ಮೆಟ್ರೋ ನಿಲ್ದಾಣದಲ್ಲಿ ಕೇಜ್ರಿವಾಲ್‌ಗೆ ಬೆದರಿಕೆ ಸಂದೇಶ- ಆರೋಪಿ ಅರೆಸ್ಟ್

Public TV
1 Min Read

ನವದೆಹಲಿ: ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ (AAP) ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರಿಗೆ ಕೊಲೆ ಬೆದರಿಕೆ ಸಂದೇಶ ಬರೆದಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ.

ಬಂಧಿತನನ್ನು 33 ವರ್ಷದ ಆರೋಪಿ ಅಂಕಿತ್ ಗೋಯಲ್ ಎಂದು ಗುರುತಿಸಲಾಗಿದೆ. ಈತ ದೆಹಲಿ ಮೆಟ್ರೋ ನಿಲ್ದಾಣದಲ್ಲಿ ಬೆದರಿಕೆ ಸಂದೇಶ ಬರೆದಿದ್ದನು. ಅಂಕಿತ್‌ ಕೃತ್ಯ ಮೆಟ್ರೋ ನಿಲ್ದಾಣದಲ್ಲಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಸಾಕ್ಷಿ ಆಧರಿಸಿ ದೆಹಲಿ ಪೊಲೀಸರು ಬಂಧಿಸಿದ್ದು, ಮೆಟ್ರೋ ಘಟಕವು ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ನಡೆಸುತ್ತಿದೆ. ಇದನ್ನೂ ಓದಿ: ಮದ್ಯ ಕುಡಿಯಲು 90 ನಿಮಿಷದಲ್ಲಿ 48,000 ರೂ. ಖರ್ಚು ಮಾಡಿದ್ದ ಕಿಲ್ಲರ್‌ ಬಾಯ್‌ – ಮುಂದಾಗಿದ್ದೇನು ಗೊತ್ತೇ?

ಮೂಲಗಳ ಪ್ರಕಾರ ಆರೋಪಿ ಬರೇಲಿ ನಿವಾಸಿಯಾಗುದ್ದು, ಉನ್ನತ ಶಿಕ್ಷಣ ಪಡೆದಿದ್ದಾನೆ. ಅಲ್ಲದೇ ಹೆಸರಾಂತ ಬ್ಯಾಂಕ್‌ನಲ್ಲಿ ಕೆಲಸ ಮಾಡುತ್ತಿದ್ದಾನೆ. ಆರೋಪಿಯು ಯಾವುದೇ ರಾಜಕೀಯ ಪಕ್ಷದೊಂದಿಗೆ ಸಂಬಂಧ ಹೊಂದಿಲ್ಲ. ಪೊಲೀಸ್ ಮೂಲಗಳ ಪ್ರಕಾರ, ಆರೋಪಿಯ ಮಾನಸಿಕ ಸ್ಥಿತಿ ಚೆನ್ನಾಗಿಲ್ಲ ಎಂದು ತೋರುತ್ತದೆ, ಆದರೆ ವೈದ್ಯಕೀಯ ಪರೀಕ್ಷೆಯ ನಂತರವೇ ಇದನ್ನು ಖಚಿತಪಡಿಸಬಹುದಾಗಿದೆ ಎನ್ನಲಾಗಿದೆ.

ಈ ಹಿಂದೆ ಬೆದರಿಕೆ ಸಂದೇಶ ಕುರಿತು ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿದ್ದ ಎಎಪಿ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಸಾರ್ವಜನಿಕವಾಗಿ ಜೀವ ಬೆದರಿಕೆ ಹಾಕಲಾಗುತ್ತಿದೆ. ಪಿಎಂಒ, ಬಿಜೆಪಿ ಮತ್ತು ನರೇಂದ್ರ ಮೋದಿಯವರ ಆದೇಶದ ಮೇರೆಗೆ ರಾಜೀವ್ ಚೌಕ್, ಪಟೇಲ್ ನಗರ ಮೆಟ್ರೋ ನಿಲ್ದಾಣದಲ್ಲಿ ಬೆದರಿಕೆ ಸಂದೇಶ ಬರೆಯಲಾಗಿದೆ. ಹೀಗಾಗಿ ಅರವಿಂದ್ ಕೇಜ್ರಿವಾಲ್ ಅವರಿಗೆ ಏನಾದರೂ ಸಂಭವಿಸಿದರೆ ಅದಕ್ಕೆ ಬಿಜೆಪಿ ಮತ್ತು ನರೇಂದ್ರ ಮೋದಿ ನೇರ ಹೊಣೆಯಾಗುತ್ತಾರೆ ಎಂದು ಗಂಭೀರ ಆರೋಪ ಮಾಡಿತ್ತು.

Share This Article