ಬಿಕ್ಲು ಶಿವ ಕೊಲೆ ಕೇಸ್; ಆರೋಪಿ ಜಗ್ಗನ ಮೇಲೆ ಲುಕ್‌ಔಟ್ ನೋಟಿಸ್‌ಗೆ ಸಿದ್ಧತೆ

Public TV
2 Min Read

ಬೆಂಗಳೂರು: ರೌಡಿಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವನ (Biklu shiva) ಕೊಲೆ ಪ್ರಕರಣದ ಎ1 ಆರೋಪಿಯಾಗಿರುವ ಜಗದೀಶ್ ಅಲಿಯಾಸ್ ಜಗ್ಗ ಪತ್ತೆಗಾಗಿ ಪೊಲೀಸರು ಲುಕ್‌ಔಟ್ ನೋಟಿಸ್ (Look Out Circular) ಜಾರಿ ಮಾಡಲು ಸಿದ್ಧತೆ ನಡೆಸಿದ್ದಾರೆ.

ಬಿಕ್ಲು ಶಿವ ಕೊಲೆಯಾಗಿ ಇಂದಿಗೆ ಹತ್ತು ದಿನ ಕಳೆದಿದೆ. ಕೊಲೆ ಪ್ರಕರಣದಲ್ಲಿ ಇಲ್ಲಿತನಕ ಹನ್ನೊಂದು ಜನ ಆರೋಪಿಗಳ ಬಂಧನವಾಗಿದೆ. ಆದರೆ ಎ1 ಆರೋಪಿಯಾಗಿರುವ ಜಗ್ಗ ಮಾತ್ರ ಪೊಲೀಸರ ಕೈಗೆ ಸಿಕ್ಕಿಲ್ಲ. ಇದನ್ನೂ ಓದಿ: ಮಂಡ್ಯದಲ್ಲಿ ಮೊಟ್ಟೆ ವಿವಾದ – ಮೊಟ್ಟೆ ಕೊಟ್ರೆ ಮಕ್ಕಳನ್ನ ಶಾಲೆಗೆ ಕಳ್ಸಲ್ಲ ಎಂದ ಪೋಷಕರು

ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ, ಕೇರಳ ಸೇರಿದಂತೆ ಹಲವು ಕಡೆಗಳಲ್ಲಿ ಜಗದೀಶ್ ಅಲಿಯಾಸ್ ಜಗ್ಗನ ಹುಡುಕಾಟಕ್ಕೆ ಪೊಲೀಸರು ತೀವ್ರ ಶೋಧ ನಡೆಸಿದ್ದಾರೆ. ಇದೇ ವೇಳೆ ಆರೋಪಿ ಜಗ್ಗ ವಿದೇಶಕ್ಕೆ ಎಸ್ಕೇಪ್ ಆಗುವ ಬಗ್ಗೆ ಮಾಹಿತಿಗಳು ಸಿಕ್ಕ ಹಿನ್ನೆಲೆಯಲ್ಲಿ ಬುಧವಾರ ಆತನ ಪತ್ತೆಗಾಗಿ ಲುಕ್‌ಔಟ್ ನೋಟಿಸ್ ಜಾರಿ ಮಾಡಲು ತೀರ್ಮಾನಿಸಿದ್ದಾರೆ. ಇದನ್ನೂ ಓದಿ: ಇಂದು, ನಾಳೆ ಹಾಲು ಮಾರಾಟ ಬಂದ್ – ಟೀ, ಕಾಫಿ ಇಲ್ಲ.. ಓನ್ಲಿ ಲೆಮನ್, ಬ್ಲ್ಯಾಕ್ ಟೀ ಸಿಗುತ್ತೆ ಅಂತ ಬೋರ್ಡ್

ಏನಿದು ಲುಕ್ ಔಟ್ ನೋಟಿಸ್?
ಕ್ರಿಮಿನಲ್ ಪ್ರಕರಣಗಳಲ್ಲಿ ವಿದೇಶಗಳಲ್ಲಿ ತಲೆಮರೆಸಿಕೊಂಡಿರುವ ಆರೋಪಿಗಳಿಗಾಗಿ ಜಾರಿಗೊಳಿಸಲಾಗುವ ವಿಶೇಷವಾದ ನೋಟಿಸ್ ಇದಾಗಿದೆ. ಇದನ್ನು ಲುಕ್ ಔಟ್ ಸರ್ಕ್ಯೂಲರ್ (LOC) ಎಂದೂ ಕರೆಯಲಾಗುತ್ತದೆ. ಸಾಮಾನ್ಯವಾಗಿ ಇದನ್ನು ವಿದೇಶಾಂಗ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುವ ಬ್ಯೂರೋ ಆಫ್ ಇಮಿಗ್ರೇಷನ್ (BOI) ಜಾರಿಗೊಳಿಸುತ್ತದೆ. ಯಾವುದೇ ರಾಜ್ಯಗಳಲ್ಲಿ ಸಂಭವಿಸಿದ ಕ್ರಿಮಿನಲ್ ಪ್ರಕರಣಗಳಿಗೆ ಸಂಬಂಧಿಸಿದಂತೆ, ವಿದೇಶಗಳಲ್ಲಿ ತಲೆಮರೆಸಿಕೊಂಡಿರುವ ಅಪರಾಧಿಗಳನ್ನು ಪತ್ತೆ ಹಚ್ಚಲು, ಆಯಾ ರಾಜ್ಯ ಸರ್ಕಾರಗಳ ಅಧೀನ ಕಾರ್ಯದರ್ಶಿ ಹಾಗೂ ಅದಕ್ಕೆ ತತ್ಸಮಾನ ಹುದ್ದೆಗಳಲ್ಲಿರುವ ಅಧಿಕಾರಿಗಳು ಹಾಗೂ ಅದಕ್ಕಿಂತ ಮೇಲ್ಪಟ್ಟ ಅಧಿಕಾರಿಗಳು ಮನವಿ ಸಲ್ಲಿಸಿದ್ರೆ ಮಾತ್ರ ಇಂಥ ನೋಟಿಸ್ ಜಾರಿಗೊಳಿಸುತ್ತದೆ. ಇದನ್ನೂ ಓದಿ: ಒಂದೇ ಬೈಕ್‌ನಲ್ಲಿ ನಾಲ್ವರು ಪ್ರಯಾಣ – ಓವರ್ ಸ್ಪೀಡ್‌ನಿಂದ ಡಿವೈಡರ್‌ಗೆ ಡಿಕ್ಕಿ; ಓರ್ವ ಸಾವು

ಇದಲ್ಲದೆ, ರಾಜ್ಯ ಸರ್ಕಾರಗಳು ರಚನೆ ಮಾಡುವ ವಿಶೇಷ ತನಿಖಾ ತಂಡಗಳಿಗೂ (SIT) ಇಂಥ ಲುಕ್ ಔಟ್ ನೋಟಿಸ್ ಜಾರಿಗೊಳಿಸಲು ಅವಕಾಶವಿದೆ. ಇದು ಜಾರಿಯಾಗುತ್ತಲೇ ಆ ಆರೋಪಿಯ ಬಗೆಗಿನ ಎಲ್ಲಾ ವಿವರಗಳು, ಯಾವುದೇ ದೇಶವನ್ನು ಪ್ರವೇಶಿಸಲು ಇರುವ ಮಾರ್ಗಗಳಾದ ವಿಮಾನ ನಿಲ್ದಾಣಗಳು, ಬಂದರುಗಳು, ಅಂತಾರಾಷ್ಟ್ರೀಯ ಹೆದ್ದಾರಿಗಳ ಚೆಕ್ ಪಾಯಿಂಟ್ ಗಳನ್ನು ತಲುಪುತ್ತವೆ. ವಿದೇಶದಲ್ಲಿರುವ ಆರೋಪಿಯು ತನ್ನ ವೀಸಾ ಅವಧಿ ಮುಗಿದ ನಂತರ ಇಮಿಗ್ರೇಷನ್ ವಿಭಾಗವನ್ನು ಸಂಪರ್ಕಿಸಲೇಬೇಕು. ಆಗ ಆತನನ್ನು ಕೂಡಲೇ ವಶಕ್ಕೆ ಪಡೆಯಲಾಗುತ್ತದೆ.

Share This Article