ಗಂಡು ಮಗುವಿಗೆ ಜನ್ಮ ನೀಡಿದ ಪ್ರಣೀತಾ ಸುಭಾಷ್

Public TV
1 Min Read

ಸ್ಯಾಂಡಲ್‌ವುಡ್ ನಟಿ ಪ್ರಣೀತಾ ಸುಭಾಷ್ (Pranitha Subhash) ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಎರಡನೇ ಮಗುವನ್ನು ಬರಮಾಡಿಕೊಂಡಿರುವ ಖುಷಿಯಲ್ಲಿದ್ದಾರೆ ಪ್ರಣೀತಾ ಸುಭಾಷ್‌ ದಂಪತಿ.

ತುಂಬಾ ಖುಷಿಯಾಗುತ್ತಿದೆ, ಪುಟ್ಟ ಮಗುವನ್ನು ನೋಡಿ ಮಗಳು ಆರ್ನಾ ಆಕಾಶದಲ್ಲಿ ತೇಲುತ್ತಿದ್ದಾಳೆ. ಆಕೆ ತಮ್ಮನನ್ನು ಬೇಬಿ ಎಂದು ಕರೆಯುತ್ತಿದ್ದಾಳೆ ಎಂದು ಪ್ರಣೀತಾ ಸಂತಸ ವ್ಯಕ್ತಪಡಿಸಿದ್ದಾರೆ. ತಾಯಿ ಮತ್ತು ಮಗು ಇಬ್ಬರೂ ಆರೋಗ್ಯವಾಗಿದ್ದಾರೆ. ಇದನ್ನೂ ಓದಿ:ಹೆಣ್ಣು ಮಗುವಿಗೆ ಜನ್ಮ ನೀಡಿದ ಮಿಲನಾ ನಾಗರಾಜ್

ಅಂದಹಾಗೆ, 2021ರಲ್ಲಿ ಉದ್ಯಮಿ ನಿತಿನ್ ರಾಜು ಅವರನ್ನು ಪ್ರಣಿತಾ ಮದುವೆಯಾದರು. 2022ರಲ್ಲಿ ಹೆಣ್ಣು ಮಗುವಿಗೆ ನಟಿ ಜನ್ಮ ನೀಡಿದರು. ಆ ಮಗುವಿಗೆ ಆರ್ನಾ ಎಂಬ ಮುದ್ದಾದ ಹೆಸರಿಟ್ಟಿದ್ದಾರೆ. ಈಗ ಮಗಳಿಗೆ 2 ವರ್ಷ ತುಂಬಿದೆ.

Share This Article