– ಎಲ್ಲವೂ ಶೀಘ್ರದಲ್ಲೇ ಬಹಿರಂಗ: ರಾಗಾ
– ಸಂಸತ್‌ನಲ್ಲಿ 3ನೇ ದಿನವೂ ಕೋಲಾಹಲ
ನವದೆಹಲಿ: ಬಿಹಾರ ಮತದಾರರ ಪಟ್ಟಿ ಪರಿಷ್ಕರಣೆ ವಿರುದ್ಧ ವಿಪಕ್ಷಗಳು ಮಾಡುತ್ತಿರುವ ಹೋರಾಟ ಹೊಸ ತಿರುವು ಪಡೆದುಕೊಂಡಿದೆ. ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ (Rahul Gandhi) ಗಂಭೀರ ಆರೋಪ ಮಾಡಿದ್ದಾರೆ. 2024ರ ಲೋಕಸಭೆ ಚುನಾವಣೆ (Lok Sabha Election) ವೇಳೆ ಮಹಾರಾಷ್ಟ್ರದಂತೆ ಕರ್ನಾಟಕದಲ್ಲೂ (Karnataka) ಕಳ್ಳಾಟವಾಗಿದೆ ಎಂದು ಆರೋಪಿಸಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಕರ್ನಾಟಕದ ಒಂದು ಲೋಕಸಭಾ ಕ್ಷೇತ್ರವನ್ನು ಆಯ್ಕೆ ಮಾಡಿಕೊಂಡು, ಅಲ್ಲಿನ ಚುನಾವಣಾ ಪ್ರಕ್ರಿಯೆ ಬಗ್ಗೆ ಆಳವಾದ ಅಧ್ಯಯನ ನಡೆಸಿದ್ದೆವು. ಬೋಗಸ್ ವೋಟಿಂಗ್ ಬಗ್ಗೆ ಇಂಚಿಂಚು ಮಾಹಿತಿ ನಮಗೆ ಲಭ್ಯವಾಗಿದೆ. ಎಲ್ಲಾ ವಿಚಾರಗಳನ್ನು ಸದ್ಯದಲ್ಲೇ ಜನರ ಮುಂದೆ ಇಡಲಿದ್ದೇವೆ. ಎಲ್ಲಾ ಕಳ್ಳಾಟ ಸದ್ಯದಲ್ಲೇ ಹೊರಬರಲಿದೆ ಎಂದರು. ಇದನ್ನೂ ಓದಿ: ಕರ್ನಾಟಕದಲ್ಲಿ ಹೊಸ ಜಾತಿಗಣತಿ| ಸೆ. 22ರಿಂದ ಅ. 7 ರವರೆಗೆ ಮೊಬೈಲ್ ಆಪ್ ಮೂಲಕ ಮನೆ ಮನೆ ಸಮೀಕ್ಷೆ
ಇನ್ನೂ, ಮತದಾರರ ಪಟ್ಟಿಯಿಂದ 52 ಲಕ್ಷ ಮಂದಿಯನ್ನು ಕೈಬಿಟ್ಟಿರೋದನ್ನು ವಿಪಕ್ಷಗಳು ಪ್ರಶ್ನಿಸಿ, ಇವತ್ತು ಕೂಡ ಸಂಸತ್‌ನಲ್ಲಿ ಕೋಲಾಹಲ ಎಬ್ಬಿಸಿವೆ. ಸದನದ ಹೊರಗೂ, ಒಳಗೂ ಇಂಡಿ ಒಕ್ಕೂಟ ಪ್ರತಿಭಟನೆ ನಡೆಸಿದೆ. ಸದನದಲ್ಲಿ ಕಪ್ಪು ಬಟ್ಟೆ ಕೂಡ ಪ್ರದರ್ಶನ ಮಾಡಲಾಯಿತು. ವಿಪಕ್ಷಗಳ ಗದ್ದಲದಿಂದ ಸ್ಪೀಕರ್ ಬಿರ್ಲಾ ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ವಿವಿಧ ವಿಷಯಗಳ ಚರ್ಚೆ ಮಾಡಲು ಅಧಿವೇಶನಕ್ಕೆ ಆಗಮಿಸಿದ್ದೀರಿ. ಆದ್ರೆ ನೀವು ರಸ್ತೆ ಮೇಲೆ ಪ್ರತಿಭಟಿಸಿದಂತೆ ಸಂಸತ್‌ನಲ್ಲಿ ನಡೆದುಕೊಳ್ಳುತ್ತಿದ್ದೀರಿ. ಇಡೀ ದೇಶ ನಿಮ್ಮನ್ನ ಗಮನಿಸುತ್ತಿದೆ. ನಿಮ್ಮ ವರ್ತನೆ ಸರಿಯಲ್ಲ ಎಂದು ಗರಂ ಆದರು. ಇದನ್ನೂ ಓದಿ: ಕೆಜಿ ಹಳ್ಳಿಯಲ್ಲಿ ಬೆಂಕಿ ಇಟ್ಟ ಮೂವರಿಗೆ 7 ವರ್ಷ ಜೈಲು ಶಿಕ್ಷೆ
ಈ ಮಧ್ಯೆ, ಕಲಾಪಕ್ಕೆ ಅಡ್ಡಿಯಿಂದ ಸರ್ಕಾರಕ್ಕೆ ಹೆಚ್ಚು ಅನುಕೂಲವಾಗಲಿದೆ ಅಂತ ಟಿಎಂಸಿ ಸಂಸದ ಡೆರೆಕ್ ಒ ಬ್ರಿಯಾನ್ ಹೇಳಿದ್ದಾರೆ. ಇನ್ನು ಆಪರೇಷನ್ ಸಿಂಧೂರ ಬಗ್ಗೆ ಚರ್ಚಿಸಲು ಲೋಕಸಭೆಯಲ್ಲಿ ಸೋಮವಾರ 16 ಗಂಟೆ, ರಾಜ್ಯಸಭೆಯಲ್ಲಿ ಮಂಗಳವಾರ 16 ಗಂಟೆ ಸಮಯ ನಿಗದಿಪಡಿಸಲಾಗಿದೆ. ಚರ್ಚೆ ವೇಳೆ ಪ್ರಧಾನಿ ಉಪಸ್ಥಿತರಿರೋ ಸಾಧ್ಯತೆ ಇದೆ. ಇದನ್ನೂ ಓದಿ: Gujarat | ಅಲ್-ಖೈದಾ ಸಂಘಟನೆಯೊಂದಿಗೆ ನಂಟು ಹೊಂದಿದ್ದ ನಾಲ್ವರು ಉಗ್ರರ ಬಂಧನ