– ಬೆಂಗ್ಳೂರಲ್ಲಿ ಸಿಎಂರಿಂದ ಧ್ವಜಾರೋಹಣ
ಬೆಂಗಳೂರು: ಭೀಕರ ಪ್ರವಾಹದ ಸಂಕಷ್ಟಗಳ ಮಧ್ಯೆ ರಾಜ್ಯದಲ್ಲೂ 73ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಗೆ ಸಿದ್ಧತೆಗಳು ನಡೆದಿವೆ.
ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಧ್ವಜಾರೋಹಣ ನೆರವೇರಿಸಲಿದ್ದಾರೆ. ಸಚಿವ ಸಂಪುಟ ರಚನೆಯಾಗದ ಕಾರಣ ಜಿಲ್ಲಾ ಕೇಂದ್ರಗಳಲ್ಲಿ ಜಿಲ್ಲಾಧಿಕಾರಿಗಳು ಧ್ವಜಾರೋಹಣ ನೆರವೇರಿಸಲಿದ್ದಾರೆ.
ಬೆಂಗಳೂರಿನ ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಸಕಲ ಸಿದ್ಧತೆ ಕೈಗೊಳ್ಳಲಾಗಿದ್ದು, ಬೃಹತ್ ವೇದಿಕೆ ನಿರ್ಮಿಸಲಾಗಿದೆ. ಬೆಳಗ್ಗೆ 8.58ಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆಗಮಿಸಿ 9 ಗಂಟೆಗೆ ಧ್ವಜಾರೋಹಣ ನೆರವೇರಿಸುತ್ತಾರೆ. ಈ ವೇಳೆ ವಾಯುಪಡೆಯ ಹೆಲಿಕಾಪ್ಟರ್‍ನಲ್ಲಿ ಪುಷ್ಪವೃಷ್ಟಿ ಮಾಡಲಾಗುತ್ತದೆ. ಗೌರವ ಸ್ವೀಕಾರದ ಬಳಿಕ ಸಿಎಂ ಭಾಷಣ ಮಾಡಲಿದ್ದಾರೆ. ನಂತರ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಸುಮಾರು 1250 ಮಕ್ಕಳು ಭಾಗಿಯಾಗುತ್ತಾರೆ.
ಪರೇಡ್‍ನಲ್ಲಿ ಗೋವಾ ಪೊಲೀಸ್, ಬಿಎಸ್‍ಎಟಫ್, ಸಿಆರ್ ಪಿಎಫ್, ಕೆಸ್ ಆರ್ ಪಿ ಭಾಗಿಯಾಗುತ್ತದೆ. ಭದ್ರತೆಗಾಗಿ 1906 ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಮೈದಾನದ ಸುತ್ತ 50 ಸಿಸಿ ಕ್ಯಾಮೆರಾ ಅಳವಡಿಸಲಾಗಿದೆ. 4 ಬ್ಯಾಗೇಜ್ ಸ್ಕ್ಯಾನರ್, ವ್ಯವಸ್ಥಿತ ಸಂಚಾರ ನಿಯಂತ್ರಣ ವ್ಯವಸ್ಥೆ ಮಾಡಲಾಗಿದೆ.