ಜೈಲಿಂದ ಹೊರಬಂದ ಬಳಿಕ ಹೆಚ್‌ಡಿಕೆ ಭೇಟಿಯಾದ ದೇವರಾಜೇಗೌಡ – ಪೆನ್‌ಡ್ರೈವ್‌ ಕೇಸ್ ಬಗ್ಗೆ ಮಾತುಕತೆ

Public TV
1 Min Read

– ನಾನು ಯಾವತ್ತೂ ದೇವೇಗೌಡರ ವಿರುದ್ಧ ಮಾತನಾಡಿಲ್ಲ
– ಪೆನ್‌ಡ್ರೈವ್‌ ಹಂಚಿಕೆಯಲ್ಲಿ ನನ್ನ ಪಾತ್ರವಿಲ್ಲ ಎಂದ ವಕೀಲ

ನವದೆಹಲಿ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ಅವರನ್ನು ವಕೀಲ ದೇವರಾಜೇಗೌಡ ಭೇಟಿಯಾಗಿ ಪೆನ್‌ಡ್ರೈವ್‌ ಪ್ರಕರಣ (Pen Drive ) ಸಂಬಂಧ ಮಾತುಕತೆ ನಡೆಸಿದ್ದಾರೆ.

ಜಾಮೀನು ಪಡೆದು ಜೈಲಿನಿಂದ ಹೊರಬಂದ ಬಳಿಕ ದೇವರಾಜೇಗೌಡ ಮೊದಲ ಬಾರಿಗೆ ಹೆಚ್‌ಡಿಕೆ (H.D.Kumaraswamy) ಭೇಟಿಯಾಗಿದ್ದಾರೆ. ದೆಹಲಿಯ ಕರ್ನಾಟಕ ಭವನದಲ್ಲಿ ಭೇಟಿ ಮಾಡಿದ್ದಾರೆ. ಇದನ್ನೂ ಓದಿ: ಮಂಗಳೂರು ಕಾರಾಗೃಹದ ಮೇಲೆ ಬೆಳ್ಳಂಬೆಳಗ್ಗೆ ಪೊಲೀಸರ ದಾಳಿ – ಜೈಲಲ್ಲೇ ಸಿಕ್ತು ಡ್ರಗ್ಸ್‌, ಗಾಂಜಾ, ಮೊಬೈಲ್‌

ಭೇಟಿ ಬಳಿಕ ಪ್ರತಿಕ್ರಿಯೆ ನೀಡಿದ ದೇವರಾಜೇಗೌಡ, ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತುಕತೆ ನಡೆಸಿದ್ದೇನೆ. ಹಂಚಿಕೆಯಲ್ಲಿ ನನ್ನ ಪಾತ್ರವಿಲ್ಲ ಎಂದು ಸ್ಪಷ್ಟನೆ ನೀಡಿದ್ದೇನೆ ಎಂದು ತಿಳಿಸಿದ್ದಾರೆ.

ನಾನು ಯಾವತ್ತೂ ದೇವೇಗೌಡರ ವಿರುದ್ಧ ಮಾತನಾಡಿಲ್ಲ. ರೇವಣ್ಣ ವಿರುದ್ಧ ಅಲ್ಲ, ಬದಲಿಗೆ ಅವರ ಕೆಟ್ಟ ಗುಣಗಳ ವಿರುದ್ಧ ಹೋರಾಟ ಮಾಡಿದ್ದೆ. ಈಗ ರೇವಣ್ಣ ಅವರಿಗೂ ಪಶ್ಚತಾಪ ಆಗಿದೆ. ಸಾರ್ವಜನಿಕವಾಗಿ ಮರ್ಯಾದೆ ಹೋಗಿದೆ ಎಂದಿದ್ದಾರೆ. ಇದನ್ನೂ ಓದಿ: ಊಟ, ಹಾಸಿಗೆ ಕೊಡ್ತಾರೆ ಮಲಗಿ ಹೋಗೋಣ ಅಂತಾ ಪ್ರತಿಭಟನೆ ಮಾಡ್ತಿದ್ದಾರೆ: ಲಕ್ಷ್ಮಣ ಸವದಿ

ಎಸ್‌ಐಟಿ ರಚನೆಯಾಗಿ ತನಿಖೆ ನಡೆಯುತ್ತಿದೆ. ಯಾರು ಪನ್‌ಡ್ರೈವ್ ಹಂಚಿಕೆ ಮಾಡಿದ್ದಾರೆ ಎಂದು ತನಿಖೆಯಲ್ಲಿ ಗೊತ್ತಾಗಿದೆ. ಇದರಲ್ಲಿ ನನ್ನದು ಯಾವುದೇ ಪಾತ್ರವಿಲ್ಲ. ಖಾಸಗಿ ತನಿಖೆಯೂ ಆಗಿದೆ, ಅದರಲ್ಲಿ ಪೆನ್‌ಡ್ರೈವ್ ಹಂಚಿಕೆಯಲ್ಲಿ ಯಾರ ಪಾತ್ರ ಇದೆ ಎಂದು ತಿಳಿದಿದೆ ಎಂದು ವಿವರಿಸಿದ್ದಾರೆ.

Share This Article