ಪುದುಚೆರಿ: ಮಿಸ್ ಪುದುಚೆರಿ ಖ್ಯಾತಿಯ ಮಾಡೆಲ್ (Model), ಸೋಶಿಯಲ್ ಮೀಡಿಯಾ ಸ್ಟಾರ್ ಸ್ಯಾನ್ ರೆಚಲ್ (San Rechal) ಪುದುಚೆರಿಯಲ್ಲಿ (Puducherry) ಆತ್ಮಹತ್ಯೆ ಮಾಡಿಕೊಂಡಿದ್ದು, ಚಿಕಿತ್ಸೆ ಫಲಿಸದೇ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
26 ವರ್ಷದ ಸ್ಯಾನ್ ರೆಚಲ್ ತನ್ನ ತಂದೆಯ ಮನೆಗೆ ಭೇಟಿ ನೀಡಿದ ಸಂದರ್ಭ ಹೆಚ್ಚಿನ ಸಂಖ್ಯೆಯ ಮಾತ್ರೆಗಳನ್ನು ಸೇವಿಸಿದ್ದರು. ಮೊದಲಿಗೆ ಅವರನ್ನು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು, ನಂತರ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸ್ಯಾನ್ ರೆಚಲ್ ಸಾವನ್ನಪ್ಪಿದ್ದಾರೆ. ಆರ್ಥಿಕ ಒತ್ತಡ ಮತ್ತು ವೈಯಕ್ತಿಕ ಒತ್ತಡ ಆತ್ಮಹತ್ಯೆಗೆ ಕಾರಣವಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಆತ್ಮಹತ್ಯೆಗೂ ಮುನ್ನ ಸ್ಯಾನ್ ರೆಚಲ್ ಡೆತ್ ನೋಟ್‌ನಲ್ಲಿ ಆಕೆಯ ಸಾವಿಗೆ ಯಾರೂ ಕಾರಣರಲ್ಲ ಎಂದು ಬರೆದಿದ್ದಾರೆ. ಸದ್ಯ ಡೆತ್ ನೋಟ್ ವಶಪಡಿಸಿಕೊಂಡ ಪೊಲೀಸರು ಆಕೆಯ ವೈವಾಹಿಕ ಜೀವನದ ಬಗ್ಗೆಯೂ ತನಿಖೆ ಮಾಡುತ್ತಿದ್ದಾರೆ. ಇದನ್ನೂ ಓದಿ: 1 ಲಕ್ಷ ಹಣ, ಉಂಗುರ ನೀಡಿ ಕಲಾವಿದರನ್ನು ಸನ್ಮಾನಿಸಿ ಪ್ರಚಾರದಿಂದ ದೂರ ಇರುತ್ತಿದ್ರು : ಗಿರಿಜಾ ಲೋಕೇಶ್
ಲಂಡನ್, ಜರ್ಮನಿ ಮತ್ತು ಫ್ರಾನ್ಸ್ನಂತಹ ಅಂತರರಾಷ್ಟ್ರೀಯ ವೇದಿಕೆಗಳಲ್ಲಿ ಭಾರತವನ್ನು ಪ್ರತಿನಿಧಿಸಿದ ರೆಚಲ್, ತಮ್ಮ ಸಾಧನೆಗಳ ಮೂಲಕ ಯುವತಿಯರಿಗೆ ಸ್ಫೂರ್ತಿಯಾಗಿದ್ದರು. ಸ್ಯಾನ್ ರೆಚಲ್ ಕೇವಲ ಮಾಡೆಲಿಂಗ್ ಲೋಕದಲ್ಲಿ ಮಿಂಚಿದ್ದಲ್ಲದೇ ವರ್ಣಭೇದ ನೀತಿಯನ್ನು ಪ್ರಶ್ನಿಸಿ, ಮಹಿಳಾ ಸುರಕ್ಷತೆಗಾಗಿ ಹೋರಾಡಿದ್ದರು. ಇದನ್ನೂ ಓದಿ: ಶಕ್ತಿಗೆ ಇಂದು 500 ಕೋಟಿ ಟಿಕೆಟ್ ಸಂಭ್ರಮ- ಕಂಡಕ್ಟರ್ ಆಗಿ ಟಿಕೆಟ್ ಹಂಚಿದ ಸಿಎಂ
2020ರಲ್ಲಿ ಮಿಸ್ ಪುದುಚೇರಿ, 2019ರಲ್ಲಿ ಮಿಸ್ ಬೆಸ್ಟ್ ಆಟಿಟ್ಯೂಡ್, 2019ರಲ್ಲಿ ಮಿಸ್ ಡಾರ್ಕ್ ಕ್ವೀನ್ ತಮಿಳುನಾಡು ಮತ್ತು 2022 ರಲ್ಲಿ ಕ್ವೀನ್ ಆಫ್ ಮದ್ರಾಸ್ ಖ್ಯಾತಿಗಳನ್ನು ಗಳಿಸಿದ್ದ ರೆಚಲ್, 2023ರಲ್ಲಿ ಮಿಸ್ ಆಫ್ರಿಕಾ ಗೋಲ್ಡನ್ ಇಂಡಿಯಾ ಸ್ಪರ್ಧೆಯಲ್ಲಿ ದ್ವಿತೀಯ ರನ್ನರ್-ಅಪ್ ಆಗಿ ಸ್ಯಾನ್ ರೆಚಲ್ ಮಿಂಚಿದ್ದರು. ಇದನ್ನೂ ಓದಿ: ಉತ್ತರಾಖಂಡ ಸರ್ಕಾರದಿಂದ ‘ಆಪರೇಷನ್ ಕಾಲನೇಮಿ’ ಕಾರ್ಯಾಚರಣೆ – 82 ನಕಲಿ ಬಾಬಾಗಳ ಬಂಧನ