ನ.1ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಪಾಲಿಕೆಗಳ ಚುನಾವಣೆಗೆ ಪೂರ್ವಸಿದ್ಧತೆ: ಡಿಕೆಶಿ

Public TV
1 Min Read

ಬೆಂಗಳೂರು: ನ.1ರೊಳಗಾಗಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಐದು ಪಾಲಿಕೆಗಳ ಚುನಾವಣೆಗೆ ಪೂರ್ವಸಿದ್ಧತೆ ಮಾಡಲಾಗುವುದು. ನೋಂದಣಿ ನಿಯಮಗಳನ್ನು ಯಾವ ರೀತಿ ರೂಪಿಸಬೇಕು ಎಂಬ ಬಗ್ಗೆ ಚುನಾವಣಾ ಆಯೋಗದ ಅಭಿಪ್ರಾಯ ಕೇಳಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (DK Shivakumar) ಹೇಳಿದರು.

ಕೆಪಿಸಿಸಿ ಕಚೇರಿಯಲ್ಲಿ ಪಕ್ಷದ ಮುಖಂಡರ ಸಭೆಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಚುನಾವಣೆಯ ಮತದಾನದ ಹಕ್ಕನ್ನು ಹೇಗೆ ಕಾಪಾಡಿಕೊಳ್ಳಬೇಕು ಎಂದು ಪಕ್ಷದ ಮುಖಂಡರು, ಕಾರ್ಯಕರ್ತರಿಗೆ ಮಾರ್ಗದರ್ಶನ ನೀಡಿದ್ದೇವೆ. ಬ್ಲಾಕ್ ಅಧ್ಯಕ್ಷರು ಹಾಗೂ ಶಾಸಕರನ್ನು ಕರೆದು ಮತ್ತೊಂದು ಸುತ್ತಿನ ಸಭೆ ನಡೆಸಲಾಗುವುದು ಎಂದರು.ಇದನ್ನೂ ಓದಿ: ದೆಹಲಿಯಲ್ಲಿ ಕರ್ತವ್ಯ ಭವನ ಉದ್ಘಾಟಿಸಿದ ಮೋದಿ – ವಿಶೇಷತೆಗಳೇನು?

ಸಿಎಂ ಇಂಡಿಯಾ ಒಕ್ಕೂಟದ ಸಭೆಗೆ ತೆರಳುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಇಂಡಿಯಾ ಒಕ್ಕೂಟದ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳಿಗೆ ಆಹ್ವಾನ ಬಂದಿದೆ. ನಾನು ಇಲ್ಲಿ ಪ್ರತಿಭಟನೆ, ಸಭೆ ಸಿದ್ಧತೆಯ ಉಸ್ತುವಾರಿ ನೋಡಬೇಕು. ಅದಕ್ಕಾಗಿ ಇಲ್ಲೇ ಇರುತ್ತೇನೆ ಎಂದು ಹೇಳಿದರು.

ಪ್ರತಿಯೊಂದು ಸಂದರ್ಭದಲ್ಲಿ ಬೆಂಗಳೂರು ಮತ್ತು ಕರ್ನಾಟಕ ಈ ದೇಶಕ್ಕೆ ಪ್ರಬಲ ಸಂದೇಶವನ್ನು ನೀಡಿವೆ. ಇಂಡಿಯಾ ಒಕ್ಕೂಟ ಸಹ ಜನ್ಮ ತಳೆದಿದ್ದು ಬೆಂಗಳೂರಿನಲ್ಲಿ. ಕೋರ್ಟ್ ಆದೇಶ ಪಾಲನೆ ಮಾಡಬೇಕು ಎಂದು ಐತಿಹಾಸಿಕ ಸ್ಥಳವಾದ ಸ್ವಾತಂತ್ರ್ಯ ಉದ್ಯಾನವನದಲ್ಲಿ ಮತಗಳ್ಳತನದ ವಿರುದ್ಧ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಸಚಿವರು, ಶಾಸಕರು ಹಾಗೂ ಪರಾಜಿತ ಅಭ್ಯರ್ಥಿಗಳು ಸೇರಿದಂತೆ ಬೆಂಗಳೂರು ಹೊರತುಪಡಿಸಿ ಪ್ರತಿ ಜಿಲ್ಲೆಯಿಂದ 50 ಜನ ಕಾರ್ಯಕರ್ತರು ಹಾಗೂ ನಾಯಕರು ಪ್ರತಿಭಟನೆಯಲ್ಲಿ ಭಾಗವಹಿಸಬೇಕು ಎಂದು ತಿಳಿಸಿದ್ದೇವೆ ಎಂದರು.ಇದನ್ನೂ ಓದಿ: ಕಾಶ್ಮೀರಕ್ಕೆ ರಾಜ್ಯದ ಸ್ಥಾನಮಾನ – ಆ.8ರಂದು ಸುಪ್ರೀಂ ಕೋರ್ಟ್ ವಿಚಾರಣೆ

 

Share This Article