ರಾಜ್ಯಪಾಲರ ವಿರುದ್ಧ ರಾಷ್ಟ್ರಪತಿಗಳಿಗೆ ದೂರು ನೀಡಲು ಅವಕಾಶ ಇದೆ: ಸಿಎಂ

Public TV
1 Min Read

ಬೆಂಗಳೂರು: ರಾಜ್ಯಪಾಲರ ವಿರುದ್ಧ ರಾಷ್ಟ್ರಪತಿಗಳಿಗೆ ದೂರು ನೀಡಲು ಅವಕಾಶ ಇದೆ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಹೇಳಿಕೆ ನೀಡಿದ್ದಾರೆ.

ಬೆಂಗಳೂರಿನಲ್ಲಿ (Bengaluru) ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಾಜ್ಯಪಾಲರು ಪ್ರಾಸಿಕ್ಯೂಶನ್‌ಗೆ ಅನುಮತಿ ಕೊಟ್ಟಿರುವುದು ಸಂವಿಧಾನ ಬಾಹಿರ. ರಾಜಭವನ ದುರ್ಬಳಕೆ ಆಗಿದೆ. ರಾಜ್ಯಪಾಲರ ನಡೆಯನ್ನು ಕ್ಯಾಬಿನೆಟ್‌ನಲ್ಲಿ ಖಂಡಿಸಿದ್ದೇವೆ. ಕೋರ್ಟ್‌ನಲ್ಲೂ ಚಾಲೆಂಜ್ ಮಾಡಿದ್ದೇವೆ ಎಂದರು. ಇದನ್ನೂ ಓದಿ: ಮೋದಿ, ಯೋಗಿಯನ್ನು ಹೊಗಳಿದ್ದಕ್ಕೆ ಹೆಂಡತಿ ಮುಖಕ್ಕೆ ಬಿಸಿ ಸಾಂಬಾರ್‌ ಎರಚಿ ತಲಾಖ್‌ ನೀಡಿದ ಪತಿ

ಡಿಸಿಎಂ (DK Shivakumar) ಹಾಗೂ ಕೆಲವು ಸಚಿವರು ನಿನ್ನೆ ದೆಹಲಿಗೆ ಹೋಗಿದ್ದೆವು. ರಾಜ್ಯದ ರಾಜಕೀಯ ಬೆಳವಣಿಗೆಯನ್ನು ಹೈಕಮಾಂಡ್ ಗಮನಕ್ಕೆ ತಂದಿದ್ದೇವೆ. ಮುಡಾ ಪ್ರಕರಣದ ಬಗ್ಗೆ ಚರ್ಚೆ ಮಾಡಿದ್ದೇವೆ. ಕೋರ್ಟ್‌ನಲ್ಲಿ ರಾಜ್ಯಪಾಲರ ಆದೇಶ ಪ್ರಶ್ನಿಸಿ ಅರ್ಜಿ ಹಾಕಲಾಗಿದೆ. ಆ. 29 ತಾರೀಖಿಗೆ ವಿಚಾರಣೆ ಮುಂದೂಡಲಾಗಿದೆ. ಜೊತೆಗೆ ಕಾನೂನು ಹೋರಾಟ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿರುವುದಾಗಿ ತಿಳಿಸಿದರು. ಇದನ್ನೂ ಓದಿ: ಬೆಂಬಲ ಬೆಲೆಯಲ್ಲಿ ಹೆಸರುಕಾಳು, ಸೂರ್ಯಕಾಂತಿ ಖರೀದಿಗೆ ಕೇಂದ್ರದ ಸಮ್ಮತಿ: ಶಿವಾನಂದ ಪಾಟೀಲ್

ಇದೇ ವೇಳೆ ರಾಜ್ಯಪಾಲರು ಬಿಲ್‌ಗಳನ್ನು ವಾಪಸ್ ಕಳುಹಿಸಿರುವ ವಿಚಾರವಾಗಿ ಪ್ರತಿಕ್ರಿಯಿಸಿದ ಸಿಎಂ,  ಕ್ಯಾಬಿನೆಟ್‌ನಲ್ಲಿ ನಾವು ನಿರ್ಣಯ ಮಾಡಿ ಸದನದಲ್ಲಿ ಪಾಸ್ ಆಗಿರುವ ಬಿಲ್‌ಗಳು. ವಿವರಣೆ ಕೇಳಿದರೆ ಕೊಡುತ್ತಿದ್ದೆವು. ಆದರೆ ವಾಪಸ್ ಕಳುಹಿಸಿದ್ದಾರೆ. ಕ್ಯಾಬಿನೆಟ್‌ನಲ್ಲಿ ಚರ್ಚೆ ಮಾಡಿ ತೀರ್ಮಾನ ಮಾಡುತ್ತೇವೆಂದು ಹೇಳಿದರು. ಇದನ್ನೂ ಓದಿ: ನೀರಿನ ದರ ಏರಿಕೆ ಮಾಡ್ತೀವಿ,ಬಸ್ ದರ ಏರಿಕೆ ನಾವು ಎಲ್ಲಿ ಹೇಳಿದ್ದೀವಿ: ಸಿಎಂ ಪ್ರಶ್ನೆ

Share This Article