ನಟ ಮಡೆನೂರು ಮನು ರೇಪ್ ಕೇಸ್ – 31 ತಿಂಗಳ ವಾಟ್ಸಾಪ್ ಚಾಟ್ ಪಡೆದಿರೋ ಪೊಲೀಸರು

Public TV
1 Min Read

ಬೆಂಗಳೂರು: ಮಡೆನೂರು ಮನು(Madenur Manu) ಅತ್ಯಾಚಾರ ಪ್ರಕರಣ ತನಿಖೆ ನಡೆಸುತ್ತಿರುವ ಪೊಲೀಸರು, ಬರೋಬ್ಬರಿ 31 ತಿಂಗಳ ಚಾಟಿಂಗ್ ಡಿಟೇಲ್ಸ್ ಪಡೆದುಕೊಂಡಿದ್ದಾರೆ.

ಸಂತ್ರಸ್ತೆ ದೂರಿನಲ್ಲಿ ಉಲ್ಲೇಖಿಸಿದಂತೆ ನವೆಂಬರ್ 2022ರಿಂದ ಮೇ 2025ರವರೆಗೆ ನನ್ನ ಮೇಲೆ ನಿರಂತರ ಅತ್ಯಾಚಾರ ಎಸಗಿದ್ದಾರೆ. ದೂರಿನಲ್ಲಿ ಮದುವೆ ಹೆಸರಿನಲ್ಲಿ ಅತ್ಯಾಚಾರ ಎಸಗಿ ದೈಹಿಕ ಹಲ್ಲೆ ಮಾಡಿ ಜೀವಬೆದರಿಕೆ ಹಾಕಿದ್ದಾರೆಂದು ಉಲ್ಲೇಖಿಸಿದ್ದರು. ಪ್ರಕರಣ ಸಂಬಂಧ ಆರೋಪಿ ಮಡೆನೂರು ಮನುವನ್ನು ಪೊಲೀಸರು ಕಸ್ಟಡಿಗೆ ಪಡೆದು ಹೇಳಿಕೆ ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ: ಮಡೆನೂರು ಮನು ವಿವಾದದಲ್ಲಿ ಅಪ್ಪಣ ಹೆಸರು ತಳುಕು – ನಟ ಹೇಳಿದ್ದೇನು?

ನಟನ 2 ಮೊಬೈಲ್ ಹಾಗೂ ಸಂತ್ರಸ್ತೆಯ 2 ಫೋನ್ ವಶಕ್ಕೆ ಪಡೆದು ಎಫ್‌ಎಸ್‌ಎಲ್‌ಗೆ ಕಳುಹಿಸಿದ್ದಾರೆ. ಇನ್ನು ಸಂತ್ರಸ್ತೆ ಹಾಗೂ ನಟನ ನಡುವಿನ ಆಡಿಯೋ, ವೀಡಿಯೋ ಸಂಭಾಷಣೆಯಲ್ಲಿ ಹಲವು ನಟ, ನಟಿಯರ ಹೆಸರು ಕೇಳಿಬಂದಿದೆ. ಈ ಹಿನ್ನೆಲೆ ಪೊಲೀಸರು ತನಿಖೆಯ ಭಾಗವಾಗಿ ಕೆಲ ಕಿರುತೆರೆ ನಟ, ನಟಿ ಸೇರಿ ಸಿನಿತಾರೆಯರ ಹೇಳಿಕೆ ದಾಖಲಿಸಲು ಸಿದ್ಧತೆ ನಡೆಸಲಾಗಿದೆ.

Share This Article