– ಡಿ.18ರ ನಂತ್ರ ರಾಜ್ಯದಲ್ಲಿ ಬದಲಾವಣೆ – ಜನತೆಗೆ ಬಿಗ್ ಸರ್‌ಪ್ರೈಸ್
ಹುಬ್ಬಳ್ಳಿ: ಡಿಸೆಂಬರ್ 18ರ ನಂತರ ರಾಜ್ಯದಲ್ಲಿ ಬದಲಾವಣೆಯಾಗಲಿದೆ. ಜನತೆಗೆ ಬಿಗ್ ಸರ್‌ಪ್ರೈಸ್ ಸಿಗಲಿದೆ. ಹಾಲಿ ಶಾಸಕರು, ಮಾಜಿ ಶಾಸಕರು ಜೆಡಿಎಸ್‍ಗೆ (JDS) ಬರಲಿದ್ದಾರೆ. ಕೆಲ ಜಿಲ್ಲೆಗಳು ಬಿಜೆಪಿ (BJP) ಹಾಗೂ ಕಾಂಗ್ರೆಸ್ (Congress) ಮುಕ್ತ ಜಿಲ್ಲೆಗಳಾಗಲಿವೆ. ಕುಮಾರಸ್ವಾಮಿ ಪ್ರಧಾನ ಮಂತ್ರಿಯಾದ್ರೆ ಜೆಡಿಎಸ್‍ನಲ್ಲಿ ದಲಿತ, ಮುಸ್ಲಿಂ ಸಿಎಂ ಅವಕಾಶ ನೀಡುತ್ತೇವೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ (CM Ibrahim) ಭವಿಷ್ಯ ನುಡಿದಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಮ್ಮ ಪಕ್ಷಕ್ಕೆ ಟಿಕೆಟ್ ಆಕಾಂಕ್ಷಿಗಳು ಜಾಸ್ತಿಯಾಗಿದ್ದಾರೆ. ರಮೇಶ್ ಜಾರಕಿಹೊಳಿ ಜೊತೆ ಕುಮಾರಸ್ವಾಮಿ (H.D Kumaraswamy) ಮಾತನಾಡಿದ್ದಾರೆ. ಜಾರಕಿಹೊಳಿ ಕುಟುಂಬದಲ್ಲಿ ಎಷ್ಟು ಜನ ಬರುತ್ತಾರೆ ಅನ್ನೋದು ಕುಮಾರಸ್ವಾಮಿ ಅವರಿಗೆ ಗೊತ್ತು. ನಾವು ಇದುವರೆಗೂ ಎಲ್ಲೂ ಕೂಡಾ ಅಧಿಕೃತವಾಗಿ ಅಭ್ಯರ್ಥಿ ಘೋಷಣೆ ಮಾಡಿಲ್ಲ ಎಂದಿದ್ದಾರೆ. ಇದನ್ನೂ ಓದಿ: ನಾನೂ ರೌಡಿ, ಬಿಜೆಪಿಗೆ ನನ್ನನ್ನು ಸೇರಿಸಿಕೊಳ್ಳಿ – ಏಕಾಂಗಿ ಪ್ರತಿಭಟನೆ ನಡೆಸಿದ ಪಾನಿಪುರಿ ಮಂಜು
ಧಾರವಾಡ ಜಿಲ್ಲೆಯಲ್ಲೂ ಸೋಲಿನ ಭಯದಿಂದ ಮತದಾರರ ಹೆಸರು ಡಿಲೀಟ್ ಮಾಡಲಾಗಿದೆ. ಬಿಜೆಪಿ ಕಾಂಗ್ರೆಸ್ ಮತದಾರರ ಆಮೀಷಗಳನ್ನು ರೆಕಾರ್ಡ್ ಮಾಡಿ ನಾವು ಚುನಾವಣೆಗೆ ಮುನ್ನ ದೂರು ಕೊಡ್ತೀವಿ. ಶಾಸಕ ಸ್ಥಾನಕ್ಕೆ ನಿಲ್ಲಲು ಅರ್ಹರಲ್ಲ ಎಂದು ಚುನಾವಣೆ ಮುನ್ನ ಕೋರ್ಟ್‍ಗೆ ಹೋಗ್ತೀವಿ. ಕ್ರಿಮಿನಲ್ ಹಿನ್ನೆಲೆಯುಳ್ಳವರಿಗೆ ಟಿಕೆಟ್ ಕೊಟ್ರೆ ನಾವು ಚುನಾವಣೆಗೆ ಮುನ್ನ ಕೋರ್ಟ್ ಕೇಸ್ ಹಾಕುತ್ತೇವೆ. ರಾಜ್ಯ ಆರ್ಥಿಕವಾಗಿ ದಿವಾಳಿಯಾಗಿದೆ. ಜನವರಿಯಲ್ಲಿ ನಮ್ಮ ರಾಜ್ಯದ ಚುನಾವಣೆ ನಡಿಬೇಕು. ಮುಂದೆ ಸರ್ಕಾರ ಮಾಡೋರೆ ನಾವು. ಕಾಂಗ್ರೆಸ್, ಬಿಜೆಪಿ ರೌಡಿಗಳನ್ನು ಪಾರ್ಟಿಗೆ ಸೇರಿಸಿಕೊಳ್ಳುತ್ತಿದ್ದಾರೆ. ನಮ್ಮ ಪಾರ್ಟಿಯಲ್ಲಿ ಕ್ರಿಮಿನಲ್ ಕೇಸ್, ರೌಡಿಶೀಟರ್ ಆಗಿ ಹೆಸರಿದ್ರೆ ನಾವು ಕ್ರಮ ಕೈಗೊಳ್ಳುತ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಕೇಸರಿ ಶಲ್ಯ ಹಾಕಿಕೊಂಡು ಸಿ.ಟಿ ರವಿ ಮನೆಗೆ ಮುತ್ತಿಗೆಗೆ ಯತ್ನಿಸಿದ ಕಾಂಗ್ರೆಸ್ ಕಾರ್ಯಕರ್ತರು
ಬೊಮ್ಮಾಯಿ (Basavaraj Bommai) ಸ್ವತಂತ್ರವಾಗಿ ಕೆಲಸ ಮಾಡ್ತಿಲ್ಲ. ಕೇಶವ ಕೃಪಾದಲ್ಲಿ ಏನ್ ಹೇಳ್ತಾರೆ ಅದನ್ನು ಮಾಡ್ತಾರೆ. ಬಿಜೆಪಿಗೆ 60 ರಿಂದ 65 ಸೀಟ್ ಬರಲ್ಲ. ನಾನು ಪಕ್ಷದ ಅಧ್ಯಕ್ಷನಾಗಿ ಹೇಳ್ತೀನಿ ನಮ್ಮ ಮುಖ್ಯಮಂತ್ರಿ ಕುಮಾರಸ್ವಾಮಿ. ಮುಸ್ಲಿಂ, ದಲಿತ ಸಿಎಂ ಮಾಡಬೇಕು ಅನ್ನೋದು ಕುಮಾರಸ್ವಾಮಿ ಇಚ್ಛೆ. ಆದ್ರೆ ನಮ್ಮ ಮುಖ್ಯಮಂತ್ರಿ ಕುಮಾರಸ್ವಾಮಿ. ದಲಿತ, ಮುಸ್ಲಿಮರಲ್ಲಿ ಒಬ್ಬರನ್ನು ಉಪಮುಖ್ಯಮಂತ್ರಿ ಮಾಡ್ತೀವಿ. ಕುಮಾರಸ್ವಾಮಿ ಪ್ರಧಾನ ಮಂತ್ರಿಯಾದ್ರೆ ಜೆಡಿಎಸ್‍ನಲ್ಲಿ ದಲಿತ, ಮುಸ್ಲಿಂ ಸಿಎಂ ಅವಕಾಶ. ಕುಮಾರಸ್ವಾಮಿ ಗ್ರಹಬಲ ನೋಡಿದ್ರೆ, ಅವರು ಕೇಂದ್ರಕ್ಕೆ ಹೋಗ್ತಾರೆ ಎಂದು ಅಚ್ಚರಿಯ ಹೇಳಿಕೆ ನೀಡಿದ್ದಾರೆ.