ನಿನಗೂ, ರೌಡಿಗಳಿಗೂ ಏನು ವ್ಯತ್ಯಾಸ..?- ದುನಿಯಾ ವಿಜಯ್‍ಗೆ ಪೊಲೀಸರಿಂದ ಫುಲ್ ಕ್ಲಾಸ್!

Public TV
3 Min Read

ಬೆಂಗಳೂರು: ನಿನಗೂ, ರೌಡಿಗಳಿಗೂ ಏನು ವ್ಯತ್ಯಾಸ. ನಿನ್ನ ಮೇಲೆ ಪದೇ ಪದೇ ಪ್ರಕರಣಗಳು ದಾಖಲಾಗುತ್ತಿವೆ ಎಂದು ಎಸಿಪಿ ರವಿಶಂಕರ್, ನಟ ದುನಿಯಾ ವಿಜಯ್‍ಗೆ ಫುಲ್ ಕ್ಲಾಸ್ ತೆಗೆದುಕೊಂಡಿದ್ದಾರಂತೆ.

ಮಾರುತಿಗೌಡ ಕಿಡ್ನಾಪ್ ಮತ್ತು ಹಲ್ಲೆ ಕುರಿತು ವಿಚಾರಣೆ ನಡೆಸುತ್ತಿರುವ ಎಸಿಪಿ ರವಿಶಂಕರ್ ಅವರು, ನಿನ್ನ ಈ ವರ್ತನೆಯಿಂದಾಗಿ ಪ್ರಕರಣಗಳು ದಾಖಲಾಗುತ್ತಿವೆ. ಹಳೇ ಪ್ರಕರಣಗಳು ಇನ್ನೂ ಇತ್ಯರ್ಥವಾಗಿಲ್ಲ, ಆಗಲೇ ನಿನ್ನ ವರಸೆ ಶುರು ಮಾಡಿದ್ದೀಯಾ. ಹೀಗಾಗಿ ರೌಡಿಗಳಿಗೂ ನಿನಗೂ ಇರೋ ವ್ಯತ್ಯಾಸ ಏನು ಎಂದು ಪ್ರಶ್ನಿಸಿದ್ದಾರಂತೆ. ಇದನ್ನೂ ಓದಿ: ಜಂಗ್ಲಿ ಮೇಲಿದೆ ಸಾಲು ಸಾಲು ಪ್ರಕರಣಗಳು!

ಶನಿವಾರ ರಾತ್ರಿ ಏನಾಯಿತು ಅಂತ ವಿವರಿಸುವಂತೆ ಎಸಿಪಿ ರವಿಶಂಕರ್, ವಿಜಯ್‍ರನ್ನು ಕೇಳಿದ್ದಾರೆ. ವಿಜಯ್ ಘಟನೆಯ ವಿವರವನ್ನು ಒಪ್ಪಿಸಿದ್ದು, ನಾನು ಯಾವುದೇ ತಪ್ಪು ಮಾಡಿಲ್ಲವೆಂದು ಪಟ್ಟು ಹಿಡಿದಿದ್ದಾರೆ. ಇದಕ್ಕೆ ಉತ್ತರಿಸಿದ ರವಿಶಂಕರ್ ನ್ಯಾಯಾಲಯದಲ್ಲಿ ವಾದ ವಿವಾದದ ಬಳಿಕ ಸತ್ಯಾಂಶ ಹೊರಬರುತ್ತದೆ ಎಂದು ಗರಂ ಆಗಿದ್ದಾರೆ ಎನ್ನಲಾಗಿದೆ.

ಸಂಜೆಯವೆರೆಗೂ ದುನಿಯಾ ವಿಜಯ್‍ಗೆ ಕ್ಲಾಸ್ ತೆಗೆದುಕೊಂಡು, ಬಳಕಿ ನ್ಯಾಯಾಧೀಶರ ಮುಂದೆ ಹಾಜರು ಪಡಿಸಲು ಪೊಲೀಸರು ನಿರ್ಧರಿಸಿದ್ದಾರಂತೆ. ಈಗಾಗಲೇ ವಿಜಯ್ ವಿರುದ್ಧ ಸಿಸಿಬಿ ಹಾಗೂ ಚನ್ನಮ್ಮ ಅಚ್ಚುಕಟ್ಟು ಠಾಣೆಯಲ್ಲಿ ಪ್ರಕರಣಗಳು ದಾಖಲಾಗಿವೆ.

ನಡೆದಿದ್ದೇನು?
ಶನಿವಾರ ವಸಂತನಗರದ ಅಂಬೇಡ್ಕರ್ ಭವನದಲ್ಲಿ ಮಿಸ್ಟರ್ ಬೆಂಗಳೂರು ಬಾಡಿ ಬಿಲ್ಡಿಂಗ್ ಸ್ಪರ್ಧೆ ನಡೆಯುತಿತ್ತು. ಈ ಕಾಂಪಿಟೇಷನ್ ನೋಡಲು ದುನಿಯಾ ವಿಜಿ ಮತ್ತು ತಂಡ ಬಂದಿತ್ತು. ಈ ವೇಳೆ ಪಾನಿಪೂರಿ ಕಿಟ್ಟಿ ಅಣ್ಣನ ಮಗ ಮಾರುತಿಗೌಡ ಮತ್ತು ದುನಿಯಾ ವಿಜಿ ನಡುವೆ ಮಾತಿನ ಚಕಮಕಿ ನಡೆದಿದೆ. ಆದರೆ ಗಲಾಟೆ ವಿಕೋಪಕ್ಕೆ ತಿರುಗಿ ದುನಿಯಾ ವಿಜಯ್ ಗ್ಯಾಂಗ್, ಮಾರುತಿಗೌಡನ ಮೇಲೆ ಹಲ್ಲೆ ನಡೆಸಿ ಕಾರಿನಲ್ಲಿ ಹಾಕಿಕೊಂಡು ಕಿಡ್ನಾಪ್ ಮಾಡಿದ್ದಾರೆ. ದುನಿಯಾ ವಿಜಿ, ಮಣಿ ಮತ್ತು ಪ್ರಸಾದ್ ಸಹಚರರಿಂದ ಈ ಕೃತ್ಯ ನಡೆದಿದೆ.

ಮಾರುತಿಗೌಡ ಸಹಚರರಿಂದ ದೂರು ಪಡೆದ ಹೈಗ್ರೌಂಡ್ ಪೊಲೀಸರು ಮೊದಲಿಗೆ ದುನಿಯಾ ವಿಜಯ್‍ಗೆ ಕರೆ ಮಾಡಿ ಎಚ್ಚರಿಸಿದ್ದಾರೆ. ನಂತರ 30 ನಿಮಿಷದ ನಂತರ ಕಿಡ್ನಾಪ್ ಮಾಡಿದ್ದ ಮಾರುತಿಗೌಡನೊಂದಿಗೆ ದುನಿಯಾ ವಿಜಯ್ ಹೈಗ್ರೌಂಡ್ ಪೊಲೀಸ್ ಠಾಣೆ ಬಳಿ ತನ್ನ ರೇಂಜ್ ರೋವರ್ ಕಾರಿನಲ್ಲಿ ಪ್ರತ್ಯಕ್ಷನಾಗಿದ್ದಾರೆ. ಜೊತೆಗೆ ಹಲ್ಲೆ ಮಾಡಿದ್ದ ಜಿಮ್ ಟ್ರೇನರ್ ಮಾರುತಿಗೌಡನ್ನ ಕರೆದುಕೊಂಡು ಬಂದಿದ್ದರು. ಆದರೆ ದುನಿಯಾ ವಿಜಯ್ ಪೋಲೀಸ್ ಠಾಣೆಯೂ ಬಳಿಯೂ ದರ್ಪ ತೋರಿದ್ದಾರೆ. ಅವಾಚ್ಯ ಶಬ್ಧಗಳಿಂದ ಮತ್ತೆ ಪಾನಿಪುರಿ ಕಿಟ್ಟಿ ಹಾಗೂ ಹುಡುಗರನ್ನ ಬೈದಿದ್ದಾರೆ. ಇದನ್ನೂ ಓದಿ: ಠಾಣೆಯಿಂದ ದುನಿಯಾ ವಿಜಿ ಶಿಫ್ಟ್ – ಬ್ಲಡ್ ಸ್ಯಾಂಪಲ್ ಪಡೆದ ಪೊಲೀಸ್ರು

ಇದೇ ವೇಳೆ ಪಾನಿಪುರಿ ಕಿಟ್ಟಿ ಹುಡುಗರು, ದುನಿಯ್ ವಿಜಿ ಕಾರ್ ನ ಮೇಲೆ ಹೊಡೆದು ಆಕ್ರೋಶ ವ್ಯಕ್ತಪಡಿಸಿದ್ದರು. ಹೈಗ್ರೌಂಡ್ ಪೊಲೀಸ್ ಠಾಣೆ ಬಳಿ ಬಿಗುವಿನ ವಾತವರಣ ನಿರ್ಮಾಣವಾಗಿತ್ತು. ಪರಿಸ್ಥಿತಿ ನಿಯಂತ್ರಿಸಲು ಕೆಎಸ್ಆರ್‌ಪಿ ತುಕಡಿ ನಿಯೋಜನೆ ಮಾಡಲಾಗಿತ್ತು. ಪೊಲೀಸ್ ಠಾಣೆ ಬಳಿಯೂ ದರ್ಪ ಮೆರೆಯುತ್ತಿದ್ದ ವಿಜಿಗೆ ಎಸಿಪಿ ರವಿಶಂಕರ್ ಖಡಕ್ ವಾರ್ನಿಂಗ್ ಮಾಡಿದ್ದಾರೆ.

ಈ ಕುರಿತು ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ದುನಿಯ್ ವಿಜಯ್ ಹಾಗೂ ಸಹಚರರನ್ನು ಬಂಧಿಸಿದ್ದಾರೆ. ಐಪಿಸಿ ಸೆಕ್ಷನ್ 365, 342, 325, 506ರ ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಹೈಗ್ರೌಂಡ್ ಪೊಲೀಸರು ದುನಿಯ್ ವಿಜಯ್ ನನ್ನ ಬಂಧಿಸಿ ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.

ಈ ಹಿಂದೆ ದುನಿಯಾ ವಿಜಯ್ ಗೆ ಪಾನಿಪೂರಿ ಕಿಟ್ಟಿ ಜಿಮ್ ಟ್ರೇನರ್ ಆಗಿದ್ದರು. ಆದರೆ ಇತ್ತೀಚೆಗೆ ಈ ಎರಡೂ ಗ್ಯಾಂಗ್‍ಗಳ ಮಧ್ಯೆ ವೈಮನಸ್ಸು ಮೂಡಿತ್ತು. ಹೀಗಾಗಿಯೇ ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಪಾನಿಪುರ ಕಿಟ್ಟಿಯ ಮೇಲಿನ ದ್ವೇಷಕ್ಕೆ ಆತನ ಅಣ್ಣನ ಮಗ ಮಾರುತಿ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಹಲ್ಲೆಗೊಳಗಾದ ಮಾರುತಿಗೌಡ ಈಗ ನಟರಾದ ಯಶ್, ಅಜಯ್ ರಾವ್, ಪ್ರೇಮ್‍ಗೂ ಜಿಮ್ ಟ್ರೇನರ್ ಆಗಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv 

Share This Article
Leave a Comment

Leave a Reply

Your email address will not be published. Required fields are marked *