ಯಾದಗಿರಿ: ಮಲ್ಲಿಕಾರ್ಜುನ ಮುತ್ಯಾ (Mallikarjun Muthya) ವಿರುದ್ಧದ ಪೋಕ್ಸೋ ಕೇಸ್ (POCSO Case) ತನಿಖೆಗೆ ಕಲಬುರಗಿ ವಿಭಾಗೀಯ ಪೀಠ ತಡೆ ನೀಡಿದೆ.
ಬಾಲಕಿ ಜೊತೆ ಅನುಚಿತವಾಗಿ ವರ್ತಿಸಿದ್ದಕ್ಕೆ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಫೆ.25ರಂದು ಯಾದಗಿರಿಯ ಗೋಗಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕೇಸ್ ದಾಖಲಾಗಿತ್ತು. ಈ ಪ್ರಕರಣವನ್ನು ಶಹಾಪುರ ಸಿಪಿಐ ಶರಣಗೌಡ ನ್ಯಾಮಣ್ಣನವರ ತನಿಖೆ ನಡೆಸುತ್ತಿದ್ದರು. ಈ ಸಂಬಂಧ ತನಿಖೆಗೆ ತಡೆ ನೀಡುವಂತೆ ಮುತ್ಯಾ ಹೈಕೋಟ್‌ಗೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಕೋರ್ಟ್ ತನಿಖೆಗೆ ಮದ್ಯಂತರ ತಡೆ ನೀಡಿದೆ. ಇದನ್ನೂ ಓದಿ: ಕಾಂಗ್ರೆಸ್ ಜೊತೆ ಬಲವಂತದ ಮದುವೆಯಲ್ಲಿದ್ದೆ, ನಮ್ಮನ್ನು ಬಿಟ್ಟು ಹೋಗಿದ್ದಕ್ಕೆ ವಿಚ್ಛೇದನ ನೀಡಿದ್ದೇನೆ: ಹೆಚ್‌ಡಿಡಿ ತಿರುಗೇಟು
ಏನಿದು ಪ್ರಕರಣ?
ಬಾಲಕಿಯ ಜೊತೆ ಮಲ್ಲಿಕಾರ್ಜುನ ಮುತ್ಯಾ ಅಸಭ್ಯವಾಗಿ ನಡೆದುಕೊಂಡಿದ್ರು. ಹೀಗಾಗಿ ಮುತ್ಯಾನ ವಿರುದ್ಧ ಕ್ರಮ ಜರುಗಿಸಲು ರಾಜ್ಯ ಮಕ್ಕಳ ಹಕ್ಕುಗಳ ಆಯೋಗ ದೂರು ದಾಖಲಿಸಿಕೊಂಡಿತ್ತು. ಯಾದಗಿರಿ ಎಸ್ಪಿ ಅವರಿಗೆ ಪತ್ರವನ್ನೂ ಬರೆದಿದ್ದರು. ದೂರಿನ ಆಧಾರದ ಮೇಲೆ ಗೋಗಿ ಪೊಲೀಸ್ ಠಾಣೆಯಲ್ಲಿ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪೋಕ್ಸೋ ಕೇಸ್ ದಾಖಲಾಗಿದೆ. ಬಾಲಕಿಯ ಪೋಷಕರು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಬಿಟ್ಟಿದ್ದು, ನನ್ನ ಮಗಳ ಜೊತೆ ಮುತ್ಯಾ ಅಸಭ್ಯವಾಗಿ ವರ್ತನೆ ಮಾಡಿಲ್ಲ ಎಂದಿದ್ದಾರೆ.

