ಸಂಸತ್‌ ಕಟ್ಟಡವನ್ನು ರಾಷ್ಟ್ರಪತಿ ಉದ್ಘಾಟಿಸಲಿ: ಸುಪ್ರೀಂನಲ್ಲಿ ಪಿಐಎಲ್‌ ಸಲ್ಲಿಕೆ

Public TV
1 Min Read

ನವದೆಹಲಿ: ನೂತನ ಸಂಸತ್‌ ಕಟ್ಟಡವನ್ನು (New Parliament Building) ರಾಷ್ಟ್ರಪತಿಗಳಿಂದ (President) ಉದ್ಘಾಟಿಸಲು ನಿರ್ದೇಶನ ನೀಡಬೇಕೆಂದು ಕೋರಿ ಸುಪ್ರೀಂ ಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL) ಸಲ್ಲಿಕೆಯಾಗಿದೆ.

ಕಾಂಗ್ರೆಸ್‌, ಟಿಎಂಸಿ, ಆಪ್‌, ಜೆಡಿಯು ಸೇರಿದಂತೆ 20 ವಿರೋಧ ಪಕ್ಷಗಳು ಬಹಿಷ್ಕಾರ ಹಾಕಿದ ಬೆನ್ನಲ್ಲೇ ಸುಪ್ರೀಂನಲ್ಲಿ (Supreme Court) ಅರ್ಜಿ ಸಲ್ಲಿಕೆಯಾಗಿದೆ.

ರಾಷ್ಟ್ರಪತಿ ಅವರಿಂದ ಉದ್ಘಾಟನೆ ಮಾಡದೇ ಪ್ರಧಾನಿ ಮೋದಿ (PM Narendra Modi) ಉದ್ಘಾಟಿಸುತ್ತಿರುವುದು ಸಂವಿಧಾನಕ್ಕೆ ಮಾಡುತ್ತಿರುವ ಅವಮಾನ ಎಂದು ವಕೀಲ ಸಿಆರ್ ಜಯ ಸುಕಿನ್ ತಮ್ಮ ಅರ್ಜಿಯಲ್ಲಿ  ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: New Parliament Building – ಕರ್ನಾಟಕ ವಿಧಾನಸೌಧದ ಉದಾಹರಣೆ ನೀಡಿ ಕಾಂಗ್ರೆಸ್‌ಗೆ ಸಂಬಿತ್‌ ಪಾತ್ರ ತಿರುಗೇಟು

ಯಾವುದೇ ಸದನವನ್ನು ಕರೆಯುವ ಮತ್ತು ಮುಂದೂಡುವ ಅಧಿಕಾರ ರಾಷ್ಟ್ರಪತಿಗಳಿಗೆ ಇದೆ. ಸಂಸತ್ತು ಅಥವಾ ಲೋಕಸಭೆಯನ್ನು ವಿಸರ್ಜಿಸುವ ಅಧಿಕಾರ ರಾಷ್ಟ್ರಪತಿಗಳಿಗೆ ಇರುವುದರಿಂದ ಅವರಿಂದಲೇ ಲೋಕಾರ್ಪಣೆ ಮಾಡಬೇಕೆಂದು ಮನವಿ ಮಾಡಲಾಗಿದೆ.

ರಾಷ್ಟ್ರಪತಿ ಸಂಸತ್ತಿನ ಅವಿಭಾಜ್ಯ ಅಂಗ. ಶಿಲಾನ್ಯಾಸ ಸಮಾರಂಭದಿಂದ ರಾಷ್ಟ್ರಪತಿಯನ್ನು ದೂರವಿಟ್ಟಿದ್ದು ಏಕೆ? ಈಗ ಉದ್ಘಾಟನಾ ಸಮಾರಂಭಕ್ಕೆ ರಾಷ್ಟ್ರಪತಿಯವರನ್ನು ಆಹ್ವಾನಿಸುತ್ತಿಲ್ಲ. ಸರಕಾರದ ಈ ನಿರ್ಧಾರ ಸರಿಯಲ್ಲ ಎಂದು ದೂರಲಾಗಿದೆ. ಲೋಕಸಭಾ ಸಚಿವಾಲಯ, ಗೃಹ ಸಚಿವಾಲಯ, ಕಾನೂ ಸಚಿವಲಯಗಳನ್ನು ಅರ್ಜಿದಾರರು ಈ ಪ್ರಕರಣದಲ್ಲಿ ಪಾರ್ಟಿ ಮಾಡಿದ್ದಾರೆ.

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರ ಆಹ್ವಾನದ ಮೇರೆಗೆ ಪ್ರಧಾನಿ ಮೋದಿ ಅವರು ಮೇ 28 ರಂದು ಹೊಸ ಸಂಸತ್ ಕಟ್ಟಡವನ್ನು ಉದ್ಘಾಟಿಸಲಿದ್ದಾರೆ.

Share This Article