ಎರಡೆರಡು ವೋಟರ್ ಐಡಿ – ಬಿಹಾರ ಡಿಸಿಎಂಗೆ ಚುನಾವಣಾ ಆಯೋಗ ನೋಟಿಸ್

Public TV
1 Min Read

ನವದೆಹಲಿ: ಮತಕಳ್ಳತನ ವಿವಾದದ ನಡುವೆಯೇ ಬಿಹಾರದ ಉಪ ಮುಖ್ಯಮಂತ್ರಿ ವಿಜಯ್ ಕುಮಾರ್ ಸಿನ್ಹಾಗೆ (Vijay Kumar Sinha) ಚುನಾವಣಾ ಆಯೋಗ (Election Commission) ಶಾಕ್ ನೀಡಿದ್ದು, ನೋಟಿಸ್ ಜಾರಿ ಮಾಡಿದೆ.

ಬಿಹಾರದ ಉಪಮುಖ್ಯಮಂತ್ರಿ ವಿಜಯ್ ಕುಮಾರ್ ಸಿನ್ಹಾ ಎರಡೆರಡು ಮತ ಗುರುತು ಪತ್ರ (Two Voter ID) ಹೊಂದಿದ್ದಾರೆ ಎಂದು ಆರ್‌ಜೆಡಿ ಮುಖ್ಯಸ್ಥ ತೇಜಸ್ವಿ ಯಾದವ್ ಭಾನುವಾರ ಸುದ್ದಿಗೋಷ್ಠಿ ನಡೆಸಿ ಆರೋಪ ಮಾಡಿದ ಬೆನ್ನಲ್ಲೇ ಚುನಾವಣಾ ಆಯೋಗ ಈ ಕುರಿತು ವಿವರ ಕೋರಿ ನೋಟಿಸ್ ಜಾರಿ ಮಾಡಿದೆ. ಆಗಸ್ಟ್ 14ರ ಒಳಗೆ ಲಿಖಿತ ಉತ್ತರ ನೀಡುವಂತೆ ಚುನಾವಣಾ ಆಯೋಗ ಕೇಳಿದೆ. ಇದನ್ನೂ ಓದಿ: ಕಾಲ್ತುಳಿತಕ್ಕೆ ಸಿಎಂ, ಡಿಸಿಎಂ, ಗೃಹ ಸಚಿವರೇ ಕಾರಣ – ಪೊಲೀಸರ ಮೇಲೆ ತಪ್ಪು ಹೊರಿಸಿ ನುಣುಚಿಕೊಳ್ಳುವ ಯತ್ನ: ವಿಜಯೇಂದ್ರ

ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿದ ವಿಜಯ್ ಸಿನ್ಹಾ ಚುನಾವಣಾ ಆಯೋಗದ ನೋಟಿಸ್‌ಗೆ ನಾನು ಖಂಡಿತವಾಗಿಯೂ ಉತ್ತರಿಸುತ್ತೇನೆ. ರಾಹುಲ್ ಗಾಂಧಿ, ತೇಜಸ್ವಿ ಯಾದವ್ ಅವರಂತೆ ಸುಮ್ಮನೆ ಗಲಾಟೆ ಮಾಡುವವನಲ್ಲ. ಸಂವಿಧಾನದ ಮೇಲೆ ನಂಬಿಕೆ ಇದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಈ ವರ್ಷ ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ಸ್ಥಾಪನೆ ಇಲ್ಲ: ಹೈಕೋರ್ಟ್‌ಗೆ ಎಜಿ ಶಶಿಕಿರಣ್‌ ಶೆಟ್ಟಿ ಸ್ಪಷ್ಟನೆ

Share This Article