ಮೈಸೂರಿಗೆ ಆಗಮಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು – ರಾಜ್ಯಪಾಲ, ಸಿಎಂರಿಂದ ಆತ್ಮೀಯ ಸ್ವಾಗತ

Public TV
1 Min Read
Draupadi murmu

ಮೈಸೂರು: ಎರಡು ದಿನಗಳ ಮೈಸೂರು (Mysuru) ಭೇಟಿಗಾಗಿ ಸೋಮವಾರ (ಸೆ.1) ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು (Draupadi Murmu) ಅವರು ಮೈಸೂರಿನ ವಿಮಾನ ನಿಲ್ದಾಣಕ್ಕೆ ಬಂದಿಳಿದರು.

ರಾಷ್ಟ್ರಪತಿ ಮುರ್ಮು ಅವರನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ (Thawar Chand Gehlot) ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ಆತ್ಮೀಯವಾಗಿ ಸ್ವಾಗತಿಸಿದರು. ಬಳಿಕ ವಿಮಾನ ನಿಲ್ದಾಣದಿಂದ ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಯ ವಜ್ರಮಹೋತ್ಸವ ಸಮಾರಂಭದಲ್ಲಿ ಭಾಗವಹಿಸಲು ತೆರಳಿದರು.ಇದನ್ನೂ ಓದಿ: ಶಿವಮೊಗ್ಗ | ಸೆ.6ಕ್ಕೆ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ – ವಾಹನಗಳ ಮಾರ್ಗ ಬದಲಾವಣೆ

ಈ ಸಂದರ್ಭದಲ್ಲಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ರಾಜ್ಯ ಸಚಿವರಾದ ಅನುಪ್ರಿಯಾ ಪಟೇಲ್, ಮೈಸೂರಿನ ಜಿಲ್ಲಾಧಿಕಾರಿ ಜಿ.ಲಕ್ಷ್ಮಿಕಾಂತ ರೆಡ್ಡಿ, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಗೌರವಗುಪ್ತ, ಮೈಸೂರು ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಸೇರಿದಂತೆ ಹಿರಿಯ ಅಧಿಕಾರಿಗಳು ಮತ್ತು ಗಣ್ಯರು ಉಪಸ್ಥಿತರಿದ್ದರು.

ಇನ್ನೂ ಸಮಾರಂಭದ ಬಳಿಕ ರಾಷ್ಟ್ರಪತಿ ಮುರ್ಮು ಅವರು ರ‍್ಯಾಡಿಸನ್ ಬ್ಲೂ ಹೊಟೇಲ್‌ಗೆ ತೆರಳಲಿದ್ದಾರೆ. ರಾತ್ರಿ ಚಾಮುಂಡಿ ಬೆಟ್ಟಕ್ಕೆ (Chamundi Hills) ತೆರಳಿ, ತಾಯಿ ಚಾಮುಂಡೇಶ್ವರಿಯ (Chamudeshwari) ದರ್ಶನ ಪಡೆಯಲಿದ್ದಾರೆ.ಇದನ್ನೂ ಓದಿ: ಅಮಿತ್‌ ಶಾ ಜಮ್ಮು ಕಾಶ್ಮೀರದಲ್ಲಿದ್ದಾಗಲೇ ಒಳನುಸುಳಲು ಯತ್ನ – ಶಂಕಿತ ಉಗ್ರರ ಮೇಲೆ ಗುಂಡಿನ ದಾಳಿ

Share This Article