ದಾವಣಗೆರೆ: ಬೈಕ್‌ಗೆ ಟ್ರ್ಯಾಕ್ಟರ್ ಡಿಕ್ಕಿಯಾದ ಪರಿಣಾಮ ಪೊಲೀಸ್ ಹೆಡ್ ಕಾನ್ಸ್‌ಟೇಬಲ್ ಸಾವನಪ್ಪಿರುವ ಘಟನೆ ದಾವಣಗೆರೆ (Davanagere) ನಗರದ ಸಂಗೊಳ್ಳಿ ರಾಯಣ್ಣ ಫ್ಲೈ ಓವರ್‌ನಲ್ಲಿ ನಡೆದಿದೆ.
ಎಸ್‌ಪಿ ಕಚೇರಿಯಲ್ಲಿ ಹೆಡ್ ಕಾನ್ಸ್‌ಟೇಬಲ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಎ.ಗುರುಮೂರ್ತಿ(49) ಮೃತ ದುರ್ದೈವಿ. ಇದನ್ನೂ ಓದಿ: ಶಾಲಿನಿ ರಜನೀಶ್ ವಿರುದ್ಧ ಅಸಭ್ಯ ಹೇಳಿಕೆ – ರವಿಕುಮಾರ್ ವಿರುದ್ಧ ಕೇಸ್ ದಾಖಲು
ಗುರುಮೂರ್ತಿಯವರು ಎಸ್‌ಪಿ ಕಚೇರಿಯಲ್ಲಿ ಡ್ಯೂಟಿ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಸಂಗೊಳ್ಳಿ ರಾಯಣ್ಣ ಫ್ಲೈ ಓವರ್ ಮೇಲೆ ಹೋಗುತ್ತಿದ್ದಾಗ ಎದುರುಗಡೆಯಿಂದ ಬಂದ ಟ್ರ್ಯಾಕ್ಟರ್, ಬೈಕ್‌ಗೆ ಡಿಕ್ಕಿಯಾಗಿದೆ. ಇದನ್ನೂ ಓದಿ: ಹಾಸನ| ಪತ್ನಿಯನ್ನು ಕೊಂದು ಹೃದಯಾಘಾತವಾಗಿದೆ ಎಂದು ಬಿಂಬಿಸಿದ್ನಾ ಪತಿ?
ಗಂಭೀರ ಗಾಯಗೊಂಡಿದ್ದ ಗುರುಮೂರ್ತಿಯವರನ್ನು ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾರೆ. ಅಪಘಾತದ ರಭಸಕ್ಕೆ ಬೈಕ್ ಸಂಪೂರ್ಣ ನಜ್ಜುಗುಜ್ಜಾಗಿದೆ. ಇದನ್ನೂ ಓದಿ: ಬೆಳಿಗ್ಗೆ ಮದುವೆ, ರಾತ್ರಿ ನೇಣು ಬಿಗಿದು ಆತ್ಮಹತ್ಯೆ – ಡೇಟಾ ಆಪರೇಟರ್ ಸಾವಿನ ಸುತ್ತ ಅನುಮಾನದ ಹುತ್ತ
ಆಸ್ಪತ್ರೆಗೆ ಎಸ್ಪಿ ಉಮಾ ಪ್ರಶಾಂತ್ ಭೇಟಿ ನೀಡಿ, ಪರಿಶೀಲನೆ ನಡೆಸಿ ಮಾಹಿತಿ ಕಲೆ ಹಾಕಿದ್ದಾರೆ. ಗುರುಮೂರ್ತಿ ಅವರು ಕಳೆದುಕೊಂಡ ಕುಟುಂಬದ ಆಕ್ರಂದನ ಮುಗಿಲುಮುಟ್ಟಿದೆ.