ಹಿಂದಿನ ಸರ್ಕಾರಗಳದ್ದು ಕೇವಲ ವೋಟು ಬ್ಯಾಂಕ್‌ ರಾಜಕಾರಣ, ನಮ್ಮ ಆದ್ಯತೆ ವಿಕಾಸ: ಮೋದಿ

Public TV
2 Min Read

ಯಾದಗಿರಿ: ಹಿಂದಿನ ಸರ್ಕಾರಗಳು ಕೇವಲ ಮತ ರಾಜಕಾರಣ (Vote Bank Politics) ಮಾತ್ರ ಮಾಡುತ್ತಿದ್ದವು. ಆದರೆ ನಮ್ಮ ಸರ್ಕಾರದ ಪ್ರಾಧಾನ್ಯತೆ ವಿಕಾಸ. ವಿಕಾಸ ಆದಂತೆ ಉತ್ತರ ಕರ್ನಾಟಕ ಅಭಿವೃದ್ಧಿಯಾಗುತ್ತದೆ ಎಂದು ಹೇಳುವ ಮೂಲಕ ಪರೋಕ್ಷವಾಗಿ ಕಾಂಗ್ರೆಸ್‌ ಸರ್ಕಾರ ವಿರುದ್ಧ ಪ್ರಧಾನಿ ನರೇಂದ್ರ ಮೋದಿ (PM Narendra Modi) ವಾಗ್ದಾಳಿ ನಡೆಸಿದ್ದಾರೆ.

ಕೊಡೆಕಲ್‍ನಲ್ಲಿ ನಾರಾಯಣಪುರ ಎಡದಂಡೆ ಕಾಲುವೆಗೆ 2500 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಸ್ವಯಂಚಾಲಿತ ಸ್ಕಾಡಾ ಗೇಟ್ ಲೋಕಾರ್ಪಣೆ, ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆ, ಸೂರತ್-ಚೆನ್ನೈ ಎಕ್ಸ್‌ಪ್ರೆಸ್‌ವೇಗೆ ಮೋದಿ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.

ಡಬಲ್‌ ಎಂಜಿನ್‌ ಸರ್ಕಾರ ಇದ್ದರೆ ಡಬಲ್‌ ಅಭಿವೃದ್ದಿ, ಎಲ್ಲರ ಕಲ್ಯಾಣವಾಗುತ್ತದೆ. ಕೇಂದ್ರ ಸರ್ಕಾರ ಪಿಎಂ ಕಿಸಾನ್‌ ಜಾರಿಗೆ ತಂದಿದೆ. ಈ ನಿಧಿಗೆ ರಾಜ್ಯ ಸರ್ಕಾರ 4 ಸಾವಿ ರೂ. ನೀಡುತ್ತಿದೆ. ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂದರ್ಭದಲ್ಲಿ ಯೋಜನೆಗಳಿಂದ ವಂಚಿತರಾದವರಿಗೆ ನಮ್ಮ ಸರ್ಕಾರ ಸಹಾಯ ಮಾಡುತ್ತದೆ ಎಂದರು. ಇದನ್ನೂ ಓದಿ: ಹಳೇ ಮೈಸೂರಿನಲ್ಲಿ ಅಮಿತ್ ಶಾ ಸೂತ್ರ – ಕಲ್ಯಾಣ ಕರ್ನಾಟಕದಲ್ಲಿ ಮೋದಿ ಮೋಡಿ

3.5 ವರ್ಷಗಳ ಹಿಂದೆ ಜಲ ಜೀವನ್ ಮಿಷನ್ ಪ್ರಾರಂಭವಾದಾಗ, 18 ಕೋಟಿ ಗ್ರಾಮೀಣ ಕುಟುಂಬಗಳಲ್ಲಿ 3 ಕೋಟಿ ಗ್ರಾಮೀಣ ಕುಟುಂಬಗಳು ಮಾತ್ರ ನಲ್ಲಿ ನೀರಿನ ಸಂಪರ್ಕವನ್ನು ಹೊಂದಿದ್ದವು. ಇಂದು ದೇಶದ ಸುಮಾರು 11 ಕೋಟಿ ಗ್ರಾಮೀಣ ಕುಟುಂಬಗಳು ನಲ್ಲಿ ನೀರಿನ ಸಂಪರ್ಕ ಪಡೆದಿವೆ ಎಂದು ತಿಳಿಸಿದರು.

ಹಿಂದಿನ ಸರ್ಕಾರಗಳಲ್ಲಿ ಯೋಜನೆಯ ಕಾಮಗಾರಿ ಆರಂಭಗೊಂಡು ದಶಕಗಳೇ ಕಳೆದರು ಅದು ಪೂರ್ಣಗೊಳ್ಳುತ್ತಿರಲಿಲ್ಲ. ಆದರೆ ನಮ್ಮ ಅವಧಿಯಲ್ಲಿ ಕಾಮಗಾರಿ ಆರಂಭಗೊಂಡು ಪೂರ್ಣಗೊಳ್ಳುತ್ತದೆ. ಸೂರತ್‌ ಚೆನ್ನೈ ಎಕ್ಸ್‌ಪ್ರೆಸ್‌ ವೇ ಈ ಭಾಗದಲ್ಲಿ ಹಾದು ಹೋಗುತ್ತದೆ. ಇದರಿಂದ ವ್ಯವಹಾರ, ಸಾರಿಗೆ ಸಂಪರ್ಕ ಹೆಚ್ಚಾಗಿ ಜಿಲ್ಲೆಗಳಿಗೆ ನೆರವಾಗಲಿದೆ. ಹಿಂದೆ ಉಳಿದಿರುವ ಉತ್ತರ ಕರ್ನಾಟಕದ ಜಿಲ್ಲೆಗಳನ್ನು ಅಭಿವೃದ್ಧಿ ಮಾಡುವುದೇ ಡಬಲ್‌ ಎಂಜಿನ್‌ ಸರ್ಕಾರದ ಆಶಯ ಎಂದು ಹೇಳಿದರು.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

Share This Article
Leave a Comment

Leave a Reply

Your email address will not be published. Required fields are marked *