ವಿಚಾರ ನಪುಂಸಕರು ಪಠ್ಯ ಪರಿಷ್ಕರಣಾ ವಿವಾದ ಸೃಷ್ಟಿಸಿ ಮೈಕಾಸುರರಾಗಿದ್ದಾರೆ: ಪ್ರತಾಪ್ ಸಿಂಹ

Public TV
3 Min Read

ಉಡುಪಿ: ಅನಗತ್ಯ ತಕರಾರು ಎತ್ತುವವರು ವಿಚಾರ ನಪುಂಸಕರು. ಇವರಲ್ಲಿ ವಿಚಾರ ಇಲ್ಲ ಬರೀ ಉಗುಳು ಮಾತ್ರ. ವಿಚಾರ ನಪುಂಸಕತೆ ಇರುವುದರಿಂದ ಬರವಣಿಗೆ ಬಿಟ್ಟು ಎಷ್ಟೋ ವರ್ಷಗಳಾದ್ದು, ಇದೀಗ ಇವರು ಮೈಕ್ ಮುಂದೆ ನಿಲ್ಲುವ ಮೈಕಾಸುರರಾಗಿದ್ದಾರೆ ಎಂದು ಪಠ್ಯಪುಸ್ತಕ ಪರಿಷ್ಕರಣೆ ಕುರಿತಾಗಿ ಎದ್ದಿರುವ ಚರ್ಚೆ ಕುರಿತಾಗಿ ಕೊಡಗು ಮೈಸೂರು ಸಂಸದ ಪ್ರತಾಪ್ ಸಿಂಹ ವಾಗ್ದಾಳಿ ನಡೆಸಿದ್ದಾರೆ.

TEXTBOOK

ಉಡುಪಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಪಠ್ಯಪುಸ್ತಕ ಪರಿಷ್ಕರಣೆಯ ಬಗ್ಗೆ ಶಿಕ್ಷಣ ಖಾತೆ ಸಚಿವ ಬಿ.ಸಿ.ನಾಗೇಶ್ ಪಠ್ಯ ಪುಸ್ತಕ ಪರಿಷ್ಕರಣೆ ಸಮಿತಿಯ ಅಧ್ಯಕ್ಷ ರೋಹಿತ್ ಚಕ್ರತೀರ್ಥ ಅವರೊಂದಿಗೆ ಬಹಿರಂಗ ಚರ್ಚೆಗೆ ಆಹ್ವಾನ ನೀಡಿದ್ದಾರೆ. ಚರ್ಚೆಗೆ ಬನ್ನಿ ಚರ್ಚೆಯಿಂದ ಯಾಕೆ ಪಲಾಯನ ಮಾಡಿತ್ತಿದ್ದೀರಿ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ದೇಶಕ್ಕೆ ಕನ್ನಡಿಗರ ಕೊಡುಗೆ ಅಪಾರ: ಬೊಮ್ಮಾಯಿ

ಸಮಾಜ ಮತ್ತು ಕನ್ನಡ ಪಠ್ಯಪುಸ್ತಕ ಪರಿಷ್ಕರಣೆ ಮಾಡಿದ್ದೇವೆ. ಡಿಕೆಶಿ, ಸಿದ್ದರಾಮಯ್ಯ ಇಲ್ಲದ ಸಲ್ಲದ ಊಹಾಪೋಹ ಸೃಷ್ಟಿ ಮಾಡಿದ್ದಾರೆ. ಬರಗೂರು ರಾಮಚಂದ್ರಪ್ಪ, ದೇವನೂರು ಮಹಾದೇವ ಊಹಾಪೋಹ ಸೃಷ್ಟಿ ಮಾಡಿ ಸುದ್ದಿ ಹಬ್ಬಿಸಿದ್ದಾರೆ. ಅನುಮಾನ ಸೃಷ್ಟಿ ಮಾಡುವುದು, ಊಹಾಪೋಹ ಹಬ್ಬಿಸುವುದು ಇವರ ಉದ್ದೇಶ. ವಿಚಾರ ನಪುಂಸಕತೆ ಇಲ್ಲದಿದ್ದರೆ ಬಹಿರಂಗವಾಗಿ ಚರ್ಚೆಗೆ ಬನ್ನಿ. ಭಗತ್ ಸಿಂಗ್ ಪಠ್ಯ ಕೈಬಿಟ್ಟಿದ್ದಕ್ಕೆ ಸಾಕ್ಷ ತೋರಿಸಿ. ನಾರಾಯಣ ಗುರು ಪಠ್ಯವನ್ನು ಸಮಾಜದಿಂದ ಕನ್ನಡ ಪಾಠಕ್ಕೆ ವರ್ಗಾಯಿಸಲಾಗಿದೆ. ಏಳನೇ ತರಗತಿಯ ಪಠ್ಯದಲ್ಲೂ ನಾರಾಯಣ ಗುರುಗಳ ಪಾಠ ಇದೆ ಎಂದರು.

ದೇವನೂರು ಮಹಾದೇವ ವಿರುದ್ಧ ಗುಡುಗು
ದೇವನೂರು ಮಹಾದೇವ 2014, 2019ರಲ್ಲಿ ಮೈಸೂರಿನಲ್ಲಿ ಕಾಂಗ್ರೆಸ್ ಪರ ನನ್ನ ವಿರುದ್ಧ ಚುನಾವಣಾ ಪ್ರಚಾರ ಭಾಷಣ ಮಾಡಿದ್ದರು. ಆ ಭಾಗದಲ್ಲಿ ಜನ ಏನು ತೀರ್ಪು ಕೊಟ್ಟಿದ್ದಾರೆ ಎಂದು ಗೊತ್ತಿದೆ. ದೇವನೂರು ಮಹಾದೇವ ಅವರ ಬಗ್ಗೆ ವೈಯಕ್ತಿಕವಾಗಿ ಅಪಾರ ಗೌರವವಿದೆ. ದೇವನೂರು ಕುಸುಮಬಾಲೆ ಎಂಬ ಅದ್ಭುತ ಕೃತಿಯನ್ನು ಬರೆದವರು. ಕಾಂಗ್ರೆಸ್ ಪ್ರಚಾರ ಊಹಾಪೋಹಗಳನ್ನು ಬಿಟ್ಟು ಹಿಂದಿನ ಮಹಾದೇವರಾಗಿ, ಮತ್ತೆ ಪೆನ್ನನ್ನು ಕೈಗೆತ್ತಿಕೊಂಡು ಒಂದು ಅದ್ಭುತ ಕೃತಿಯನ್ನು ರಚನೆ ಮಾಡಿ. ನಾವು ಕೂಡ ದೇವನೂರು ಮಹಾದೇವರನ್ನು ಇಷ್ಟಪಡುತ್ತೇವೆ ಗೌರವಿಸುತ್ತೇವೆ. ಪೆನ್ನಿಗೆ ನಿವೃತ್ತಿ ಕೊಟ್ಟು ನೀವು ಮೈಕ್ ಮುಂದೆ ನಿಂತಿದ್ದೀರಿ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಮಾಟಕ್ಕೆ ಒಳಗಾದ ಮಹಿಳೆಗೆ ಚಾಟಿಯಿಂದ ಹೊಡೆದ ಪೂಜಾರಿ

ನಾಡಗೀತೆಗೆ ರೋಹಿತ್ ಚಕ್ರತೀರ್ಥ ಅಪಮಾನ ಮಾಡಿದ್ದಾರೆ ಎಂಬ ಆರೋಪವನ್ನು ನಾನು ಕೂಡ ಗಮನಿಸಿದ್ದೇನೆ. ವಾಟ್ಸಪ್‍ನಲ್ಲಿ ಬಂದ ಸಂದೇಶ ಎಂದು ಫೇಸ್‍ಬುಕ್‍ನಲ್ಲಿ ಹಾಕಿದ್ದರು. ಅದನ್ನು ಯಾರೋ ವ್ಯಂಗ್ಯ ಮಾಡಿದ್ದರು, ಅದು ತಪ್ಪು. ಅದನ್ನು ರೋಹಿತ್ ಚಕ್ರತೀರ್ಥ ರಚನೆ ಮಾಡಿದ್ದಲ್ಲ. ಸಿದ್ದರಾಮಯ್ಯ ಸಿಎಂ ಆಗಿರುವಾಗ ಈ ಕುರಿತು ಕೇಸುದಾಖಲಾಗಿದೆ ಬಿ ರಿಪೋರ್ಟ್ ಆಗಿದೆ, ಅನಗತ್ಯವಾಗಿ ಒಬ್ಬ ವ್ಯಕ್ತಿಯನ್ನು ಟಾರ್ಗೆಟ್ ಮಾಡಲಾಗುತ್ತಿದೆ. ಕುವೆಂಪು ಮೈಸೂರಿನಲ್ಲಿ ನೆಲೆ ಇದ್ದಂತಹವರು, ನಾನು ಕುವೆಂಪು ಅಭಿಮಾನಿ ಅವರ ಮೇಲೆ ಅಪಾರ ಗೌರವವಿದೆ. ರೋಹಿತ್ ಚಕ್ರತೀರ್ಥ ಅವರನ್ನು ತುಳಿಯುವ, ತೇಜೋವಧೆ ಮಾಡುವ ಪ್ರಯತ್ನ ನಡೆಯುತ್ತಿದೆ. ವೈಯಕ್ತಿಕವಾಗಿ ಟಾರ್ಗೆಟ್ ಮಾಡುವುದು ಸರಿಯಲ್ಲ. ಬಹಿರಂಗ ಚರ್ಚೆಗೆ ಅವಕಾಶ ನೀಡಿದರೂ ಅವರು ಬರುತ್ತಿಲ್ಲ ಎಂದರು.

ಹಿಜಬ್ ವಿವಾದ ಸಾಮಾನ್ಯ
ಮಂಗಳೂರಿನ ಯೂನಿವರ್ಸಿಟಿ ಕಾಲೇಜ್‍ನಲ್ಲಿ ಹಿಜಬ್ ವಿವಾದಕ್ಕೆ ಕುರಿತಂತೆ ಪ್ರತಿಕ್ರಿಯೆ ನೀಡಿದ ಅವರು, ಜಗತ್ತಿನ ಎಲ್ಲಾ ಶಾಲಾ ಕಾಲೇಜುಗಳಲ್ಲಿ ಸಮವಸ್ತ್ರ ಇದೆ. ಸಮವಸ್ತ್ರ ಸಂಹಿತೆ ಜಾರಿ ಆಗಬೇಕು ಎಂಬ ಶಾಸಕ ರಘುಪತಿ ಭಟ್ ಹೋರಾಟ ಸರಿ ಇದೆ. ಸಮೂಹ ಸಂಹಿತೆ ಪಾಲಿಸಿ ಎಂದು ಕೋರ್ಟ್ ಕಟ್ಟುನಿಟ್ಟಿನ ಆದೇಶ ನೀಡಿದೆ. ಕೋರ್ಟ್ ತೀರ್ಪಿಗೆ ಗೌರವ ಕೊಡಿ, ಕೋರ್ಟ್ ತೀರ್ಪನ್ನು ಗೌರವಿಸುವ ಮನೋಭಾವನೆ ಬೆಳೆಸಿಕೊಳ್ಳಿ. ತಕರಾರು ಎತ್ತುವ ಕೋರ್ಟ್ ತೀರ್ಪು ಏನು ಎಂಬುದನ್ನು ತಿಳಿದುಕೊಳ್ಳಿ, ದೇಶ ಸಂವಿಧಾನಕ್ಕಿಂತ ನಮ್ಮ ಧರ್ಮವೇ ದೊಡ್ಡದು ಎಂದರೆ ಸಮಸ್ಯೆ ಇರುತ್ತದೆ ಎಂದು ಅಭಿಪ್ರಾಯಪಟ್ಟರು.

Share This Article
Leave a Comment

Leave a Reply

Your email address will not be published. Required fields are marked *