ಬೆಲೆ ಏರಿಕೆ ವಿರುದ್ಧ ಅಸಮಾಧಾನ – ಖಾಲಿ ಸಿಲಿಂಡರ್ ಪ್ರದರ್ಶನ

Public TV
1 Min Read

ಮಡಿಕೇರಿ: ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ಖಂಡಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಹಿಳಾ ಘಟಕ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು.

ಮಡಿಕೇರಿ ನಗರದ ಇಂದಿರಾಗಾಂಧಿ ವೃತ್ತದಲ್ಲಿ ಖಾಲಿ ಸಿಲಿಂಡರ್ ಗಳನ್ನು ಪ್ರದರ್ಶಿಸಿ ಅಸಮಾಧಾನ ವ್ಯಕ್ತಪಡಿಸಿದ ಮಹಿಳಾ ಕಾಂಗ್ರೆಸ್ಸಿಗರು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಘೋಷಣೆಗಳನ್ನು ಕೂಗಿದರು. ಕೋವಿಡ್ ಸಂದಿಗ್ಧ ಪರಿಸ್ಥಿತಿಯಲ್ಲಿ ಅಗತ್ಯ ವಸ್ತುಗಳ ಬೆಲೆಯನ್ನು ಇಳಿಕೆ ಮಾಡಿ ಜನಸಾಮಾನ್ಯರಿಗೆ ನೆರವಾಗುವ ಬದಲು ಸರ್ಕಾರ ಗಾಯದ ಮೇಲೆ ಬರೆ ಎಳೆದಿದೆ ಎಂದು ವಿಧಾನ ಪರಿಷತ್ ಸದಸ್ಯೆ ಶಾಂತೆಯಂಡ ವೀಣಾಅಚ್ಚಯ್ಯ ಆರೋಪಿಸಿದರು. ಇದನ್ನೂ ಓದಿ: ರಸ್ತೆ ಬಿಟ್ಟು ಮನೆ ಛಾವಣಿ ಹತ್ತಿ ನಿಂತ ಆಟೋ!

ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಸುರಯ್ಯ ಅಬ್ರಾರ್ ಮಾತನಾಡಿ, ಬೆಲೆ ಏರಿಕೆಯನ್ನು ನಿಯಂತ್ರಿಸಬೇಕೆಂದು ಒತ್ತಾಯಿಸಿದರು. ನಗರಾಧ್ಯಕ್ಷೆ ಹೊಟ್ಟೆಯಂಡ ಫ್ಯಾನ್ಸಿ ಪಾರ್ವತಿ ಬೆಲೆ ಏರಿಕೆ ಕ್ರಮವನ್ನು ಖಂಡಿಸಿದರು. ಮಾಜಿ ಸಚಿವೆ ಸುಮಾ ವಸಂತ್, ನಗರಸಭಾ ಮಾಜಿ ಅಧ್ಯಕ್ಷೆ ಕಾವೇರಮ್ಮ ಸೋಮಣ್ಣ, ಮಹಿಳಾ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಿನಾಜ್ ಪ್ರವೀಣ್, ಕೆಪಿಸಿಸಿ ಪ್ರಮುಖರಾದ ಟಿ.ಪಿ.ರಮೇಶ್, ಶಾಹಿದ್ ತೆಕ್ಕಿಲ್, ಜಿಲ್ಲಾ ಸಮಿತಿಯ ಹನೀಫ್ ಮಡಿಕೇರಿ, ಯುವ ಘಟಕದ ಹನೀಫ್ ಸಂಪಾಜೆ, ಸಾಮಾಜಿಕ ಜಾಲತಾಣದ ಜಿಲ್ಲಾಧ್ಯಕ್ಷ ಸೂರಜ್ ಹೊಸೂರು, ಜಿ.ಪಂ, ತಾ.ಪಂ ಮಾಜಿ ಸದಸ್ಯರುಗಳು ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಇದನ್ನೂ ಓದಿ: ಮೂರು ದಿನದಿಂದ ರಸ್ತೆ ಮಧ್ಯದಲ್ಲೇ ಕೆಟ್ಟು ನಿಂತ ಬಸ್ – ವಾಹನ ಸವಾರರ ಪರದಾಟ

Share This Article
Leave a Comment

Leave a Reply

Your email address will not be published. Required fields are marked *