ಧಾರವಾಡ ಜಿಲ್ಲೆಯಲ್ಲಿಯೂ ಅಧಿಕಾರಿಗಳ ವರ್ಗಾವಣೆ ಹರಾಜು ಪ್ರಕ್ರಿಯೆ ನಡೆದಿದೆ: ಪ್ರಹ್ಲಾದ್‌ ಜೋಶಿ ಬಾಂಬ್‌

Public TV
2 Min Read

ಹುಬ್ಬಳ್ಳಿ: ಧಾರವಾಡ ಜಿಲ್ಲೆಯಲ್ಲಿಯೂ ಸಹ ಅಧಿಕಾರಿಗಳ ವರ್ಗಾವಣೆ ಹರಾಜು ಪ್ರಕ್ರಿಯೆ ನಡೆದಿದ್ದು, ಅಧಿಕಾರಿಗಳು ನನಗೆ ವಯಕ್ತಿಕವಾಗಿ ಕರೆ ಮಾಡಿ ನೋವು ನೋಡಿಕೊಳ್ಳುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಬಾಂಬ್ ಸಿಡಿಸಿದ್ದಾರೆ.

ಮಾಜಿ ಸಿಎಂ ಕುಮಾರಸ್ವಾಮಿ (H.D. Kumaraswamy) ವರ್ಗಾವಣೆ ಆರೋಪ ವಿಚಾರವಾಗಿ ಹುಬ್ಬಳ್ಳಿಯಲ್ಲಿ ಪ್ರತಿಕ್ರಿಯೆ ನೀಡಿ ಮಾತನಾಡಿದ ಅವರು, ವರ್ಗಾವಣೆ ವಿಚಾರದಲ್ಲಿ ಸಾಕಷ್ಟು ಅವ್ಯವಹಾರ ನಡೆಯುತ್ತಿವೆ. ಬಿಜೆಪಿ ಮೇಲೆ ಕಾಂಗ್ರೆಸ್ ಮಾಡಿದ್ದ ಆರೋಪದ ಹತ್ತು ಪಟ್ಟು ಭ್ರಷ್ಟಾಚಾರ ನಡೆಯುತ್ತಿದೆ. ವರ್ಗಾವಣೆಗಳನ್ನು ಹರಾಜು ಮಾಡಲಾಗುತ್ತಿದೆ. 10, 12 ಲಕ್ಷ ಕೊಟ್ಟವರಿಗೆ ವರ್ಗಾವಣೆ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಅನ್ಯಕೋಮಿನ ಸದಸ್ಯನಿಗೆ ದಕ್ಕಿದ ಅಧ್ಯಕ್ಷ ಸ್ಥಾನ – 19 ಗ್ರಾಪಂ ಸದಸ್ಯರಿಂದ ಸಾಮೂಹಿಕ ರಾಜೀನಾಮೆ

ಸುಪ್ರೀಂ ಕೋರ್ಟ್‌ ತೀರ್ಪಿನ ಕುರಿತು ಮಾತನಾಡಿ, ರಾಹುಲ್ ಗಾಂಧಿಯವರ ಶಿಕ್ಷೆಯನ್ನು ಕೋರ್ಟ್ ತಡೆದಿದೆಯೇ ಹೊರೆತು, ಅವರು ಮಾಡಿದ್ದು ಸರಿ ಅಂತ ಒಪ್ಪಿಕೊಂಡಿಲ್ಲ. ಮಾತನಾಡಿದ್ದು ತಪ್ಪು ಅಂತ ಹೇಳಿದೆ. ಕೋರ್ಟ್ ತೀರ್ಪು ಆಧರಸಿ ಸ್ಪೀಕರ್ ಅವರು ರಾಹುಲ್ ಗಾಂಧಿ ಸಂಸದ ಸ್ಥಾನದ ಬಗ್ಗೆ ತೀರ್ಮಾನ ತೆಗೆದುಕೊಳ್ಳತ್ತಾರೆ. ರಾಹುಲ್ ಗಾಂಧಿಯ ಅವರ ಪ್ರಕರಣದಲ್ಲಿ ಯಾವುದೇ ರಾಜಕೀಯ ಇಲ್ಲ. ಅದು‌ ನ್ಯಾಯಾಲಯದ ವಿಚಾರ ಎಂದರು.

ಸಮಾಜ ವಿದ್ರೋಹಿಗಳಿಗೆ ಕಾಂಗ್ರೆಸ್ ಬಂದಿದ್ದು ಕುಮ್ಮಕ್ಕು ಸಿಕ್ಕಂತಾಗಿದೆ. ನಾವು ಏನು ಮಾಡಿದರೂ ಕಾಂಗ್ರೆಸ್ ಪಾರ್ಟಿ ಸಂರಕ್ಷಣೆ ನೀಡುತ್ತೆ ಅಂತ ಇದನ್ನು ಮಾಡಲಾಗುತ್ತಿದೆ ಎಂದು ಉಡುಪಿ ಹಾಸ್ಟೆಲ್ ವೀಡಿಯೋ ಮತ್ತು ಹುಬ್ಬಳ್ಳಿ ಕಾಲೇಜು ಪೋಸ್ಟ್ ವಿಚಾರವಾಗಿ ಗರಂ ಆದರು. ಇದನ್ನೂ ಓದಿ: ಮೋದಿ ಮತ್ತೆ ಪ್ರಧಾನಿಯಾಗಲಿ: ಅಮರನಾಥ ಯಾತ್ರೆ ಮಾಡಿ ಶೋಭಾ ಕರಂದ್ಲಾಜೆ ವಿಶೇಷ ಪೂಜೆ

ಆರಗ ಜ್ಞಾನೇಂದ್ರ ಅವರ ಬೇಡಿಕೆಗೆ ನಮ್ಮ ಸಮ್ಮತಿ ಇದೆ. ಆದರೆ ಅವರ ಹೇಳಿಕೆಗೆ ನಮ್ಮ ವಿರೋಧವಿದೆ. ಖರ್ಗೆಯವರ ಬಗ್ಗೆ ಜ್ಞಾನೇಂದ್ರ ಆ ರೀತಿ ಮಾತನಾಡಬಾರದಿತ್ತು. ರಾಜಕೀಯ ವಿಚಾರವಾಗಿ ಖರ್ಗೆ ಮತ್ತು ನಮ್ಮ ನಡುವೆ ಸಾಕಷ್ಟು ಭಿನ್ನಾಭಿಪ್ರಾಯವಿದೆ. ಆದರೆ ವಯಕ್ತಿಕವಾಗಿ ಖರ್ಗೆ ಅನುಭವ, ಹಿರಿತನದ ಬಗ್ಗೆ ಗೌರವವಿದೆ. ಯಾವುದೇ ವ್ಯಕ್ತಿ ಮೈ ಬಣ್ಣ, ಪ್ರದೇಶ‌ ನೋಡಿ ಮಾತನಾಡುವುದು ಸರಿಯಲ್ಲ.
ಈ ಕುರಿತು ನಾನು ಜ್ಞಾನೇಂದ್ರಗೆ ತಿಳಿ ಹೇಳುತ್ತೇನೆ ಎಂದು ಹೇಳಿದರು.

ಗೃಹಜ್ಯೋತಿ ಅರ್ಜಿ ಸಲ್ಲಿಕೆ ವಿಚಾರದಲ್ಲಿ ಸಾಕಷ್ಟು ಗೊಂದಲಗಳಿದ್ದವು. ಈಗ ಅದೇ ಮುಂದುವರಿದಿದೆ. ದಿನ ಬಳಕೆ ವಿದ್ಯುತ್ ದರ ಜಾಸ್ತಿ ಮಾಡಿ ಯೋಜನೆ ಜಾರಿ ಮಾಡಲಾಗಿದೆ. ರಾಜಸ್ಥಾನದಲ್ಲಿ ಹೀಗೆ ಫ್ರೀ ವಿದ್ಯುತ್ ಕೊಡುತ್ತೇನೆ ಅಂತ ಹೇಳಿ ವಿದ್ಯುತ್ ದರ ಏರಿಕೆ ಮಾಡಿದ್ದಾರೆ ಎಂದು ಲೇವಡಿ ಮಾಡಿದರು.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್