ದೊಡ್ಡಬಳ್ಳಾಪುರದಲ್ಲಿ ಸಿಎಂ ಬೊಮ್ಮಾಯಿ ಕಾರ್ ತಡೆದ ಅಧಿಕಾರಿಗಳು!

By
1 Min Read

ಚಿಕ್ಕಬಳ್ಳಾಪುರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೂ ಚುನಾವಣಾ ಬಿಸಿ ತಟ್ಟಿದ್ದು, ಇಂದು ದೊಡ್ಡಬಳ್ಳಾಪುರ (Doddaballapur) ದಲ್ಲಿ ಅಧಿಕಾರಿಗಳು ಸಿಎಂ ಕಾರು ತಡೆದು ತಪಾಸಣೆ ನಡೆಸಿದ್ದಾರೆ.

ಸಿಎಂ ಪುತ್ರನ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಸಿಎಂ ಇಂದು ಘಾಟಿ ಸುಬ್ರಮಣ್ಯ ದೇವಾಲಯ (Ghati Subramanya Temple) ಕ್ಕೆ ಹೋಗುತ್ತಿದ್ದರು. ಈ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ಬಳಿಯ ಹೊಸಹುಡ್ಯ ಚೆಕ್ ಪೋಸ್ಟ್ ಬಳಿ ಚುನಾವಣಾಧಿಕಾರಿಗಳು ಕಾರು ನಿಲ್ಲಿಸಿ ತಪಾಸಣೆ ನಡೆಸಿದ್ದಾರೆ. ಇದನ್ನೂ ಓದಿ: ಜೆಡಿಎಸ್‌ಗೆ ಸರಣಿ ಆಘಾತ – ಐವರು ನಾಯಕರು ಗುಡ್‌ಬೈ

ವಿಧಾನಸಭಾ ಚುನಾವಣಾ ನೀತಿ ಸಂಹಿತೆ ಜಾರಿಯಿರುವ ಹಿನ್ನೆಲೆ ಚೆಕ್ ಪೋಸ್ಟ್ ನಲ್ಲಿ ಸಿಎಂ ಕಾರು (Basavaraj Bommai car) ಪರಿಶೀಲನೆ ನಡೆಸಲಾಗಿದೆ. ಈ ವೇಳೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಹಾಗೂ ಎಸ್ ಎಸ್ ಟಿ ಸ್ಥಳದಲ್ಲಿ ಹಾಜರಿದ್ದರು.

Share This Article