– ಧಾರ್ಮಿಕ ಹಬ್ಬ ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಹೇಗೆ ಸೂಕ್ತ?
ಮೈಸೂರು: ಧರ್ಮಸ್ಥಳ ಪ್ರಕರಣದಲ್ಲಿ (Dharmasthala Case) ತಮಿಳುನಾಡು, ಕೇರಳ, ಹೈದರಾಬಾದ್‌ಗೂ ಲಿಂಕ್ ಇದೆ. ಆದ್ದರಿಂದ ಈ ಕೇಸ್‌ನ್ನು ಎನ್‌ಐಎಗೆ ರಾಜ್ಯ ಸರ್ಕಾರ ವರ್ಗಾಯಿಸಬೇಕು ಎಂದು ಮಾಜಿ ಸಂಸದ ಪ್ರತಾಪ್ ಸಿಂಹ (Prathap Simha) ಆಗ್ರಹಿಸಿದ್ದಾರೆ.
ಧರ್ಮಸ್ಥಳ ಪ್ರಕರಣದ ಬಗ್ಗೆ ಮೈಸೂರಿನಲ್ಲಿ (Mysuru) ಮಾತನಾಡಿದ ಅವರು, ಧರ್ಮಸ್ಥಳ ವಿರುದ್ಧ ಅಪಪ್ರಚಾರವು ವ್ಯವಸ್ಥಿತ ಪಿತೂರಿಯಾಗಿದೆ. ಇವೆಲ್ಲವೂ ಧರ್ಮಸ್ಥಳಕ್ಕೆ ಕಳಂಕವನ್ನು ಅಂಟಿಸುವ ಕೆಲಸವಾಗಿದೆ ಎಂಬುದು ಸ್ಟಷ್ಟವಾಗಿದೆ. ಈ ಪ್ರಕರಣದಲ್ಲಿ ಕೇರಳದಲ್ಲಿರುವ ಕಮ್ಯುನಿಸ್ಟ್ ಪಾರ್ಟಿ, ಎಸ್‌ಡಿಪಿಐ ಪ್ರಕರಣದಲ್ಲಿ ಧ್ವನಿ ಎತ್ತಿವೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಭಗವಾನ್ ಹನುಮಂತ ಮೊದಲ ಬಾಹ್ಯಾಕಾಶ ಯಾನಿ: ವಿದ್ಯಾರ್ಥಿಗಳಿಗೆ ಕೇಂದ್ರ ಮಾಜಿ ಸಚಿವ ಅನುರಾಗ್ ಠಾಕೂರ್ ಮಾಹಿತಿ
ಎಸ್‌ಐಟಿ (SIT) ತನಿಖೆಯಿಂದ ಇದರ ಸತ್ಯ ಬಯಲಾಗಲ್ಲ. ಇದಕ್ಕೆ ರಾಷ್ಟ್ರೀಯ ತನಿಖಾ ದಳದಿಂದ ತನಿಖೆ ಆಗಬೇಕು. ಮಾಸ್ಕ್ ಮ್ಯಾನ್, ಸುಜಾತ ಭಟ್ ಇವರೆಲ್ಲರ ನಿಜ ಬಣ್ಣವು ಸಮಾಜದ ಎದುರು ಬಯಲಾಗಿದೆ. ಈ ಪ್ರಕಣದಲ್ಲಿ ಎಸ್‌ಡಿಪಿಐ ಅವರ ಕೈವಾಡ ಇರುವುದರಿಂದ ಎಸ್‌ಡಿಪಿಐಗೂ ಧರ್ಮಸ್ಥಳಕ್ಕೂ ಏನೂ ಸಂಬಂಧ ಎಂದು ಬಯಲಾಗಬೇಕಿದೆ. ಹೀಗಾಗಿ ರಾಷ್ಟ್ರೀಯ ತನಿಖಾ ದಳಕ್ಕೆ ಈ ಕೇಸ್‌ನ್ನು ಸರ್ಕಾರ ವರ್ಗಾಯಿಸಲಿ ಎಂದು ಆಗ್ರಹಿಸುತ್ತೇನೆ ಎಂದಿದ್ದಾರೆ. ಇದನ್ನೂ ಓದಿ: ಬಾನು ಮುಷ್ತಾಕ್‌ರಿಂದ ದಸರಾ ಉದ್ಘಾಟನೆಗೆ ಶಾಸಕ ಯತ್ನಾಳ್ ಆಕ್ಷೇಪ
ದಸರಾ ಉದ್ಘಾಟನೆಗೆ ಸಾಹಿತಿ ಬಾನು ಮುಷ್ತಾಕ್ (Banu Mushtaq) ನಿಯೋಜನೆ ವಿಚಾರವಾಗಿ, ಅವರ ಬಗ್ಗೆ ನಮಗೆ ಹೆಮ್ಮೆ ಇದೆ. ಮುಸ್ಲಿಮರು ಎನ್ನುವ ಕಾರಣಕ್ಕೆ ನಾನು ಅಪಸ್ವರ ಎತ್ತುತ್ತಿಲ್ಲ. ಬಾನು ಮುಷ್ತಾಕ್ ಅವರ ಸಾಹಿತ್ಯದ ಬಗ್ಗೆಯೂ ನನಗೆ ಗೌರವವಿದೆ. ದಸರಾವು ಜಾತ್ಯಾತೀತತೆಯ ಪ್ರತೀಕ ಅಲ್ಲ. ಇದು ಧಾರ್ಮಿಕ ಆಚರಣೆಯಾಗಿದೆ ಎಂದು ಹೇಳಿದ್ದಾರೆ.
ಬಾನು ಮುಷ್ತಾಕ್‌ಗೆ ತಾಯಿ ಚಾಮುಂಡಿ ಮೇಲೆ ನಂಬಿಕೆ ಇದ್ಯಾ?
ದುರ್ಗಾ ಪೂಜೆ, ನವರಾತ್ರಿ ಉತ್ಸವ ಇರುತ್ತದೆ. ಇದು ಯದುವಂಶ ಆರಂಭಿಸಿದ ಧಾರ್ಮಿಕ ಹಬ್ಬ. ತಾಯಿ ಚಾಮುಂಡಿಗೆ ಪೂಜೆ ಸಲ್ಲಿಸಿ ದಸರಾಗೆ ಚಾಲನೆ ಕೊಡಲಾಗುತ್ತದೆ. ಬಾನು ಮುಷ್ತಾಕ್, ಚಾಮುಂಡಿ ಭಕ್ತೆ ಎಂದು ಹೇಳಿದ್ದಾರಾ? ಭಕ್ತಿ ಭಾವದಿಂದ ಮಾಡುವ ಆಚರಣೆ ದಸರಾ. ತಾಯಿ ಚಾಮುಂಡಿ ಮೇಲೆ ಭಕ್ತಿ ತೋರ್ಪಡಿಸುವ ಹಬ್ಬ ಇದು. ಧಾರ್ಮಿಕ ಸಂಕೇತವಾದ ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಹೇಗೆ ಸೂಕ್ತ ವ್ಯಕ್ತಿ ಆಗುತ್ತಾರೆ ಎಂಬುದು ನನ್ನ ಪ್ರಶ್ನೆ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಮಹಾರಾಜರ ಮೇಲಿನ ದ್ವೇಷವನ್ನು ಸಿದ್ದರಾಮಯ್ಯ ತೀರಿಸಿಕೊಳ್ತಿದ್ದಾರೆ
ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಬಾನು ಮುಷ್ತಾಕ್‌ರನ್ನು ಘೋಷಿಸಿ. ಯಾರ ತಕಾರರು ಇಲ್ಲ. ಬರಗೂರು ರಾಮಚಂದ್ರಪ್ಪ ದಸರಾ ಉದ್ಘಾಟನೆಗೆ ಬಂದು ನಾನು ದೀಪ ಹಚ್ಚಲ್ಲ, ದೇವಸ್ಥಾನಕ್ಕೆ ಹೋಗಲ್ಲ ಅಂದರು. ಇದು ದಸರಾಗೆ ಮಾಡಿದ ಅಪಮಾನ ಅಲ್ವಾ? ಹಿಂದೂ ಧಾರ್ಮಿಕ ನಂಬಿಕೆ ವಿರೋಧಿಗಳನ್ನೇ ಯಾಕೆ ಸಿದ್ದರಾಮಯ್ಯ ಕರೆಯುತ್ತಾರೆ? ಮಹಾರಾಜರ ಮೇಲಿನ ದ್ವೇಷವನ್ನು ಸಿದ್ದರಾಮಯ್ಯ ಬಗೆ ಬಗೆಯಾಗಿ ತೀರಿಸಿ ಕೊಳ್ಳುತ್ತಿದ್ದಾರೆ. ಮಹಾರಾಜರ ಪರಂಪರೆಯನ್ನು ಸಿದ್ದರಾಮಯ್ಯ ಹೀಗೆ ಹಾಳು ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.
ಅಲ್ಲಾ ಬಿಟ್ಟರೆ ಬೇರೆ ಯಾರು ದೇವರಿಲ್ಲ ಎನ್ನುತ್ತದೆ ಇಸ್ಲಾಂ. ಹಾಗಾದರೆ ಬಾನು ಮುಷ್ತಾಕ್ ಹೇಗೆ ತಾಯಿ ಚಾಮುಂಡಿಯನ್ನು ದೇವರು ಎಂದು ಒಪ್ಪಿಕೊಳ್ಳುತ್ತಾರೆ. ಅವರ ಧರ್ಮ, ಅವರ ಮಾತನ್ನು ಒಪ್ಪುತ್ತಾ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಹೇಮಾವತಿ ನದಿಗೆ ಬಿದ್ದ ಕಾರು – ಇಬ್ಬರ ಶವ ಪತ್ತೆ, ಮತ್ತಿಬ್ಬರು ಕೊಚ್ಚಿ ಹೋಗಿರೋ ಶಂಕೆ
ಎಸ್.ಎಲ್.ಭೈರಪ್ಪ ಸರಸ್ವತಿ ಪುತ್ರ, ಅವರನ್ನು ಯಾರಿಗೂ ಹೋಲಿಕೆ ಮಾಡಲು ಸಾಧ್ಯವಿಲ್ಲ. ಕಾಂತಾರದ ರಿಷಬ್ ಶೆಟ್ಟಿ ಅವರಿಗೆ ರಾಷ್ಟ್ರೀಯ ಪ್ರಶಸ್ತಿ ಲಭಿಸಿದೆ. ಅವರನ್ನು ದಸರಾ ಉದ್ಘಾಟನೆಗೆ ಕರೆಯುತ್ತೀರಾ? ಪ್ರಶಸ್ತಿ ಬಂದವರನ್ನೆಲ್ಲಾ ದಸರಾ ಉದ್ಘಾಟನೆಗೆ ಕರೆಯಲು ಆಗುತ್ತಾ? ಕಾಂತಾರ ಹಿಂದೂ ಧರ್ಮಕ್ಕೆ ಪೂರಕವಾದ ಸಿನಿಮಾ. ಆ ಸಿನಿಮಾದ ನಿರ್ದೇಶಕ, ನಟ ರಿಷಭ್ ಶೆಟ್ಟಿ ಅವರನ್ನು ಕರೆಯುತ್ತೀರಾ ಎಂದು ಪ್ರಶ್ನಿಸಿದ್ದಾರೆ.
ವೇಶ್ಯಾವಾಟಿಕೆಯನ್ನು ಪ್ರಿಯಾಂಕ ಖರ್ಗೆ ಕಾನೂನು ಬದ್ಧ ಮಾಡಲಿ:
ಆನ್‌ಲೈನ್ ಗೇಮ್‌ನ್ನು ಸಂಪೂರ್ಣ ಬ್ಯಾನ್ ಮಾಡುವುದರಿಂದ ರಾಜ್ಯದ ಆದಾಯಕ್ಕೆ ನಷ್ಟ ಎಂಬ ಪ್ರಿಯಾಂಕ ಖರ್ಗೆ ಹೇಳಿಕೆ ಬಗ್ಗೆ ಮಾತನಾಡಿದ ಅವರು, ಯಾರ ಮಕ್ಕಳ ಹಾಳಾದರೇನೂ ಅವರಿಗೇನು? ಅವರಿಗೆ ಆದಾಯ ಬೇಕು ಅಷ್ಟೆ. ಡ್ರೀಮ್ ಇಲೆವನ್ ರೂಪದ ಎಲ್ಲಾ ಗೇಮ್ ಬ್ಯಾನ್ ಮಾಡಬೇಕು. ಪ್ರಿಯಾಂಕ ಖರ್ಗೆ ಬಾಯಲ್ಲಿ ದಲಿತ ಎಂದು ಹೇಳುತ್ತ ಬೆಂಗಳೂರಿನ ಸದಾಶಿವ ನಗರದಲ್ಲಿ ಐಷಾರಾಮಿ ಜೀವನ ನಡೆಸುತ್ತಾರೆ. ಅವರಿಗೆ ಬಡ ಕುಟುಂಬದ ಸ್ಥಿತಿ ಏನೂ ಗೊತ್ತು? ಆದಾಯ ಹೆಚ್ಚು ಬೇಕಾದರೆ ವೇಶ್ಯಾವಾಟಿಕೆಯನ್ನು ಪ್ರಿಯಾಂಕ ಖರ್ಗೆ ಕಾನೂನು ಬದ್ಧ ಮಾಡಲಿ ಬಿಡಿ. ಅದರಿಂದಲೂ ಹೆಚ್ಚು ಆದಾಯ ಬರುತ್ತದೆ ಎಂದು ತಿರುಗೇಟು ನೀಡಿದ್ದಾರೆ.