ವಿಶಾಲ ವಿಶ್ವದ ಇನ್ನಷ್ಟು ವಿಸ್ಮಯಗಳನ್ನು ಅರಿಯಲು ದಾರಿಯಾಗಲಿ- ಇಸ್ರೋಗೆ ಪ್ರಕಾಶ್‌ ರಾಜ್‌ ಧನ್ಯವಾದ

Public TV
1 Min Read

ಚಂದ್ರಯಾನ 3 (Chandrayaan 3) ಬಗ್ಗೆ ವ್ಯಂಗ್ಯ ಮಾಡಿ ಟ್ವೀಟ್ ಮಾಡಿದ್ದ ನಟ ಪ್ರಕಾಶ್ ರಾಜ್ (Prakash Raj) ಅನೇಕರ ಕೆಂಗಣ್ಣಿಗೆ ಗುರಿಯಾಗಿದ್ದರು. ಬಳಿಕ ಈ ಬಗ್ಗೆ ಸ್ಪಷ್ಟನೆ ನೀಡಿದ್ದರು. ಇದೀಗ ಮತ್ತೆ ಚಂದ್ರಯಾನ 3 ಬಗ್ಗೆ ನಟ ಟ್ವೀಟ್ ಮಾಡಿದೆ. ಇಸ್ರೋ ಸಾಧನೆಗೆ ಭೇಷ್ ಎಂದಿದ್ದಾರೆ.

ಚಂದ್ರನ ಮೇಲೆ ಭಾರತ ಸ್ಪರ್ಶಿಸಿದೆ. ಅಮೆರಿಕಾ, ರಷ್ಯಾ, ಚೀನಾ ನಂತರ ಭಾರತ ಕೂಡ ಚಂದ್ರಲೋಕಕ್ಕೆ ಲಗ್ಗೆಯಿಟ್ಟು ಸಕ್ಸಸ್ ಕಂಡಿದೆ. ಈ ಬಗ್ಗೆ ಮತ್ತೆ ಬಹುಭಾಷಾ ನಟ ಪ್ರಕಾಶ್ ರಾಜ್ ರಿಯಾಕ್ಟ್ ಮಾಡಿದ್ದಾರೆ.

ಭಾರತದ ಮನುಕುಲದ ಹೆಮ್ಮೆಯ ಕ್ಷಣಗಳಿವು ಧನ್ಯವಾದಗಳು. ಚಂದ್ರಯಾನ 3, ವಿಕ್ರಮ್ ಲ್ಯಾಂಡರ್ ಮತ್ತು ಸಾಧ್ಯವಾಗಿಸಿದ ಎಲ್ಲರಿಗೂ. ವಿಶಾಲ ವಿಶ್ವದ ಇನ್ನಷ್ಟು ವಿಸ್ಮಯಗಳನ್ನು ಅರಿಯಲು ಸಂಭ್ರಮಿಸಲು ಇದು ದಾರಿಯಾಗಲಿ ಎಂದು ಟ್ವೀಟ್ ಮಾಡಿದ್ದಾರೆ. ಈ ಮೂಲಕ ಚಂದ್ರಯಾನ 3 ಯಶಸ್ಸಿಗೆ ಅಭಿನಂದನೆಗಳನ್ನ ಪ್ರಕಾಶ್‌ ರಾಜ್ ತಿಳಿಸಿದ್ದಾರೆ.

ಚಂದ್ರಯಾನ-3 ಕುರಿತಂತೆ ಟ್ವೀಟ್ ಮಾಡಿ ವಿವಾದ ಮೈಮೇಲೆ ಎಳೆದುಕೊಂಡಿದ್ದ ದಕ್ಷಿಣ ಭಾರತದ ಹೆಸರಾಂತ ನಟ ಪ್ರಕಾಶ್ ರಾಜ್ (Prakash Raj) ಟ್ವೀಟ್ ಮೂಲಕ ಸ್ಪಷ್ಟನೆ ನೀಡಿದ್ದರು. ದ್ವೇಷಕ್ಕೆ ದ್ವೇಷ ಮಾತ್ರ ಕಾಣಿಸುತ್ತದೆ, ನಿಮಗೆ ಜೋಕ್ ಅರ್ಥವಾಗದಿದ್ದರೆ, ಅದು ನಿಮ್ಮ ಮೇಲೆಯೇ ಮಾಡಿದ ಜೋಕ್ ಆಗುತ್ತದೆ, ಬಾಲಿಶವಾಗಿ ವರ್ತಿಸುವುದನ್ನ ನಿಲ್ಲಿಸಿ ಎಂದು ಟ್ವೀಟ್ ಮೂಲಕ ಪ್ರತಿಕ್ರಿಯಿಸಿದ್ದರು. ಚಂದ್ರಯಾನ ಇದೀಗ ಕಳುಹಿಸಿರುವ ಫೋಟೋ ಎಂದು ಕ್ಯಾಪ್ಷನ್ ನೀಡಿ ಚಾಯ್ ವಾಲಾ ಫೋಟೋ ಹಾಕಿದ್ದ ಅವರ ವರ್ತನೆಗೆ ಭಾರೀ ಆಕ್ರೋಶ ವ್ಯಕ್ತವಾಗಿತ್ತು.

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್