ನಾನು ಕಬಡ್ಡಿಯಾಡಿದ್ದನ್ನು ರಾವಣರು ವೀಡಿಯೋ ಮಾಡಿದ್ದಾರೆ: ಪ್ರಜ್ಞಾ ಠಾಕೂರ್

Public TV
2 Min Read

ಭೋಪಾಲ್: ಬಿಜೆಪಿ ಸಂಸದೆ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್, ಮೈದಾನದಲ್ಲಿ ಕಬಡ್ಡಿ ಆಡುತ್ತಿರುವ ವೀಡಿಯೊವೊಂದು ವೈರಲ್ ಆಗಿತ್ತು. ಈ ವೀಡಿಯೋ ಮೂಲಕವಾಗಿ ಇದೀಗ ಪ್ರಜ್ಞಾ ಸಿಂಗ್ ಠಾಕೂರ್ ಸುದ್ದಿಯಾಗುತ್ತಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಕಬಡ್ಡಿ ಆಡಿರುವ ವೀಡಿಯೋ ಚಿತ್ರೀಕರಿಸಿ ಸೋಷಿಯಲ್ ಮೀಡಿಯಾದಲ್ಲಿ ಅಪ್‍ಲೋಡ್ ಮಾಡಿದವರು ರಾವಣರು. ದುರ್ಗಾ ಪೂಜೆಯ ವೇಳೆ ಆರತಿ ಬೆಳಗಲು ಹೋಗಿದ್ದೆ. ಮೈದಾನದಲ್ಲಿ ಆಟವಾಡುತ್ತಿದ್ದ ಕೆಲವು ಕ್ರೀಡಾಪಟುಗಳು ನನಗೆ ಕಬಡ್ಡಿ ಆಡುವಂತೆ ಕೇಳಿಕೊಂಡರು. ನನ್ನನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದ ಸಿಂಧಿಗಳಲ್ಲಿ ಯಾರೋ ರಾವಣನ ವ್ಯಕ್ತಿತ್ವದವರು ಇದ್ದಾರೆ. ಅವರು ನನ್ನನ್ನು ದೊಡ್ಡ ಶತ್ರುವಿನಂತೆ ನೋಡುತ್ತಿದ್ದಾರೆ. ದೇಶಭಕ್ತರು, ಕ್ರಾಂತಿಕಾರಿಗಳು, ನನ್ನ ರೀತಿಯ ಸಂತರೊಡನೆ ಸಂಘರ್ಷಕ್ಕಿಳಿದರೆ ನಿಮ್ಮ ವೃದ್ಧಾಪ್ಯ ಮತ್ತು ಮುಂದಿನ ಜನ್ಮವೂ ಹಾಳಾಗಿ ಹೋಗುತ್ತದೆ ಎಂದು ಪ್ರಜ್ಞಾ ಸಿಂಗ್ ಠಾಕೂರ್ ಕಿಡಿ ಕಾರಿದ್ದಾರೆ. ಇದನ್ನೂ ಓದಿ:  ಗೋಮೂತ್ರದಿಂದ ನನ್ನ ಸ್ತನಕ್ಯಾನ್ಸರ್ ವಾಸಿಯಾಯ್ತು- ಸಾಧ್ವಿ ಪ್ರಜ್ಞಾಸಿಂಗ್

ಪ್ರಜ್ಞಾ ಸಿಂಗ್  ಮಲೇಗಾಂವ್ ಸ್ಫೋಟ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದರು. ಆದರೆ ವೈದ್ಯಕೀಯ ಆಧಾರದ ಮೇಲೆ ಜಾಮೀನು ನೀಡಲಾಗಿತ್ತು. ಸಾಕಷ್ಟು ಸಮಯದಿಂದ ವ್ಹೀಲ್ ಚೇರ್ ಮೇಲೆ ಕುಳಿತೇ ಸಂಚರಿಸುತ್ತಿದ್ದರು. ಆದರೆ ಮೈದಾನದಲ್ಲಿ ಅವರು ಕಬಡ್ಡಿ ಆಡುತ್ತಿರುವ ವೀಡಿಯೊವೊಂದು ವೈರಲ್ ಆಗಿದೆ. ಠಾಕೂರ್ ಕಬಡ್ಡಿ ಆಡುತ್ತಿರುವ ವೀಡಿಯೋ ನೋಡಿದವರು ಆಶ್ಚರ್ಯ ಹೊರಹಾಕಿದ್ದಾರೆ. ಜೈಲು ವಾಸದಿಂದ ತಪ್ಪಿಸಿಕೊಳ್ಳಲು ಅವರು ಅನಾರೋಗ್ಯದ ಕಾರಣವೊಡ್ಡಿದ್ದಾರೆ. ವೈದ್ಯಕೀಯ ಕಾರಣ ನೀಡಿ ಜಾಮೀನು ಪಡೆದಿದ್ದ ಪ್ರಜ್ಞಾ ಸಿಂಗ್ ಠಾಕೂರ್ ಕಬಡ್ಡಿ ಆಡುವಷ್ಟು ದೈಹಿಕವಾಗಿ ಫಿಟ್ ಇದ್ದಾರೆ ಎಂದ ಮೇಲೆ ಜಾಮೀನು ಪಡೆದಿದ್ದೇಕೆ? ಎಂದು ನೆಟ್ಟಿಗರು ಟೀಕಿಸಿದ್ದಾರೆ. ಇದನ್ನೂ ಓದಿ:   EXCLUSIVE: ಸಿನಿಮಾಗೂ ಸಿಗದೇ ಇರುವ ಪಬ್ಲಿಸಿಟಿ ರಿಲೀಸ್ ಆಗದ ದಿನ ಸಿಕ್ತು: ಕಿಚ್ಚ

Share This Article
Leave a Comment

Leave a Reply

Your email address will not be published. Required fields are marked *