ಬೀದರ್ ಏರ್‌ಬೇಸ್‌ಗೆ ಆಗಮಿಸಿದ ಪ್ರಧಾನಿ ಮೋದಿ

By
1 Min Read

ಬೀದರ್‌: ತೆಲಂಗಾಣದಲ್ಲಿ ವಿಧಾನಸಭಾ ಚುನಾವಣೆ (Telangana Assembly Election) ಹಿನ್ನೆಲೆ ಇಂದು ಬೀದರ್ ಏರ್ ಬೇಸ್‌ಗೆ ಪ್ರಧಾನಿ ನರೇಂದ್ರ ಮೋದಿ (PM Narendra Modi) ಆಗಮಿಸಿದರು.

ದೆಹಲಿಯಿಂದ ವಿಶೇಷ ವಿಮಾನದ ಮೂಲಕ ಬೀದರ್‌ಗೆ ಆಗಮಿಸಿದ ಮೋದಿ ಅವರನ್ನು ಹೂಗುಚ್ಛ ನೀಡಿ ಸ್ಥಳೀಯ ‌ಬಿಜೆಪಿ‌ ಮುಖಂಡರು (BJP Leaders) ಸ್ವಾಗತಿಸಿದರು.

 

ಕೇಂದ್ರ ಸಚಿವ ಭಗವಂತ್ ಖೂಬಾ, ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ, ಮಾಜಿ ಸಚಿವ ಪ್ರಭು ಚವ್ಹಾಣ್ ಜೊತೆ ಇಬ್ಬರು ಬಿಜೆಪಿ ಶಾಸಕರು ಮೋದಿ ಅವರನ್ನು ಸ್ವಾಗತಿಸಿದರು. ಇದನ್ನೂ ಓದಿ: Asian Games 2023: ಚೊಚ್ಚಲ ಅಂತಾರಾಷ್ಟ್ರೀಯ T20 ಶತಕ ಸಿಡಿಸಿ ಗಿಲ್‌ ದಾಖಲೆ ಮುರಿದ ಯಶಸ್ವಿ

ಬೀದರ್ ಏರ್‌ಬೇಸ್‌ನಿಂದ ಹೆಲಿಕಾಪ್ಟರ್ ಮೂಲಕ ತೆಲಂಗಾಣದ ನಿಜಾಮಾಬಾದ್‌ಗೆ ಮೋದಿ ತೆರಳಿ ನಂತರ ಬಿಜೆಪಿಯ ವೇದಿಕೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಕಾರ್ಯಕ್ರಮದ ಬಳಿಕ ಸಂಜೆ ಬೀದರ್ ಏರ್‌ಬೇಸ್‌ಗೆ ಆಗಮಿಸಿ ವಿಶೇಷ ವಿಮಾನದ ಮೂಲಕ ದೆಹಲಿಗೆ ಪ್ರಯಾಣ ಮಾಡಲಿದ್ದಾರೆ.

ಮೋದಿ ಆಗಮನ ಹಿನ್ನೆಲೆ ಜಿಲ್ಲೆಯಲ್ಲಿ ಪೊಲೀಸರು ಬಿಗಿ ಭದ್ರತೆಯನ್ನು ಕೈಗೊಂಡಿದ್ದು, 4 ಎಸ್‌ಪಿಗಳು, 7  ಡಿಎಸ್‌ಪಿ, 9  ಸಿಪಿಐ, 21  ಪಿಎಸ್‌ಐ ಹಾಗೂ 500ಕ್ಕೂ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ.

 

Web Stories

Share This Article
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್