ಪತಿ ಹುಟ್ಟುಹಬ್ಬಕ್ಕೆ ಪ್ರಣೀತಾ ಗುಡ್‍ನ್ಯೂಸ್- ಫೋಟೋಶೂಟ್ ಜೊತೆ ಪ್ರೆಗ್ನೆನ್ಸಿ ರಿಪೋರ್ಟ್

Public TV
1 Min Read

ಹುಭಾಷಾ ನಟಿ ಪ್ರಣೀತಾ ಸುಭಾಷ್ 2021ರ ಮೇ 30ರಂದು ಅತ್ಯಾಪ್ತರ ಸಮ್ಮುಖದಲ್ಲಿ ಸಪ್ತಪದಿ ತುಳಿದಿದ್ದರು. ಈ ಸಂತಸದ ವಿಚಾರವನ್ನು ಕೊರೊನಾ ಕಾರಣದಿಂದ ಅಭಿಮಾನಿಗಳಿಗೆ ತಡವಾಗಿ ತಿಳಿಸಿದ್ದರು. ಈಗ ತಾವು ಗರ್ಭಿಣಿಯಾಗುತ್ತಿರುವ ವಿಷಯವನ್ನು ಸೋಶಿಯಲ್ ಮೀಡಿಯಾದಲ್ಲಿ ಅಭಿಮಾನಿಗಳೊಂದಿಗೆ ಶೇರ್ ಮಾಡಿಕೊಂಡಿದ್ದಾರೆ.

ಈ ಕುರಿತು ಪ್ರಣೀತಾ ಇನ್‍ಸ್ಟಾಗ್ರಾಮ್‍ನಲ್ಲಿ, ನನ್ನ ಪತಿಯ 34ನೇ ಹುಟ್ಟುಹಬ್ಬದಂದು ಒಂದು ವಿಶೇಷ ಸುದ್ದಿಯನ್ನು ಹೇಳುತ್ತಿದ್ದೇನೆ. ನಮ್ಮ ಮನೆಗೆ ಏಂಜಲ್ಸ್ ಬರುತ್ತಿದ್ದಾರೆ ಎಂದು ಬರೆದುಕೊಂಡಿದ್ದಾರೆ. ಈ ಪೋಸ್ಟ್‍ನಲ್ಲಿ ಪ್ರಣೀತಾ ಅವರು ತಮ್ಮ ಪತಿ ನಿತಿನ್ ರಾಜ್ ಜೊತೆ ಕುಳಿತುಕೊಂಡು ನಮ್ಮ ಪ್ರೆಗ್ನೆನ್ಸಿ ರಿಪೋರ್ಟ್ ತೋರಿಸಿದ್ದಾರೆ. ಈ ಫೋಟೋದಲ್ಲಿ ಪ್ರಣೀತಾ ಕ್ಯೂಟ್ ಆಗಿ ಕಾಣಿಸುತ್ತಿದ್ದಾರೆ. ಇದನ್ನೂ ಓದಿ: ಆಲಿಯಾ, ರಣಬೀರ್ ಮದುವೆ: 200 ಬೌನ್ಸರ್ ನೇಮಕ, ಹೊಸ ಮನೆ ಸೇರಿ RK ಸ್ಟುಡಿಯೋ ಫುಲ್ ಲಕಲಕ

ಈ ಹಿಂದೆ ಪ್ರಣೀತಾ ತಮ್ಮ ಮದುವೆ ವಿಷಯವನ್ನು ತಡವಾಗಿ ತಿಳಿಸಿದ್ದಕ್ಕೆ ಅಭಿಮಾನಿಗಳು ಬೇಸರ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆ ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆ ಕೇಳಿದ ಈ ನಟಿ, ಕೊರೊನಾ ವೈರಸ್ ಎಂಬ ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಮದುವೆಗೆ ಯಾರನ್ನು ಆಮಂತ್ರಿಸಲು ಸಾಧ್ಯವಾಗಲಿಲ್ಲ. ಇದಕ್ಕಾಗಿ ಕ್ಷಮೆ ಇರಲಿ. ಅಲ್ಲದೆ ಮದುವೆಗೆ ಒಂದು ದಿನ ಮುಂಚೆಯಷ್ಟೇ ದಿನ ನಿಗದಿ ಮಾಡಿರುವುದಾಗಿತ್ತು ಎಂದು ಬರೆದು ಮದುವೆ ಫೋಟೋಗಳನ್ನು ಶೇರ್ ಮಾಡಿಕೊಂಡಿದ್ದರು.

ಈ ಫೋಟೋ ನೋಡಿದ ಅಭಿಮಾನಿಗಳು ಮತ್ತು ಸೆಲೆಬ್ರಿಟಿಗಳು ಅಭಿನಂದನೆಗಳನ್ನು ವ್ಯಕ್ತಪಡಿಸಿದ್ದಾರೆ. ಈ ನಡುವೆ ಕೆಲವು ಅಭಿಮಾನಿಗಳು ಪ್ರಣೀತಾಗೆ ಟಿಪ್ಸ್‌ಗಳನ್ನು ಕೊಡುತ್ತಿದ್ದಾರೆ. ಇದನ್ನೂ ಓದಿ:  ಅಪ್ಪು ಮನೆಗೆ ಭೇಟಿ ಕೊಟ್ಟ ಟಾಲಿವುಡ್ ಕಾಮಿಡಿ ಸ್ಟಾರ್ ಬ್ರಹ್ಮಾನಂದಂ, ಅಲಿ 

Share This Article
Leave a Comment

Leave a Reply

Your email address will not be published. Required fields are marked *