ಬೆಂಗಳೂರು | ಆಟೋ ಚಾಲಕನ ಮೇಲೆ ಚಪ್ಪಲಿಯಿಂದ ಹಲ್ಲೆ ಮಾಡಿದ್ದ ಮಹಿಳೆಯ ವಿಚಾರಣೆ

Public TV
1 Min Read

– ಹಲ್ಲೆ ಮಾಡಿದ್ದು ನಿಜ ಎಂದ ಮಹಿಳೆ

ಬೆಂಗಳೂರು: ಬೆಳ್ಳಂದೂರಿನಲ್ಲಿ (Bellanduru) ಆಟೋ ಚಾಲಕನ ಮೇಲೆ ಚಪ್ಪಲಿಯಿಂದ ಹಲ್ಲೆ ಮಾಡಿದ್ದ ಮಹಿಳೆ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗಿ ಹೇಳಿಕೆ ದಾಖಲಿಸಿದ್ದಾಳೆ. ವಿಚಾರಣೆ ವೇಳೆ ಆಟೋ ಚಾಲಕನ ಮೇಲೆ ಹಲ್ಲೆ ಮಾಡಿರುವುದನ್ನು ಮಹಿಳೆ ಒಪ್ಪಿಕೊಂಡಿದ್ದಾಳೆ.

ಹಲ್ಲೆ ಮಾಡಿದ್ದ ಮಹಿಳೆ ಪನ್ಪೂರಿ ಮಿಶ್ರಾಳನ್ನು (28) ಬೆಳ್ಳಂದೂರು ಪೊಲೀಸ್ ಠಾಣೆಗೆ ಕರೆಸಲಾಗಿತ್ತು. ಮಹಿಳೆ ಬಿಹಾರ ಮೂಲದವಳಾಗಿದ್ದು, ತನ್ನ ಪತಿಯೊಂದಿಗೆ ವಾಸವಾಗಿದ್ದಾಳೆ ಎಂದು ತಿಳಿದು ಬಂದಿದೆ. ಇದನ್ನೂ ಓದಿ: ಬೆಂಗಳೂರು | ಆಟೋ ಚಾಲಕನಿಗೆ ಹಿಂದಿಯಲ್ಲಿ ಯುವತಿಯ ಆವಾಜ್ – ಚಪ್ಪಲಿಯಲ್ಲಿ ಹಲ್ಲೆ ನಡೆಸಿ ಕ್ರೌರ್ಯ

ಗರ್ಭಿಣಿಯಾಗಿರುವ ಮಹಿಳೆ, ಆಸ್ಪತ್ರೆಗೆ ತೆರಳಿ ವಾಪಸ್ ಆಗುತ್ತಿದ್ದಳು. ಈ ವೇಳೆ ಬೆಳ್ಳಂದೂರು ಬಳಿ ಆಕೆಯ ದ್ವಿಚಕ್ರ ವಾಹನಕ್ಕೆ ಹಿಂದಿನಿಂದ ಆಟೋ ಡಿಕ್ಕಿಯಾಗಿತ್ತು ಎಂದು ಹೇಳಿಕೊಂಡಿದ್ದಾಳೆ. ಇದನ್ನ ಪ್ರಶ್ನಿಸಿದ್ದಕ್ಕೆ ಆಟೋ ಡ್ರೈವರ್ ಬೈದು ಹಲ್ಲೆಗೆ, ಯತ್ನಿಸಿದ್ದಾನೆ ಎಂದು ಮಹಿಳೆ ಆರೋಪಿಸಿದ್ದಾಳೆ.

ಘಟನೆ ವೇಳೆ ಕೋಪಗೊಂಡು ಚಪ್ಪಲಿಯಿಂದು ಹಲ್ಲೆ ಮಾಡಿದೆ ಎಂದು ಪೊಲೀಸರ ಮುಂದೆ ಹೇಳಿಕೊಂಡಿದ್ದಾಳೆ. ಮಹಿಳೆಯ ಹೇಳಿಕೆ ದಾಖಲಿಸಿಕೊಂಡು ಪೊಲೀಸರು ಆಕೆಯನ್ನು ವಾಪಸ್ ಕಳುಹಿಸಿದ್ದಾರೆ.

ಈ ಸಂಬಂಧ ಜೂನ್ 2 ರಂದು ಕೋರ್ಟ್‍ಗೆ ಚಾರ್ಜ್‍ಶೀಟ್ ಸಲ್ಲಿಸಲು ಪೊಲೀಸರು ಮುಂದಾಗಿದ್ದಾರೆ.

ಘಟನೆ ಸಂಬಂಧ ಬೆಳ್ಳಂದೂರು ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿತ್ತು. ಹಲ್ಲೆ ಮಾಡಿದ್ದ ಮಹಿಳೆಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಟೋ ಚಾಲಕರು ಹಾಗೂ ಸಾರ್ವಜನಿಕರು ಆಗ್ರಹಿಸಿದ್ದರು. ಇದನ್ನೂ ಓದಿ: ತಿರುಪತಿಗೆ ತೆರಳಿದ್ದ ಉದ್ಯಮಿ ಮನೆಯಲ್ಲಿ ಚಿನ್ನಾಭರಣ ದೋಚಿದ ನೇಪಾಳಿ ದಂಪತಿ

Share This Article