IOA ಅಧ್ಯಕ್ಷೆ ಪಿ.ಟಿ ಉಷಾ ಪತಿ ಶ್ರೀನಿವಾಸನ್ ನಿಧನ

1 Min Read

ತಿರುವನಂತಪುರಂ: ಭಾರತೀಯ ಒಲಿಂಪಿಕ್ ಅಸೋಸಿಯೇಷನ್ ​​(IOA) ಅಧ್ಯಕ್ಷೆ ಹಾಗೂ ರಾಜ್ಯಸಭಾ ಸದಸ್ಯೆ ಪಿ.ಟಿ. ಉಷಾ (P.T Usha) ಅವರ ಪತಿ ವಿ. ಶ್ರೀನಿವಾಸನ್ (64) (Srinivasan) ನಿಧನರಾಗಿದ್ದಾರೆ.

ಶುಕ್ರವಾರ (ಜ.30) ನಡುರಾತ್ರಿ 1 ಗಂಟೆ ಸುಮಾರಿಗೆ ತಿಕ್ಕೋಡಿ ಪೆರುಮಾಳ್‌ಪುರಂನಲ್ಲಿರುವ ಅವರ ನಿವಾಸದಲ್ಲಿ ಕುಸಿದು ಬಿದ್ದಿದ್ದರು. ಅವರನ್ನು ಹತ್ತಿರದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೂ ಅವರನ್ನು ರಕ್ಷಿಸಲು ಸಾಧ್ಯವಾಗಲಿಲ್ಲ ಕುಟುಂಬಸ್ಥರು ತಿಳಿಸಿದ್ದಾರೆ. ಘಟನೆಯ ಸಮಯದಲ್ಲಿ ಉಷಾ ಅವರು ಮನೆಯಲ್ಲಿ ಇರಲಿಲ್ಲ ಎಂದು ತಿಳಿದು ಬಂದಿದೆ. ಇದನ್ನೂ ಓದಿ: ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಅಜಿತ್‌ ಪವಾರ್‌ ಅಂತ್ಯಕ್ರಿಯೆ

ಶ್ರೀನಿವಾಸನ್ ಅವರು ಕೇರಳದ ಮಲಪ್ಪುರಂ ಜಿಲ್ಲೆಯ ಪೊನ್ನಾನಿಯ ಕುಟ್ಟಿಕ್ಕಾಡ್‌ನ ವೆಂಗಲಿ ಥರಾವದ್‌ನ ನಾರಾಯಣನ್ ಮತ್ತು ಸರೋಜಿನಿ ದಂಪತಿಯ ಪುತ್ರ. ಅವರು ಕೇಂದ್ರ ಕೈಗಾರಿಕಾ ಭದ್ರತಾ ಪಡೆಯಲ್ಲಿ ಡೆಪ್ಯೂಟಿ ಎಸ್‌ಪಿಯಾಗಿ ನಿವೃತ್ತರಾಗಿದ್ದರು. 1991 ರಲ್ಲಿ ದೂರದ ಸಂಬಂಧಿಯಾಗಿದ್ದ ಪಿ.ಟಿ. ಉಷಾ ಅವರನ್ನು ವಿವಾಹವಾಗಿದ್ದರು. ದಂಪತಿಗೆ ಡಾ. ಉಜ್ವಲ್ ವಿಘ್ನೇಶ್ ಎಂಬ ಮಗನಿದ್ದಾನೆ. ಇದನ್ನೂ ಓದಿ: ಅಜಿತ್‌ ಪವಾರ್‌ ವಿಮಾನ ಪತನ ಕೇಸ್‌ನಲ್ಲಿ ಸ್ಫೋಟಕ ಟ್ವಿಸ್ಟ್‌ – ಕೊನೇ ಕ್ಷಣದಲ್ಲಿ ಪೈಲಟ್‌ ಬದಲಾಗಿದ್ದೇಕೆ?

Share This Article