gowda) ಜಾರಿ ನಿರ್ದೇಶನಾಲಯ (ED) ಬಿಗ್‌ ಶಾಕ್‌ ನೀಡಿದ್ದು 13.91 ಕೋಟಿ ರೂ. ಮೌಲ್ಯದ ಚರಾಸ್ತಿ ಹಾಗೂ ಸ್ತಿರಾಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿದೆ.

ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ನಲ್ಲಿ (Shivamogga DCC Bank Scam) ನಕಲಿ ಚಿನ್ನಾಭರಣ ಅಡವಿಟ್ಟು 62.77 ಕೋಟಿ ರೂ. ಸಾಲ ಪಡೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಕಳೆದ ಏಪ್ರಿಲ್ ನಲ್ಲಿ ಶಿವಮೊಗ್ಗದಲ್ಲಿ ಮಂಜುನಾಥ ಗೌಡ ಅವರ ಮನೆ, ಕಚೇರಿ ಸೇರಿದಂತೆ 8 ಕಡೆ ದಾಳಿ ನಡೆಸಿತ್ತು.  ಇದನ್ನೂ ಓದಿ: ಪತ್ನಿ ಮನೆಬಿಟ್ಟು ಹೋಗಿದ್ದಕ್ಕೆ ಬೇಸತ್ತು ಪತಿ ಆತ್ಮಹತ್ಯೆ

 

ಸ್ಥಿರ ಮತ್ತು ಚರ ಆಸ್ತಿಗಳನ್ನು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (PMLA) ಅಡಿಯಲ್ಲಿ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎಂದು ಇಡಿ ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದೆ.

ಶಿವಮೊಗ್ಗದಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ಶಿವಮೊಗ್ಗ ಜಿಲ್ಲಾ ಸಹಕಾರಿ ಕೇಂದ್ರ ಬ್ಯಾಂಕಿನ ಮಾಜಿ ಅಧ್ಯಕ್ಷರಾದ ಮಂಜುನಾಥ್ ಗೌಡ ಪರಪ್ಪನ ಅಗ್ರಹಾರದಲ್ಲಿ (Parappana Agrahara) ನ್ಯಾಯಾಂಗ ಬಂಧನದಲ್ಲಿದ್ದಾರೆ.

Share This Article