ಲವ್ಲಿ 20 ಇಯರ್ಸ್, ನಿಮ್ಮ ಪ್ರೀತಿ ಅಭಿಮಾನ ಸದಾ ಇರಲಿ: ಪ್ರೇಮ್

Public TV
2 Min Read

ಬೆಂಗಳೂರು: ಸ್ಯಾಂಡಲ್‍ವುಡ್ ನಟ ಲವ್ಲಿ ಸ್ಟಾರ್ ಪ್ರೇಮ್ ಅವರು ಚಂದನವನಕ್ಕೆ ಪಾದಾರ್ಪಣೆ ಮಾಡಿ ಇಂದಿಗೆ 20 ವರ್ಷ ಕಳೆದಿದೆ. ಇದೇ ಖುಷಿಯಲ್ಲಿರುವ ಪ್ರೇಮ್ ಅಭಿಮಾನಿಗಳಿಗೆ ಸೋಶಿಯಲ್ ಮೀಡಿಯಾದಲ್ಲಿ ಧನ್ಯವಾದ ತಿಳಿಸಿದ್ದಾರೆ.

2004ರಲ್ಲಿ ಪ್ರಾಣ ಸಿನಿಮಾದ ಮೂಲಕ ಸ್ಯಾಂಡಲ್‍ವುಡ್‍ಗೆ ನಾಯಕ ನಟರಾಗಿ ಎಂಟ್ರಿ ಕೊಟ್ಟ ಪ್ರೇಮ್ ಅವರು, ನೆನಪಿರಲಿ ಸಿನಿಮಾದ ಮೂಲಕ ದೊಡ್ಡ ಬ್ರೇಕ್ ಪಡೆದುಕೊಂಡರು. ನಂತರ ದಿನಾಕರ್ ತೂಗ್‍ದೀಪ್ ಆ್ಯಕ್ಷನ್ ಕಟ್ ಹೇಳಿದ್ದ ಜೊತೆ ಜೊತೆಯಲಿ ಸಿನಿಮಾದಲ್ಲಿ ಸ್ಯಾಂಡಲ್‍ವುಡ್ ಕ್ವೀನ್ ರಮ್ಯಾ ಅವರೊಂದಿಗೆ ಅಭಿನಯಿಸಿದರು. ಈ ಸಿನಿಮಾ ಸೂಪರ್ ಡೂಪರ್ ಹಿಟ್ ಕೂಡ ಆಗಿತ್ತು. ತದನಂತರ ಪಲ್ಲಕ್ಕಿ, ಗುಣವಂತ, ಹೊಂಗನಸು, ಗೌತಮ್ ಹೀಗೆ ಸುಮಾರು 26 ಸಿನಿಮಾಗಳಲ್ಲಿ ಪ್ರೇಮ್ ನಟಿಸಿದ್ದು, ಇಂದಿಗೆ 20 ಚಂದನವನದಲ್ಲಿ 20 ವರ್ಷಗಳ ಸಿನಿ ಜರ್ನಿಯನ್ನು ಕಂಪ್ಲೀಟ್ ಮಾಡಿದ್ದಾರೆ. ಇದನ್ನೂ ಓದಿ: ಬಾಲಿವುಡ್‍ನಲ್ಲಿ ದಕ್ಷಿಣ ಭಾರತೀಯರು ಹಿಂದಿಯನ್ನು ಅಸಾಧಾರಣವಾಗಿ ಮಾತಾಡ್ತಿದ್ದಾರೆ: ಪ್ರಿಯಾಮಣಿ

 

View this post on Instagram

 

A post shared by Prem Nenapirali (@premnenapirali)

ಸದ್ಯ ಈ ವಿಶೇಷ ದಿನದಂದು ಪ್ರೇಮ್ ತಮ್ಮ ಇನ್‍ಸ್ಟಾಗ್ರಾಮ್‍ನಲ್ಲಿ ತಮ್ಮ ಫೋಟೋವೊಂದನ್ನು ಶೇರ್ ಮಾಡಿಕೊಂಡಿದ್ದಾರೆ. ಈ ಫೋಟೋದಲ್ಲಿ ಪ್ರೇಮ್ ಹಿಂದೆಗಡೆ ಲವ್ಲಿ 20 ಇಯರ್ಸ್ ಅಂತ ಇದ್ದು, 20 ವರುಷದ ನನ್ನ ಸಿನಿಮಾ ವೃತ್ತಿ ಜೀವನದಲ್ಲಿ ಜೊತೆಯಾಗಿ ನಿಂತು ನನ್ನನ್ನು ಸಲಹಿ ಬೆಳೆಸಿದ ಚಿತ್ರರಂಗದ ಕುಟುಂಬಕ್ಕೆ, ಅಭಿಮಾನಿಗಳಿಗೆ, ಮಾಧ್ಯಮಕ್ಕೆ, ಸ್ನೇಹಿತರಿಗೆ ಹಾಗೂ ನನ್ನ ಕುಟುಂಬಕ್ಕೆ ಮತ್ತು ಕನ್ನಡ ಕಲಾಭಿಮಾನಿಗಳಿಗೆ ನನ್ನ ಹೃತ್ಪೂರ್ವಕ ವಂದನೆಗಳು. ನಿಮ್ಮ ಪ್ರೀತಿ ಅಭಿಮಾನ ಆಶೀರ್ವಾದ ಸದಾ ಹೀಗೆ ಇರಲಿ. ಸದಾ ನೆನಪಿರಲಿ ಪ್ರೇಮ್ ಎಂದು ಫೋಟೋ ಕೆಳಗೆ ಬರೆಯಲಾಗಿದೆ. ಇನ್ನೂ ಕ್ಯಾಪ್ಷನ್‍ನಲ್ಲಿ ನಿಮ್ಮ ಪ್ರೀತಿ ಆಶೀರ್ವಾದ ಸದಾ ಹೀಗೆ ಇರಲಿ ಎಂದು ಬರೆದುಕೊಳ್ಳುವುದರ ಜೊತೆಗೆ ಹಾರ್ಟ್ ಎಮೋಜಿ ಹಾಕಿಕೊಂಡಿದ್ದಾರೆ. ಇದನ್ನೂ ಓದಿ: ಕರಿಷ್ಮಾ ಫಿಟ್ನೆಸ್ ಹೊಗಳಿದ ಮಲೈಕಾ ಅರೋರಾ

Prem

ಇತ್ತೀಚೆಗಷ್ಟೇ ಬಿಡುಗಡೆಗೊಂಡಿದ್ದ ಪ್ರೇಮ್ ಅಭಿನಯದ ಪ್ರೇಮಂ ಪೂಜ್ಯಂ ಸಿನಿಮಾ ಸ್ಯಾಂಡಲ್‍ವುಡ್‍ನಲ್ಲಿ ಭಾರೀ ಸದ್ದು ಮಾಡಿತ್ತು. ಇದನ್ನೂ ಓದಿ: ಸಂಪೂರ್ಣವಾಗಿ ನೋವು ಹೇಳಿಕೊಳ್ಳೋ ಸ್ಥಿತಿಯಲ್ಲಿಲ್ಲ, ಅದರೊಂದಿಗೆ ಬದುಕ್ತಿದ್ದೇವೆ: ಅಪ್ಪು ನೆನೆದ ಶಿವಣ್ಣ

Share This Article
Leave a Comment

Leave a Reply

Your email address will not be published. Required fields are marked *