ಪ್ರಜ್ವಲ್ ರೇವಣ್ಣ ವೀಡಿಯೋ ಪ್ರಕರಣ- 32 GB, 8 GB ಪೆನ್‌ಡ್ರೈವ್‍ಗಳನ್ನು ವಶಕ್ಕೆ ಪಡೆದ SIT

By
1 Min Read

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಅವರದ್ದು ಎನ್ನಲಾದ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ವಿಶೇಷ ತನಿಖಾ ತಂಡ (SIT) ಅಧಿಕಾರಿಗಳು ಒಟ್ಟು 40 ಜಿಬಿಯ ಪೆನ್ ಡ್ರೈವ್‍ಗಳನ್ನು ವಶಕ್ಕೆ ಪಡೆದಿದ್ದಾರೆ.

32 ಜಿಬಿ ಮತ್ತು 8 ಜಿಬಿ ಎರಡು ಪೆನ್ ಡ್ರೈವ್‍ಗಳು ವಶಕ್ಕೆ ಪಡೆದಿರುವ ಅಧಿಕಾರಿಗಳು ಸತ್ಯಾಸತ್ಯತೆ ಪರಿಶೀಲನೆ ನಡೆಸಲು ಮುಂದಾಗಿದ್ದಾರೆ. ಈ ಎರಡು ಪೆನ್‍ಡ್ರೈವ್‍ಗಳನ್ನು ಎಫ್‍ಎಸ್‍ಎಲ್‍ಗೆ ರವಾನೆ ಮಾಡಲು ಸಿದ್ಧತೆ ನಡೆಸಲಾಗುತ್ತಿದೆ. ಈ ಮೂಲಕ ತಾಂತ್ರಿಕ ಸಾಕ್ಷ್ಯ ಕಲೆಹಾಕಲು ತಯಾರಿ ನಡೆಸಲಾಗುತ್ತಿದೆ.

ಅಶ್ಲೀಲ ವೀಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಳೆನರಸಿಪುರ ಟೌನ್ ಪೊಲೀಸ್ ಠಾಣೆಯಲ್ಲಿ ಹಾಸನ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ವಿರುದ್ಧ ಸಂತ್ರಸ್ತೆಯಿಂದ ದೂರು ದಾಖಲಾಗಿದೆ. ಸಂತ್ರಸ್ತೆ ನೀಡಿದ ದೂರಿನ ಆಧಾರದ ಮೇರೆಗೆ ಪೊಲೀಸರು ಎಫ್‍ಐಆರ್ ದಾಖಲಿಸಿದ್ದಾರೆ. ಐಪಿಸಿ ಸೆಕ್ಷನ್ 354 (ಎ) ಲೈಂಗಿಕ ಕಿರುಕುಳ, 354 (ಡಿ) (ಮಹಿಳೆಗೆ ಮುಜುಗರ ಆಗುವಂತೆ ಹಿಂಬಾಲಿಸುವುದು), 506 (ಬೆದರಿಕೆ), 509 (ಮಹಿಳೆ ಮಾನಕ್ಕೆ ಹಾನಿ ಉಂಟುಮಾಡುವುದು) ಅಡಿಯಲ್ಲಿ ಎಫ್‍ಐಆರ್ ದಾಖಲಿಸಲಾಗಿದೆ. ಈ ಪ್ರಕರಣದ ಸಮಗ್ರ ತನಿಖೆಯನ್ನೂ ನಿರ್ವಹಿಸುವಂತೆ ಎಸ್‍ಐಟಿಗೆ ಆದೇಶಿಸಿದೆ.

ಎಸ್‍ಐಟಿ ತನಿಖೆಯಲ್ಲಿ ಬೆಂಗಳೂರಿನ ಎಡಿಜಿಪಿ ಬಿಜಯಕುಮಾರ್ ಸಿಂಗ್, ಸಹಾಯಕ ಪೊಲೀಸ್ ಮಹಾ ನಿರೀಕ್ಷಕರಾದ ಸುಮನ್ ಡಿ. ಪನ್ನೇಕರ್ ಹಾಗೂ ಮೈಸೂರು ಎಸ್ಪಿ ಸೀಮಾ ಲಾಠ್ಕರ್ ಅವರನ್ನೊಳಗೊಂಡ ತಂಡ ಇದೆ. ಬಿಜಯ ಕುಮಾರ್ ಸಿಂಗ್ ತಂಡದ ಮುಖ್ಯಸ್ಥರಾಗಿದ್ದಾರೆ. ಈ ನಡುವೆ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹಾರಿದ್ದಾರೆ.

Share This Article