ಬಿಸಿಯೂಟ ಯೋಜನೆಗೆ ‘ಪಿಎಂ ಪೋಷಣ್’ ಮರುನಾಮಕರಣ ಮಾಡಿದ ಕೇಂದ್ರ

Public TV
2 Min Read

ನವದೆಹಲಿ: ದೇಶಾದ್ಯಂತ ಬಡ ಮಕ್ಕಳಿಗೆ ಸುಪೋಷಿತ ಆಹಾರ ಒದಗಿಸಲು ಮತ್ತು ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಹಾಜರಾತಿ ಹೆಚ್ಚಿಸಲು ಪಿಎಂ ಪೋಷಣ್ ಯೋಜನೆಯನ್ನು ಕೇಂದ್ರ ಸರ್ಕಾರ ಘೋಷಿಸಿದೆ. ಇಂದು ನವದೆಹಲಿಯಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಕೇಂದ್ರ ಸಚಿವ ಅನುರಾಗ್ ಠಾಕುರ್ ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ, ಶಾಲೆಗೆ ಹೋಗುವ ಮಕ್ಕಳಲ್ಲಿ ಅಪೌಷ್ಟಿಕತೆಯನ್ನು ಪರಿಹರಿಸುವ ಸಲುವಾಗಿ ಪ್ರಧಾನ ಮಂತ್ರಿ ಪೋಷಣ್ ಶಕ್ತಿ ನಿರ್ಮಾಣ (Pradhan Mantri Poshan Shakti Nirman) ಯೋಜನೆಗೆ ಅನುಮೋದನೆ ನೀಡಿದೆ. ಈಗಿರುವ ಮಿಡ್-ಡೇ ಮೀಲ್ ಸ್ಕೀಮ್ (Mid-Day Meal scheme) ವಿದ್ಯಾರ್ಥಿಗಳಿಗೆ ಬಿಸಿ ಊಟವನ್ನು ಒದಗಿಸುತ್ತದೆ. ಇದನ್ನು ಪಿಎಂ ಪೋಷಣ್ ಶಕ್ತಿ ನಿರ್ಮಾಣ ರಾಷ್ಟ್ರೀಯ ಯೋಜನೆ ಎಂದು ಮರುನಾಮಕರಣ ಮಾಡಲಾಗುವುದು.

2021-22 ರಿಂದ 2025-26 ರವರೆಗೆ ಐದು ವರ್ಷಗಳವರೆಗೆ ಈ ಯೋಜನೆಯನ್ನು ಮುಂದುವರಿಸಲು ಒಟ್ಟು 1.3 ಲಕ್ಷ ಕೋಟಿಗೂ ಹೆಚ್ಚಿನ ಬಜೆಟ್ ಅನ್ನು ನಿಗದಿಪಡಿಸಲಾಗಿದೆ. ಇದರಲ್ಲಿ ಕೇಂದ್ರ ಸರ್ಕಾರವು 54061.73 ಕೋಟಿ ರೂ., ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು 31,733.17 ಕೋಟಿ ರೂ. ಆಹಾರ ಧಾನ್ಯಗಳ ಮೇಲೆ ಕೇಂದ್ರವು ಸುಮಾರು 45,000 ಕೋಟಿ ರೂಪಾಯಿಗಳ ಹೆಚ್ಚುವರಿ ವೆಚ್ಚವನ್ನು ಭರಿಸುತ್ತದೆ ಎಂದು ಸರ್ಕಾರವು ಹೇಳಿಕೆಯಲ್ಲಿ ತಿಳಿಸಿದೆ. ಇದನ್ನೂ ಓದಿ: ಮುಸ್ಲಿಂ ಯುವತಿಯ ಕನಸು ನನಸು-ದೇವಸ್ಥಾನಕ್ಕೆ ಶ್ರೀಕೃಷ್ಣನ ಚಿತ್ರ ಉಡುಗೊರೆ

poshan schem

MyGovIndiaದ ಅಧಿಕೃತ ಟ್ವಿಟರ್ ಹ್ಯಾಂಡಲ್‍ನಲ್ಲಿ ಹಂಚಿಕೊಂಡಿರುವ ಇನ್ಫೋಗ್ರಾಫಿಕ್ ಪ್ರಕಾರ ಈ ಯೋಜನೆಯು 11.20 ಲಕ್ಷ ಶಾಲೆಗಳಲ್ಲಿ 11.80 ಕೋಟಿ ಮಕ್ಕಳನ್ನು ಒಳಗೊಳ್ಳುವ ಗುರಿಯನ್ನು ಹೊಂದಿದೆ. ಸರ್ಕಾರಿ ಮತ್ತು ಸರ್ಕಾರಿ ಅನುದಾನಿತ ಶಾಲೆಗಳಲ್ಲಿ ಓದುತ್ತಿರುವ ಒಂದರಿಂದ ಎಂಟನೇ ತರಗತಿಯ ಎಲ್ಲಾ ಶಾಲೆಗೆ ಹೋಗುವ ವಿದ್ಯಾರ್ಥಿಗಳು ಈ ಯೋಜನೆಯ ಪ್ರಯೋಜನಗಳನ್ನು ಪಡೆಯಲು ಅರ್ಹರಾಗಿರುತ್ತಾರೆ. ಶಿಕ್ಷಣ ಸಚಿವ ಧಮೇರ್ಂದ್ರ ಪ್ರಧಾನ್ ಅವರು ಟ್ವಿಟರ್‍ನಲ್ಲಿ ಈ ಯೋಜನೆಯನ್ನು ಜಾರಿಗೊಳಿಸುವಲ್ಲಿ ರೈತ ಉತ್ಪಾದಕರ ಸಂಘಟನೆಗಳು (ಎಫ್‍ಪಿಒ) ಮತ್ತು ಮಹಿಳಾ ಸ್ವಸಹಾಯ ಗುಂಪುಗಳ ಭಾಗವಹಿಸುವಿಕೆಯನ್ನು ಪ್ರೋತ್ಸಾಹಿಸುತ್ತಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ:  ವೈದ್ಯರ ಎಡವಟ್ಟು- ಕೊರೊನಾ ಲಸಿಕೆ ಬದಲು ರೇಬಿಸ್ ವ್ಯಾಕ್ಸಿನ್

ವಿಶೇಷ ಗಮನದ ಪ್ರದೇಶಗಳನ್ನು ಹೈಲೈಟ್ ಮಾಡಿದ ಸಚಿವರು ಇನ್ಫೋಗ್ರಾಫಿಕ್ ಅನ್ನು ಹಂಚಿಕೊಂಡಿದ್ದು ಈ ಯೋಜನೆಯು ಮಹತ್ವಾಕಾಂಕ್ಷೆಯ ಮತ್ತು ಬುಡಕಟ್ಟು ಜಿಲ್ಲೆಗಳು ಮತ್ತು ರಕ್ತಹೀನತೆ ಹೆಚ್ಚಾಗಿರುವ ಜಿಲ್ಲೆಗಳಲ್ಲಿ ಪೂರಕ ಪೌಷ್ಟಿಕಾಂಶವನ್ನು ಒದಗಿಸುತ್ತದೆ ಎಂದಿದ್ದಾರೆ.  #Vocal4Local ಗೆ ಅನುಗುಣವಾಗಿ ಸಾಂಪ್ರದಾಯಿಕ ಪಾಕಪದ್ಧತಿ ಮತ್ತು ಸಂಸ್ಕೃತಿಯನ್ನು ಉತ್ತೇಜಿಸಲು ಎಲ್ಲಾ ಹಂತಗಳಲ್ಲಿ ಅಡುಗೆ ಸ್ಪರ್ಧೆಗಳನ್ನು ಪ್ರೋತ್ಸಾಹಿಸಲಾಗುವುದು ಎಂದು ಪ್ರಕಟಣೆಯಲ್ಲಿ ಹೇಳಿದೆ.

Share This Article
Leave a Comment

Leave a Reply

Your email address will not be published. Required fields are marked *