ಬಾಗಲಕೋಟೆ ಕಲ್ಲು ತೂರಾಟ ಪ್ರಕರಣ – ಕಾಂಗ್ರೆಸ್‌ ಸರ್ಕಾರ ಇದ್ದಾಗಲೇ ಯಾಕೆ ಹೀಗಾಗುತ್ತೆ: ಜೋಶಿ ಪ್ರಶ್ನೆ

1 Min Read

ರಾಯಚೂರು: ಬಾಗಲಕೋಟೆಯಲ್ಲಿ (Bagalkote) ಶಿವಾಜಿ ಮೆರವಣಿಗೆ ವೇಳೆ ಕಲ್ಲು ತೂರಾಟ (Stone Pelting) ನಡೆದಿದೆ. ನಿಮ್ಮ ಸರ್ಕಾರ ಬಂದಾಗಲೇ ಯಾಕೇ ಹೀಗಾಗುತ್ತೆ ಎಂದು ಕಾಂಗ್ರೆಸ್‌ ನಾಯಕರಿಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಪ್ರಶ್ನಿಸಿದ್ದಾರೆ.

ರಾಯಚೂರಿನ (Raichur) ಹಟ್ಟಿ ಪಟ್ಟಣದಲ್ಲಿ ಅವರು ಮಾತನಾಡಿದರು. ಈ ವೇಳೆ, ಬಾಂಬ್ ಹಾಕಿದವರನ್ನು ಬ್ರದರ್ಸ್ ಅಂತೀರಿ. ಗಣೇಶನ ವಿಗ್ರಹಕ್ಕೂ ಮಸೀದಿಯಿಂದ ಕಲ್ಲು ಬಿತ್ತು. ಶಿವಾಜಿ ಮೆರವಣಿಗೆಯಲ್ಲೂ ಮಸೀದಿಯಿಂದ ಕಲ್ಲು ಬೀಳುತ್ತೆ. ಕಲ್ಲು ಹೊಡೆದವರನ್ನ ಅರೆಸ್ಟ್ ಮಾಡೊದಿಲ್ಲ. ಅಕ್ರಮ ಮಸೀದಿ ಎಂದವರ ಮೇಲೆ ಕೇಸ್ ಹಾಕಿದ್ರಿ. ಪೊಲೀಸರಿಗೆ ಫ್ರೀ ಹ್ಯಾಂಡ್ ಕೊಟ್ರೆ ಹೀಗೆ ಆಗಲ್ಲ ಎಂದಿದ್ದಾರೆ. ಇದನ್ನೂ ಓದಿ: ಬಾಗಲಕೋಟೆಯ ಫಿಶ್‌, ತರಕಾರಿ ಮಾರ್ಕೆಟ್‌ ಮೇಲೆ ಕಲ್ಲು ತೂರಾಟ – ಪೊಲೀಸರಿಂದ ಲಾಠಿ ಚಾರ್ಜ್‌

ಕಾಂಗ್ರೆಸ್ ಪೊಲೀಸರ ಮೇಲೆ ಹಿಡಿತ ಇಟ್ಟುಕೊಂಡಿದೆ. ಕಾಂಗ್ರೆಸ್ ತುಷ್ಟಿಕರಣದಿಂದ ಹೀಗೆ ಆಗುತ್ತಿದೆ. ತುಷ್ಟಿಕರಣ ನೀತಿಯಿಂದ ಇಂತಹ ಘಟನೆಗಳು ನಡೆಯುತ್ತವೆ. ಪೊಲೀಸ್ ಅಧಿಕಾರಿಗಳ ಮೇಲೆ ದಬಾವಣೆ ಮಾಡುತ್ತಿರುವುದಕ್ಕೆ ಇಂತಹ ಘಟನೆ ಆಗುತ್ತಿವೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಶಿವಾಜಿ ಜಯಂತಿ ಸರ್ಕಾರ ಅನೌನ್ಸ್ ಮಾಡಿರುವ ಕಾರ್ಯಕ್ರಮ. ಕಾನೂನು ಸುವ್ಯವಸ್ಥೆ ಹದಗೆಡದಂತೆ ನೋಡಿಕೊಳ್ಳಬೇಕು. ಆರೋಪಿಗಳನ್ನು ಅರೆಸ್ಟ್ ಮಾಡುವುದಲ್ಲದೆ ಗಡಿಪಾರು ಮಾಡಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: ಬಾಗಲಕೋಟೆಯಲ್ಲಿ ಉದ್ವಿಗ್ನ – ಮುಸ್ಲಿಂ ಮುಖಂಡರು ಗೈರು, ಶಾಂತಿ ಸಭೆ ವಿಫಲ

Share This Article