ಚಿತ್ರದುರ್ಗ | ರಸ್ತೆ ದಾಟುತ್ತಿದ್ದ ಪೊಲೀಸ್ ಕಾನ್ಸ್ಟೇಬಲ್‌ಗೆ ಲಾರಿ ಡಿಕ್ಕಿ – ಗಂಭೀರ ಗಾಯ

Public TV
1 Min Read

ಚಿತ್ರದುರ್ಗ: ರಸ್ತೆ ದಾಟುತ್ತಿದ್ದ ಪೊಲೀಸ್ ಕಾನ್ಸ್ಟೇಬಲ್‌ಗೆ (Police Constable) ಲಾರಿ (Lorry) ಡಿಕ್ಕಿಯಾದ ಪರಿಣಾಮ ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿತ್ರದುರ್ಗ (Chitradurga) ಜಿಲ್ಲೆ ಹಿರಿಯೂರು (Hiriyur) ತಾಲೂಕಿನ ಐಮಂಗಲ ಗ್ರಾಮದ ಬಳಿ ನಡೆದಿದೆ.

ತರಬೇತಿಗಾಗಿ ಐಮಂಗಲ ಪೊಲೀಸ್ ತರಬೇತಿ ಶಾಲೆಗೆ ಆಗಮಿಸಿದ್ದ ಬೆಳಗಾವಿಯ ಪೊಲೀಸ್ ಕಾನ್ಸ್ಟೇಬಲ್‌ ಸಂಗಮೇಶ್ ನಾಯಕ್ (29) ರಸ್ತೆ ದಾಟುವ ವೇಳೆ ಲಾರಿ ಡಿಕ್ಕಿಯಾಗಿದ್ದು, ಗಂಭೀರವಾಗಿ ಗಾಯಗೊಂಡಿದ್ದಾರೆ. ಇದನ್ನೂ ಓದಿ: ಸನಾತನ ಧರ್ಮಕ್ಕೆ ಅವಮಾನ ಸಹಿಸಲ್ಲ- ಸಿಜೆಐ ಗವಾಯಿ ಮೇಲೆ ಶೂ ಎಸೆಯಲು ಮುಂದಾದ ವಕೀಲ

ಲಾರಿ ಡಿಕ್ಕಿಯ ರಭಸಕ್ಕೆ ಸಂಗಮೇಶ್ ಕಾಲು, ತಲೆ ಮತ್ತು ಮುಖಕ್ಕೆ ತೀವ್ರ ಪೆಟ್ಟುಗಳಾಗಿದ್ದು, ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಐಮಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಇದನ್ನೂ ಓದಿ: ಚಾಮುಂಡಿ ಬೆಟ್ಟದಲ್ಲಿ ವೈಭವದಿಂದ ನೆರವೇರಿದ ಅಮ್ಮನವರ ರಥೋತ್ಸವ

Share This Article