ಕಾಂಗ್ರೆಸ್ ನಾಯಕರು ಮೇಕೆದಾಟಿಗೆ ಹೋಗಿ ಬಿರಿಯಾನಿ ತಿಂದು ಬಂದಿದ್ದಾರೆ ಈಗ ಮಹದಾಯಿಗೆ ಹೊರಟಿದ್ದಾರೆ: ಪ್ರಜ್ವಲ್ ರೇವಣ್ಣ ಕಿಡಿ

Public TV
1 Min Read

ಬೆಳಗಾವಿ: ಕಾಂಗ್ರೆಸ್ ನಾಯಕರು ಮೇಕೆದಾಟಿಗೆ ಹೋಗಿ ಬಿರಿಯಾನಿ ತಿಂದು ಬಂದ್ರು, ಈಗ ಅವರು ಮಹದಾಯಿಗೆ ಬರ್ತಿನಿ ಅಂತಿದ್ದಾರೆ, ಕೃಷ್ಣೆಯ ಕಡೆಗೆ ಹೋಗಲು ಅವರಿಗೆ ಆಗುವುದಿಲ್ಲ ಎಂದು ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಕಿಡಿಕಾರಿದರು.

ಖಾನಾಪುರ ತಾಲೂಕಿನ ಮಲಪ್ರಭಾ ನದಿ ಉಗಮ ಸ್ಥಾನ ಕಣಕುಂಬಿಯಲ್ಲಿ ಜನತಾ ಜಲಧಾರೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ನಂತರ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ರಾಷ್ಟ್ರೀಯ ಪಕ್ಷಗಳು ಮಾಡುತ್ತಿರುವ ಅನ್ಯಾಯವನ್ನು ಎಷ್ಟು ದಿನ ಸಹಿಸುವುದು. ಹೀಗಾಗಿ ರಾಜ್ಯದ ನೀರಾವರಿ ಸಮಸ್ಯೆಗಳನ್ನು ಬಗೆಹರಿಸಲು ಜನತಾ ಜಲಧಾರೆ ಕಾರ್ಯಕ್ರಮವನ್ನು ಜೆಡಿಎಸ್ ಆಯೋಜಿಸಿದೆ. ಮಹದಾಯಿ, ಮಲಪ್ರಭಾ, ಕೃಷ್ಣಾ, ಕಾವೇರಿ ಸೇರಿದಂತೆ ರಾಜ್ಯದ ಎಲ್ಲ ನೀರಾವರಿ ಸಮಸ್ಯೆ ಬಗೆಹರಿಸಲು ಜೆಡಿಎಸ್ ಪಣ ತೊಟ್ಟಿದೆ ಎಂದರು. ಇದನ್ನೂ ಓದಿ: ಹಿಜಬ್ ಸಂಘರ್ಷಕ್ಕೆ ಕಾರಣರಾದ 6 ವಿದ್ಯಾರ್ಥಿಗಳಿಗೆ ಬೇಕಿದೆ ಮಾನಸಿಕ ಚಿಕಿತ್ಸೆ – ಆಂದೋಲ ಶ್ರೀ

ರಾಜ್ಯದ ನಾಯಕರೊಬ್ಬರು ನಮ್ಮ ಪಕ್ಷಕ್ಕೆ ಅಧಿಕಾರ ಕೊಟ್ರೆ ಸ್ವರ್ಗವನ್ನೆ ಕೆಳಗೆ ಇಳಿಸ್ತೀನಿ ಅಂತಿದ್ರು. ಇವತ್ತು ಕೇಂದ್ರ ಹಾಗೂ ರಾಜ್ಯದಲ್ಲಿ ಅವರದೇ ಸರ್ಕಾರ ಇದ್ರು ಮಹದಾಯಿ, ಕೃಷ್ಣಾ, ಕಾವೇರಿ ವಿಚಾರ ಚರ್ಚೆ ಮಾಡುತ್ತಿಲ್ಲ. ರಾಜ್ಯಕ್ಕೆ ಪ್ರಾದೇಶಿಕ ಪಕ್ಷದ ಅವಶ್ಯವಿದೆ, ತಮಿಳುನಾಡಿನಲ್ಲಿ, ಆಂಧ್ರದಲ್ಲಿ ಪ್ರಾದೇಶಿಕ ಪಕ್ಷಗಳು ಸಮರ್ಥವಾಗಿವೆ. ಕುಮಾರಸ್ವಾಮಿ ನೇತೃತ್ವದಲ್ಲಿ ಪೂರ್ಣ ಬಹುಮತದ ಜೆಡಿಎಸ್ ಸರ್ಕಾರ ಅಧಿಕಾರಕ್ಕೆ ಬರುತ್ತದೆ ಎಂದು ಪ್ರಜ್ವಲ್ ರೇವಣ್ಣ ವಿಶ್ವಾಸ ವ್ಯಕ್ತಪಡಿಸಿದರು.

ಎಂಟು ವರ್ಷಗಳ ಹಿಂದೆ ಕಾಂಗ್ರೆಸ್ ನಡಿಗೆ ಕೃಷ್ಣೆಯ ಕಡೆಗೆ ಮಾಡಿದ್ರು, ಅನುದಾನ ನೀಡುವ ಭರವಸೆ ನೀಡಿದ್ರು, ಅದ್ಯಾವುದು ಮಾಡಲಿಲ್ಲ. ಹೀಗಾಗಿ ಇವತ್ತು ಕಾಂಗ್ರೆಸ್‍ನವರು ಕೃಷ್ಣೆಯ ಕಡೆ ಹೋಗಲ್ಲ ಕಾಂಗ್ರೆಸ್‍ನವರು ಯಾವ ಮುಖ ಇಟ್ಕೊಂಡು ಮಹದಾಯಿ ಹೋರಾಟ ಮಾಡುತ್ತಾರೆ?. ಗೋವಾ ಚುನಾವಣೆ ಪ್ರಣಾಳಿಕೆಯಲ್ಲಿ ಕರ್ನಾಟಕಕ್ಕೆ ಒಂದು ಹನಿ ನೀರು ಕೊಡಲ್ಲ ಅಂತಾರೆ. ಕಾಂಗ್ರೆಸ್‍ಗೆ ಮಹದಾಯಿ ಹೋರಾಟ ಮಾಡುವ ನೈತಿಕ ಹಕ್ಕು ಇಲ್ಲ ಎಂದು ಪ್ರಜ್ವಲ್ ರೇವಣ್ಣ ಕಿಡಿಕಾರಿದರು. ಇದನ್ನೂ ಓದಿ: ಮಂತ್ರಿಯಾಗಿದ್ದಾಗ ಕಮಿಷನ್ ಪಡೆದಿದ್ರೆ ನಾನು ರಾಜಕೀಯದಿಂದ ನಿವೃತ್ತಿ ಪಡೆಯುತ್ತೇನೆ: ಡಿಕೆಶಿ

Share This Article
Leave a Comment

Leave a Reply

Your email address will not be published. Required fields are marked *