ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣ (Dharmasthala Case) ಸಂಬಂಧ ಎಸ್‌ಐಟಿ (SIT) ತನಿಖೆ ಚುರುಕುಗೊಂಡಿದೆ. ಬೆಳ್ತಂಗಡಿ ಎಸ್‌ಐಟಿ ಕಚೇರಿಯಲ್ಲಿ ಎಸ್‌ಐಟಿ ಮುಖ್ಯಸ್ಥ ಪ್ರಣವ್ ಮೊಹಾಂತಿ (Pranav Mohanty) ಪ್ರಗತಿ ಪರಿಶೀಲನೆ ಸಭೆ ನಡೆಸಿದ್ದಾರೆ.
ಪ್ರಕರಣದ ತನಿಖಾಧಿಕಾರಿ ಜಿತೇಂದ್ರ ದಯಾಮ ಕೂಡ ಸಭೆಯಲ್ಲಿ ಭಾಗಿಯಾಗಿದ್ದರು. ಮುಂದಿನ ತನಿಖೆಯ ಎಸ್‌ಐಟಿ ತಂಡ ಬ್ಲೂಪ್ರಿಂಟ್ ರೆಡಿ ಮಾಡಲಿದ್ದಾರೆ. ಈಗಾಗಲೇ ಎಸ್‌ಐಟಿ ತನಿಖೆ ಕುತೂಹಲ ಘಟ್ಟಕ್ಕೆ ತಲುಪಿದೆ. ಬುರುಡೆ ಹಿಂದೆ ಬಿದ್ದು ಎಸ್‌ಐಟಿ ಪೊಲೀಸರು ಕಳೆದ 55 ದಿನಗಳಿಂದ ಹೇಳಿಕೆಗಳ ದಾಖಲು, ಮಹಜರು ಪ್ರಕ್ರಿಯೆ ನಡೆಸಿದ್ದಾರೆ. ಬಂಗ್ಲೆಗುಡ್ಡೆ ಕಾಡಿನಿಂದ ಬುರುಡೆ ತಂದಿದ್ದ ವಿಠಲಗೌಡ, ಬುರುಡೆ ಬಂದ ನಂತರ ಗಿರೀಶ್ ಮಟ್ಟಣ್ಣ ಮಾಸ್ಟರ್ ಪ್ಲಾನ್, ಜಯಂತ್, ಯೂಟ್ಯೂಬರ್‌ಗಳಾದ ಅಭಿಷೇಕ್, ಕೇರಳದ ಮನಾಫ್ ವಿಚಾರಣೆ ಹೀಗೆ ಕಳೆದ ಹತ್ತು ದಿನಗಳಿಂದ ವಿಚಾರಣೆ ನಡೆಸಿರುವ ಎಸ್‌ಐಟಿ ತಂಡ ಎಲ್ಲರ ಹೇಳಿಕೆಗಳು ತಾಳೆಹಾಕಿ ಮುಂದಿನ ನಿರ್ಧಾರ ಕೈಗೊಳ್ಳಲಿದ್ದಾರೆ. ಇದನ್ನೂ ಓದಿ: ಅಪ್ಪ-ಅಮ್ಮನ ಜಗಳಕ್ಕೆ ಮಕ್ಕಳು ಬಲಿ; ತಂದೆ ನೇಣಿಗೆ ಶರಣು, ಪ್ರಾಣಪಾಯದಿಂದ ತಾಯಿ ಪಾರು
ತನಿಖೆಯ ಅಂತಿಮ ವರದಿಯ ಬಗ್ಗೆಯೂ ಸಭೆಯಲ್ಲಿ ಚರ್ಚಿಸಿದ್ದು, ತನಿಖೆಯ ವೇಗ ಹೆಚ್ಚಿಸಿ, ಎಲ್ಲಾ ಆಯಾಮದ ತನಿಖೆಯನ್ನೂ ಶೀಘ್ರದಲ್ಲೇ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಮೊಹಾಂತಿ ಸೂಚನೆ ನೀಡಿದ್ದಾರೆ. ಇದನ್ನೂ ಓದಿ: ಥಾಯ್ಲೆಂಡ್‌ನಲ್ಲಿ ಝೂ ಸಿಬ್ಬಂದಿಯನ್ನೇ ಕೊಂದು ತಿಂದ ಸಿಂಹಪಡೆ