ಗೋವಾ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರಾ ಪ್ರಮೋದ್ ಸಾವಂತ್?

By
1 Min Read

ಪಣಜಿ: ಗೋವಾ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದ್ದು, ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮೋದ್ ಸಾವಂತ್ ಮುಂದುವರಿಯುತ್ತಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

2019ರಲ್ಲಿ ಬಿಜೆಪಿ ನಾಯಕ ಮನೋಹರ್ ಪರಿಕ್ಕರ್ ಅವರ ನಿಧನದ ಬಳಿಕ ಗೋವಾ ಮುಖ್ಯಮಂತ್ರಿಯಾಗಿ ಪ್ರಮೋದ್ ಸಾವಂತ್ ಅಧಿಕಾರ ಸ್ವೀಕರಿಸಿದ್ದರು. ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 40ರಲ್ಲಿ 20 ಸ್ಥಾನಗಳನ್ನು ಗೆದ್ದಿದೆ. ಗುರುವಾರ ಚುನಾವಣಾ ಫಲಿತಾಂಶಗಳು ಪ್ರಕಟವಾಗುತ್ತಿದ್ದಂತೆ, ಬಿಜೆಪಿ ನಾಯಕ ಪ್ರಮೋದ್ ಸಾವಂತ್ ಅವರು ಮೂರು ವಿಜೇತ ಪಕ್ಷೇತರ ಅಭ್ಯರ್ಥಿಗಳ ಖಚಿತ ಬೆಂಬಲವನ್ನು ಹೊಂದಿದ್ದು, ಗೋವಾದಲ್ಲಿ ಸರ್ಕಾರ ರಚಿಸಲು ಅವಕಾಶ ಮಾಡಿಕೊಟ್ಟಿದ್ದಾರೆ ಎಂದು ಹೇಳಿದ್ದಾರೆ.

ಮುಖ್ಯಮಂತ್ರಿ ಸ್ಥಾನಕ್ಕೆ ಪ್ರಮೋದ್ ಸಾವಂತ್ ಅವರ ಹೆಸರನ್ನು ಗೋವಾದಲ್ಲಿ ಬಿಜೆಪಿಯ ಚುನಾವಣಾ ಉಸ್ತುವಾರಿ ದೇವೇಂದ್ರ ಫಡ್ನವೀಸ್ ಅನುಮೋದಿಸಿದ್ದಾರೆ. ಇದಲ್ಲದೆ, ರಾಜ್ಯ ಬಿಜೆಪಿಗೆ ಈ ಕುರಿತಂತೆ ತಿಳಿಸಲಾಗಿದೆ ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ: ರಷ್ಯಾ-ಉಕ್ರೇನ್ ಯುದ್ಧ – ಇನ್‍ಸ್ಟಾಗ್ರಾಮ್ ನಿರ್ಬಂಧಿಸಲು ಮುಂದಾದ ರಷ್ಯಾ

ಗೋವಾದಲ್ಲಿ ಸರ್ಕಾರ ರಚನೆಗೆ ಹಕ್ಕು ಮಂಡಿಸಲು ಪ್ರಮೋದ್ ಸಾವಂತ್ ರಾಜ್ಯಪಾಲರನ್ನು ಭೇಟಿ ಮಾಡುವ ಸಾಧ್ಯತೆ ಇದೆ. ಈ ವೇಳೆ ಬಿಜೆಪಿಯ ಸಾಮಾನ್ಯ ವೀಕ್ಷಕರು ಶನಿವಾರ ರಾತ್ರಿ ಅಥವಾ ಭಾನುವಾರ ಬೆಳಗ್ಗೆ ಗೋವಾಕ್ಕೆ ಬರಬಹುದು ಎನ್ನಲಾಗುತ್ತಿದೆ.

2022 ರ ಗೋವಾ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 40 ರಲ್ಲಿ 20 ಸ್ಥಾನಗಳನ್ನು ಗೆದ್ದರೆ, ಕಾಂಗ್ರೆಸ್ 11 ಸ್ಥಾನಗಳನ್ನು ಗಳಿಸಿದೆ. ಆಮ್ ಆದ್ಮಿ ಪಕ್ಷ ಮತ್ತು ಮಹಾರಾಷ್ಟ್ರವಾದಿ ಗೋಮಾಂತಕ್ ಪಕ್ಷವು ತಲಾ ಎರಡು ಸ್ಥಾನಗಳನ್ನು ಪಡೆದಿದೆ. ಇದನ್ನೂ ಓದಿ: ಉಕ್ರೇನ್‌ ಮೇಯರ್‌ ಕಿಡ್ನಾಪ್ ಮಾಡಿದ ರಷ್ಯಾ ಸೇನೆ

Share This Article
Leave a Comment

Leave a Reply

Your email address will not be published. Required fields are marked *