Hassan | ಮೂಳೆ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಪೊಲೀಸ್ ಕಾನ್ಸ್‌ಟೇಬಲ್ ನೇಣಿಗೆ ಶರಣು

Public TV
1 Min Read

ಹಾಸನ: ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದ ಹಿನ್ನೆಲೆ ನೇಣು ಬಿಗಿದುಕೊಂಡು ಪೊಲೀಸ್ ಕಾನ್ಸ್‌ಟೇಬಲ್ (Police Constable) ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ (Hassan) ಹೊರವಲಯದ ಗೆಂಡೆಕಟ್ಟೆ ಫಾರೆಸ್ಟ್ ಬಳಿ ನಡೆದಿದೆ.

ನಟೇಶ್ (38) ಆತ್ಮಹತ್ಯೆಗೆ ಶರಣಾದ ಪೊಲೀಸ್ ಕಾನ್ಸ್‌ಟೇಬಲ್. ಮೂಲತಃ ಅರಕಲಗೂಡು ತಾಲೂಕಿನ ಚಿಕ್ಕಬೊಮ್ಮನಹಳ್ಳಿ ಗ್ರಾಮದ ನಟೇಶ್, 2008ನೇ ಸಾಲಿನಲ್ಲಿ ನಾಗರಿಕ ಪೊಲೀಸ್ ಪೇದೆಯಾಗಿ ಆಯ್ಕೆಯಾಗಿದ್ದರು. ಅರಕಲಗೂಡು ಪೊಲೀಸ್ ಠಾಣೆಯಲ್ಲಿ ನಟೇಶ್ ಕರ್ತವ್ಯ ನಿರ್ವಹಿಸುತ್ತಿದ್ದರು. ಕಳೆದ 3 ತಿಂಗಳಿನಿಂದ ಮೂಳೆ ಕ್ಯಾನ್ಸರ್ (Bone Cancer) ಖಾಯಿಲೆಯಿಂದ ಬಳಲುತ್ತಿದ್ದ ನಟೇಶ್ ಬೆಂಗಳೂರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇದನ್ನೂ ಓದಿ: ಸರ್ಕಾರಿ ಕಚೇರಿ ನವೀಕರಣಕ್ಕೂ ಅನುದಾನ ಕೊರತೆ – ಸಿಬ್ಬಂದಿಯೇ ದೇಣಿಗೆ ಸಂಗ್ರಹಿಸಿ ಕಚೇರಿ ದುರಸ್ತಿ

ಕಳೆದ ಒಂದು ವಾರದಿಂದ ನಟೇಶ್ ಹಾಸನ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದರು. ಬುಧವಾರ ಸಂಜೆ ಆಸ್ಪತ್ರೆಯಿಂದ ಕಾಣೆಯಾಗಿದ್ದ ನಟೇಶ್, ಗೆಂಡೆಕಟ್ಟೆ ಅರಣ್ಯ ಬಳಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಳೆದ ಒಂದು ತಿಂಗಳ ಹಿಂದೆ ಮುಖ್ಯಪೇದೆಯಾಗಿ ಮುಂಬಡ್ತಿ ಪಡೆದಿದ್ದ ನಟೇಶ್ ಹೊಳೆನರಸಿಪುರ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದರು. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ಉತ್ತರ ಕನ್ನಡದಲ್ಲಿ ಭಾರೀ ಮಳೆ – 5 ತಾಲೂಕಿನ ಶಾಲೆಗಳಿಗೆ ಇಂದು ರಜೆ ಘೋಷಣೆ

Share This Article