ಒಡಿಶಾ ರೈಲು ದುರಂತ ಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ

Public TV
1 Min Read

ಭುವನೇಶ್ವರ್: ಒಡಿಶಾದ ಬಾಲಸೋರ್ ನಲ್ಲಿ ನಡೆದ ಭೀಕರ ರೈಲು ದುರಂತ ನಡೆದ ಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿ (Narendra Modi) ಯವರು ಭೇಟಿ ನೀಡಿದ್ದಾರೆ.

ಗಾಯಾಳುಗಳು ದಾಖಲಾಗಿರುವ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ. ಇದನ್ನೂ ಓದಿ: ಭಾರತದಲ್ಲಿ ಭೀಕರ ರೈಲು ದುರಂತ ಕಂಡು ತುಂಬಾ ದುಃಖವಾಗಿದೆ – ಪಾಕಿಸ್ತಾನ, ತಾಲಿಬಾನ್‌ ಸಂತಾಪ

ಒಡಿಶಾದ ಬಾಲಸೋರ್ (Odisha Balasore) ಜಿಲ್ಲೆಯ ಬಹನಾಗಾ ರೈಲು ನಿಲ್ದಾಣದ ಬಳಿ ನಡೆದ ಎಕ್ಸ್ ಪ್ರೆಸ್ ರೈಲು ಭೀಕರ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ ಏರಿಕೆಯಾಗುತ್ತಲೇ ಇದ್ದು, ಸಾವಿನ ಸಂಖ್ಯೆ 300ಕ್ಕೆ ಏರಿಕೆಯಾಗಿದೆ.

ರೈಲು ಅಪಘಾತದಲ್ಲಿ ಸುಮಾರು ಒಂದು ಸಾವಿರಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದು, ಘಟನಾ ಸ್ಥಳಕ್ಕೆ ಪ್ರಧಾನಿ ಮೋದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಪ್ರಧಾನಿಯವರಿಗೆ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಮತ್ತು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಸಾಥ್ ನೀಡಿದರು.

Share This Article