ಸಿ.ಟಿ ರವಿ ಫೇಕ್‌ ಎನ್‌ಕೌಂಟರ್‌ ಮಾಡಬೇಕೆಂಬ ವಿಚಾರ ಅಲ್ಲಿನ ಪೊಲೀಸ್‌ ತಂಡಕ್ಕೆ ಇತ್ತು ಅನಿಸುತ್ತೆ: ಜೋಶಿ ಬಾಂಬ್‌

Public TV
2 Min Read

ಬಾಗಲಕೋಟೆ: ಮಾಧ್ಯಮದವರು ಇಲ್ಲದೇ ಇದ್ದಿದ್ರೆ, ಸಿ.ಟಿ ರವಿ (CT Ravi) ಅವರನ್ನ ಫೇಕ್‌ ಎನ್‌ಕೌಂಟರ್‌ ಮಾಡುವಂತಹ ವಿಚಾರ ಅಲ್ಲಿನ ಪೊಲೀಸ್‌ ತಂಡಕ್ಕೆ ಇತ್ತು ಅನ್ನಿಸುತ್ತೆ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ (Pralhad Joshi) ಬಾಂಬ್‌ ಸಿಡಿಸಿದ್ದಾರೆ.

ಸಿ.ಟಿ ರವಿ ಅವರನ್ನು ಬಂಧಿಸಿದ್ದ ವಿಚಾರ ಕುರಿತು ಬಾಗಲಕೋಟೆಯಲ್ಲಿ (Bagalkote) ಮಾತನಾಡಿದ ಅವರು, ಅವಕಾಶ ಸಿಕ್ಕಿದ್ರೆ ಸಿ.ಟಿ ರವಿ ಅವರನ್ನು ಮುಗಿಸಬೇಕು ಅಂತಾ ಯೋಚನೆ ಮಾಡಿದ್ದರು ಅನ್ನಿಸುತ್ತೆ. ಆದ್ರೆ ಅವರಿಗೆ ಸರಿಯಾದ ಅವಕಾಶ ಸಿಕ್ಕಿಲ್ಲ. ಏಕೆಂದರೆ ಆಗ ನಮ್ಮ ಮತ್ತೊಬ್ಬರು ಎಂಎಲ್‌ಸಿ ಕೇಶವ್‌ ಪ್ರಸಾದ್‌ ಜೊತೆಯಲ್ಲಿದ್ದರು. ಮಾಧ್ಯಮದವರಿಂದ ನಮಗೆ ಲೈವ್‌ ಲೊಕೇಶನ್‌ ಸಿಗ್ತಾ ಇತ್ತು ಎಂದು ಹೇಳಿದ್ದಾರೆ. ಇದನ್ನೂ ಓದಿ: ಶೈಕ್ಷಣಿಕ ಪ್ರವಾಸದ ವೇಳೆ ವಿದ್ಯಾರ್ಥಿ ಸಾವು – ಮುಖ್ಯಶಿಕ್ಷಕ ಸೇರಿ 6 ಶಿಕ್ಷಕರು ಅಮಾನತು

ನಿಜವಾಗ್ಲೂ ನಾವು ಮಾಧ್ಯಮದವರಿಗೆ ಧನ್ಯವಾದ ಹೇಳಬೇಕು. ಅಷ್ಟು ರಾತ್ರಿಯಲ್ಲೂ ಪೊಲೀಸರ ಬೆನ್ನತ್ತಿ, ವಿಡಿಯೋ ಮಾಡಿ, ಲೈವ್‌ ಲೊಕೇಶನ್‌ ಹಾಕ್ತಾ ಇದ್ರು. ಹಾಗಾಗಿ ಸಿ.ಟಿ ರವಿ ಅವರನ್ನ ಮುಗಿಸಲು ಅವಕಾಶ ಸಿಕ್ಕಿಲ್ಲ ಎಂದು ಸ್ಫೋಟಕ ಹೇಳಿಕೆ ನೀಡಿದ್ದಾರೆ.

ಇದು ಸಂಪೂರ್ಣವಾಗಿ ಗೃಹ ಇಲಾಖೆಯ ವೈಫಲ್ಯ, ಹೀಗಾಗಿ ನಾವಿದನ್ನ ಇಲ್ಲಿಗೆ ಬಿಡಲ್ಲ. ಈಗಾಗಲೇ ನಾನು, ಸಿ.ಟಿ ರವಿ ಅವರಿಗೆ ಸೂಕ್ತ ಕಾನೂನು ಸಲಹೆ ಪಡೆಯುವಂತೆ ಹೇಳಿದ್ದೇನೆ. ಈ ಕುತಂತ್ರದ ಹಿಂದೆ ಯಾರಿದ್ದಾರೆ ಎಂಬುದರ ಬಗ್ಗೆ ತನಿಖೆ ಮಾಡಲು ನಾವು ಕೋರ್ಟ್‌ಗೆ ಹೋಗುತ್ತೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಪಾಪ್ ಕಾರ್ನ್‌ ಮೇಲೆ 3 ರೀತಿಯ ಜಿಎಸ್‌ಟಿ – ಕೌನ್ಸಿಲ್‌ ಸಭೆಯಲ್ಲಿ ಒಪ್ಪಿಗೆ; ಯಾವುದು ದುಬಾರಿ?

ಇನ್ನೂ ಸಿ.ಟಿ ರವಿ ಅವಹೇಳನಕಾರಿ ಶದ್ಧ ಬಳಸಿದಕ್ಕೆ ಎನ್ಕೌಂಟರ್ ಮಾಡ್ತಿದ್ರಾ? ಎಂಬ ಮಾಧ್ಯಮದವ್ರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಅದೊಂದೇ ಕಾರಣ ಅಂತ ನಾನು ಹೇಳೋದಿಲ್ಲ. ಈ ರೀತಿ ಒಬ್ಬರನ್ನ ಎನ್‌ಕೌಂಟರ್‌ ಮಾಡಿಬಿಟ್ರೆ, ಬಿಜೆಪಿಯವ್ರು ಮುಂದೆ ಯಾವುದೇ ಚಟುವಟಿಕೆ ಮಾಡಲ್ಲ, ಹೆದರಿಕೊಂಡು ಮೂಲೆ ಸೇರುತ್ತಾರೆ ಅಂತ ಭಯ ಸೃಷ್ಟಿ ಮಾಡುವ ಪ್ರಯತ್ನ ಎಂದು ಅಭಿಪ್ರಾಯಪಟ್ಟಿದ್ದಾರೆ.

ನಾನು ವಿಶೇಷವಾಗಿ ಪೊಲೀಸರಿಗೆ ಹೇಳೋದು, ನೀವು ಈ ರೀತಿ ರಾಜಕೀಯ ಕೈಗೊಂಬೆಗಳಾಗಿ ವರ್ತಿಸಬಾರದು. ಏಕೆಂದರೆ ನಾಳೆ ಸರ್ಕಾರ ಬದಲಾಗುತ್ತೆ. ಸರ್ಕಾರದಲ್ಲಿ ಅಧಿಕಾರಕ್ಕೆ ಬರುವವರೂ ಚೇಂಜ್ ಆಗ್ತಾ ಇರ್ತಾರೆ, ಇದನ್ನ ನೆನಪಿಟ್ಟುಕೊಳ್ಳಬೇಕು ಎಂದು ಪೊಲೀಸರಿಗೆ ಖಡಕ್ ಎಚ್ವರಿಕೆ‌ನೀಡಿದ್ದಾರೆ. ಇದನ್ನೂ ಓದಿ: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವ್ರಿಗೆ ಲಿಂಗಾಯತ ವಿರೋಧಿ ಕಾಂಗ್ರೆಸ್‌ ಸರ್ಕಾರದಿಂದ 10,000 ಬಹುಮಾನ: ಯತ್ನಾಳ್‌ ಕಿಡಿ

Share This Article