ನವದೆಹಲಿ: ಬಗರ್ ಹುಕುಂ (Bagair Hukum) ಜಮೀನು ಹಂಚಿಕೆಯಲ್ಲಿ ಅಕ್ರಮ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಆರ್ ಅಶೋಕ್ (R Ashok) ಅವರಿಗೆ ಸುಪ್ರೀಂ ಕೋರ್ಟ್ (Supreme Court) ಬಿಗ್ ರಿಲೀಫ್ ನೀಡಿದೆ.
ಅಶೋಕ್ ಅವರ ವಿರುದ್ಧ ಎಸಿಬಿ ದಾಖಲಿಸಿದ್ದ ಎಫ್‌ಐಆರ್ ಅನ್ನು ಕೋರ್ಟ್ ರದ್ದು ಪಡಿಸಿದೆ. ನ್ಯಾ. ಸಂಜಯ್ ಕರೋಲ್ ನೇತೃತ್ವದ ದ್ವಿಸದಸ್ಯ ಪೀಠ ಇದೊಂದು ರಾಜಕೀಯ ಪ್ರೇರಿತ ಎಫ್‌ಐಆರ್ ಎಂದು ತೀರ್ಪಿನಲ್ಲಿ ಉಲ್ಲೇಖಿಸಿದೆ.
ಬಗರ್ ಹುಕುಂ ಅಧ್ಯಕ್ಷರಾಗಿದ್ದ ವೇಳೆ ಅಕ್ರಮವಾಗಿ ಅನರ್ಹರಿಗೆ ಜಮೀನು ಹಂಚಿಕೆ ಮಾಡಿದ್ದರು ಎಂದು 2018 ರಲ್ಲಿ ಕಾಂಗ್ರೆಸ್ ಸರ್ಕಾರ ಆರೋಪಿಸಿತ್ತು ನಂತರ ಎಸಿಬಿಯಲ್ಲಿ ಎಫ್‌ಐಆರ್ ದಾಖಲಾಗಿತ್ತು.

