ಅಫ್ಘಾನಿಸ್ತಾನ ವಿಚಾರದಲ್ಲಿ ರಷ್ಯಾ,ಭಾರತದ ನಿಲುವು ಒಂದೇ: ವರ್ಶಿನಿನ್

Public TV
1 Min Read

ನವದೆಹಲಿ: ಅಫ್ಘಾನಿಸ್ತಾನದ ಪರಿಸ್ಥಿತಿಯಲ್ಲಿ ರಷ್ಯಾ ಹಾಗೂ ಭಾರತ ಒಂದೇ ರೀತಿಯಾಗಿ ಕೆಲಸ ಮಾಡುತ್ತಿದೆ ಎಂದು ರಷ್ಯಾದ ವಿಶ್ವಸಂಸ್ಥೆಯ ರಾಯಭಾರಿ ಸೆರ್ಗೆಯ್ ವಾಸಿಲಿವಿಚ್ ವರ್ಶಿನಿನ್ ಹೇಳಿದ್ದಾರೆ.

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಉಭಯ ದೇಶಗಳ ನಡುವಿನ ಸಹಕಾರದ ಕುರಿತು ನಡೆದ ಸಭೆಯಲ್ಲಿ ವರ್ಶಿನಿನ್ ಭಾಗವಹಿಸಿದ್ದರು.

ಅಫ್ಘಾನಿಸ್ತಾನದ ಪರಿಸ್ಥಿತಿಯ ಕುರಿತು ರಷ್ಯಾ ಹಾಗೂ ಭಾರತ ಒಂದೇ ನಿಲುವನ್ನು ಹೊಂದಿದೆ. ಅಫ್ಘಾನಿಸ್ತಾನದ ಜನರಿಗೆ ಮಾನವೀಯ ನೆರವು ಕಳುಹಿಸಬೇಕು. ಅದನ್ನು ನವದೆಹಲಿ ಹಾಗೂ ಮಾಸ್ಕೋ ಎರಡೂ ಒದಗಿಸುತ್ತಿವೆ. ಸದ್ಯ ಅಫ್ಘಾನಿಸ್ತಾನದಲ್ಲಿರುವ ಆಡಳಿತ ತಮ್ಮ ಜವಾಬ್ದಾರಿಗಳನ್ನು ಸರಿಯಾಗಿ ನಿಭಾಯಿಸಲಿ ಎಂದು ನಾವು ಆಶಿಸುತ್ತೇವೆ ಎಂದರು. ಇದನ್ನೂ ಓದಿ: ಒಮಿಕ್ರಾನ್ ಉಪ ರೂಪಾಂತರಿ ಬಿಎ.2 – 57 ದೇಶಗಳಲ್ಲಿ ಪತ್ತೆ: WHO

ಅಫ್ಘಾನಿಸ್ತಾನದ ಇಂದಿನ ಸ್ಥಿತಿಗೆ ಕಳೆದ 20 ವರ್ಷಗಳಿಂದ ಇದ್ದ ಅಮೆರಿಕಾ ಪಡೆ ಹಾಗೂ ಅವರ ಮಿತ್ರರಾಷ್ಟ್ರಗಳ ಉಪಸ್ಥಿತಿಯೇ ಕಾರಣ. ಕಳೆದ ವರ್ಷ ಅಗಸ್ಟ್‌ನಲ್ಲಿ ಅಮೆರಿಕಾ ತಮ್ಮ ಪಡೆಗಳನ್ನು ಹಿಂತೆಗೆದುಕೊಂಡ ಬಳಿಕ ತಾಲಿಬಾನ್ ಅಫ್ಘಾನಿಸ್ತಾನವನ್ನು ವಶಪಡಿಸಿಕೊಳ್ಳು ಸಾಧ್ಯವಾಯಿತು ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಜಯಲಲಿಲಾ ಆಪ್ತೆ ಶಶಿಕಲಾಗೆ ಜೈಲಿನಲ್ಲಿ ರಾಜಾತಿಥ್ಯ – ಪೊಲೀಸರಿಗೆ ಸಂಕಷ್ಟ

ಅಫ್ಘಾನಿಸ್ತಾನದ ಜನರಿಗೆ ಮಾನವೀಯ ನೆರವು ಒದಗಿಸಬೇಕು ಎಂಬುದು ಸ್ಪಷ್ಟವಾಗಿದೆ. ಈ ಕೆಲಸವನ್ನು ನಾವು ಮತ್ತು ಭಾರತ ಎರಡೂ ಮಾಡುತ್ತಿದ್ದೇವೆ. ಈ ಕಾರ್ಯ ಹೀಗೆಯೇ ಮುಂದುವರಿಯಬೇಕು ಎಂದು ವರ್ಶಿನಿನ್ ಹೇಳಿದರು.

Share This Article
Leave a Comment

Leave a Reply

Your email address will not be published. Required fields are marked *